ಬ್ರೇಕಿಂಗ್ ನ್ಯೂಸ್
31-01-26 11:05 pm Bangalore Correspondent ಕರ್ನಾಟಕ
ಬೆಂಗಳೂರು, ಜ.31: ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ ರಾಯ್ ಅಕಾಲಿಕ ನಿಧನ ಉದ್ಯಮ ಲೋಕಕ್ಕೆ ಆಘಾತ ನೀಡಿದೆ. ಇದರ ಬೆನ್ನಲ್ಲೇ, ಕಾಫಿ ಡೇ ಸಂಸ್ಥಾಪಕ ಸಿದ್ಧಾರ್ಥ್ ಸಾವಿಗೂ ತೆರಿಗೆ ದಾಳಿಗಳೇ ಕಾರಣ ಎಂದು ಉದ್ಯಮಿ ಮೋಹನದಾಸ್ ಪೈ ಹೇಳಿದ್ದಾರೆ. ತೆರಿಗೆ ಅಧಿಕಾರಿಗಳ ದಾಳಿಗಳಿಂದ ತೆರಿಗೆದಾರರನ್ನು ರಕ್ಷಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಉದ್ಯಮಿ ಮೋಹನದಾಸ್ ಪೈ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರೇ ದಯವಿಟ್ಟು ಉದ್ಯಮಿ ಸಾವಿನ ಬಗ್ಗೆ ಪಾರದರ್ಶಕ ತನಿಖೆ ನಡೆಸಿ. ತೆರಿಗೆ ಭಯೋತ್ಪಾದನೆ ವರದಿಯಿಂದಾಗಿ ಕಾಫಿ ಡೇ ಸಂಸ್ಥಾಪಕ ಸಿದ್ಧಾರ್ಥ್ ಅವರನ್ನು ನಾವು ಕಳೆದುಕೊಂಡಿದ್ದೇವೆ. ತೆರಿಗೆ ಅಧಿಕಾರಿಗಳಿಂದ ಹಲವಾರು ಜನರು ಭಯಭೀತರಾಗಿದ್ದಾರೆ. ಇದು ನಾಗರಿಕ ಹಕ್ಕುಗಳ ಮೇಲಿನ ದಾಳಿಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ಮೋದಿಯವರೇ ದಯವಿಟ್ಟು ತೆರಿಗೆ ಪಾವತಿದಾರರನ್ನು ಈ ರೀತಿಯ ದಾಳಿಯಿಂದ ರಕ್ಷಿಸಿ. ಇಡೀ ದಾಳಿ ಪ್ರಕ್ರಿಯೆ ತುಂಬಾ ಕ್ರೂರವಾಗಿದೆ. ನಮ್ಮ ಹಣಕಾಸು ಸಚಿವರು ಅಂತಹ ಅಧಿಕಾರಿಗಳಿಗೆ ಹೆಚ್ಚು ಹೆಚ್ಚು ಅಧಿಕಾರಗಳನ್ನು ನೀಡುತ್ತಿದ್ದಾರೆ. ಆದರೆ, ನಾಗರಿಕರ ರಕ್ಷಣೆ ಎಲ್ಲಿದೆ? ತಪ್ಪು ದಾಳಿಗೆ ಅಧಿಕಾರಿಗಳಿಗೆ ಶಿಕ್ಷೆಯಾಗಿದೆಯೇ? ಎಂದು ಪ್ರಶ್ನೆ ಮಾಡಿದ್ದಾರೆ.
ಕಳೆದ 3 ವರ್ಷಗಳಲ್ಲಿ ನೇರ ತೆರಿಗೆಗಳ ಮೂಲಕ 72 ಲಕ್ಷ ಕೋಟಿ ರೂ.ಗಳನ್ನು ಸಂಗ್ರಹಿಸಲಾಗಿದೆಯೇ? ಇಂತಹ ದಾಳಿಗಳ ಮೂಲಕ ಎಷ್ಟು ಸಂಗ್ರಹಿಸಲಾಗಿದೆ? ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಾಗಿ ಎಷ್ಟು ಮೊತ್ತ ಸಿಲುಕಿಕೊಂಡಿದೆ? ಪೂರ್ಣ ಮಾಹಿತಿಗಳನ್ನು ನೀಡಬೇಕು. ದಯವಿಟ್ಟು ತೆರಿಗೆ ಪಾವತಿದಾರರನ್ನು ರಕ್ಷಿಸಿ ಎಂದು ಪ್ರಧಾನಿಗಳಿಗೆ ಪೈ ಮನವಿ ಮಾಡಿದ್ದಾರೆ.
Minister @nsitharaman please have a Full Open Transparent Inquiry on this. We lost Siddarth founder of Coffee day to reported tax terrorism. Too many people are terrified by tax officials- an assault on citizen rights-No way to govern our country. PM @narendramodi Sir, please… https://t.co/ILlqDWEUgg
— Mohandas Pai (@TVMohandasPai) January 31, 2026
The sudden demise of Confident Group Chairman C.J. Roy has sparked fresh debate over alleged excesses during tax investigations. Entrepreneur Mohandas Pai has called upon Prime Minister Narendra Modi and Finance Minister Nirmala Sitharaman to ensure protection for taxpayers and order a transparent probe into the incident.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm