ಬ್ರೇಕಿಂಗ್ ನ್ಯೂಸ್
02-02-26 03:02 pm HK News Desk ಕರ್ನಾಟಕ
ತುಮಕೂರು, ಫೆ.2 : ಸಿನಿಮಾ ಕಥೆಯಂತಿರುವ ನೈಜ ಘಟನೆಯೊಂದು ತುಮಕೂರು ನಗರದಲ್ಲಿ ನಡೆದಿದೆ. ಶ್ರೀಮಂತ ಉದ್ಯಮಿಯೊಬ್ಬರ ಮಗಳು, ಮದುವೆಗೆ ಸಂಬಂಧಿಸಿದ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿದ್ದರೂ, ಮನೆಯ ಪಾರ್ಟ್ ಟೈಂ ವಾಹನ ಚಾಲಕನೊಂದಿಗೆ ಓಡಿಹೋಗಿ ಮದುವೆಯಾಗಿರುವ ಘಟನೆ ಕುಟುಂಬವನ್ನೇ ಬೆಚ್ಚಿಬೀಳಿಸಿದೆ.
ತುಮಕೂರು ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಪ್ರಕರಣದಲ್ಲಿ, ನಗರದ ಉದ್ಯಮಿಯೊಬ್ಬರ ಮಗಳಿಗೆ ಅವರದೇ ಮನೆಯಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ರವೀಶ ಎಂಬಾತನೊಂದಿಗೆ ಪ್ರೇಮಾಂಕುರವಾಗಿತ್ತು. ಈ ವಿಚಾರ ಕುಟುಂಬದವರಿಗೆ ತಿಳಿದು ಎಚ್ಚರಿಕೆ ನೀಡಲಾಗಿತ್ತು. ಈ ನಡುವೆ ಕುಟುಂಬದವರು ಹಿಂದಿನಿಂದ ನಿಶ್ಚಯಿಸಿದ್ದಂತೆ, ಯುವತಿಯ ಮಾವನ ಮಗನೊಂದಿಗೆ ಮದುವೆ ನಿಶ್ಚಯಿಸಿ, ನಿಶ್ಚಿತಾರ್ಥ ಮುಗಿಸಿದ್ದರು. ಮದುವೆ ಆಹ್ವಾನ ಪತ್ರಿಕೆ ಹಂಚಿಕೆ, ಹಾಲ್ ಬುಕ್ಕಿಂಗ್, ಊಟ ಹಾಗೂ ಅಲಂಕಾರ ವ್ಯವಸ್ಥೆ ಸೇರಿದಂತೆ ಎಲ್ಲಾ ಸಿದ್ಧತೆಗಳು ನಡೆಯುತ್ತಿವೆ.
ಆದರೆ ಮದುವೆಗೆ ಇನ್ನೊಂದು ತಿಂಗಳು ಬಾಕಿ ಇರುವಾಗಲೇ, ಜನವರಿ 19ರಂದು ಯುವತಿ ಮನೆ ಬಿಟ್ಟು ರವೀಶನೊಂದಿಗೆ ಪರಾರಿಯಾಗಿದ್ದಾಳೆ. ಇಬ್ಬರೂ ಚಿಕ್ಕನಾಯಕನಹಳ್ಳಿಯಲ್ಲಿ ಮದುವೆಯಾಗಿರುವುದು ನಂತರ ಬೆಳಕಿಗೆ ಬಂದಿದೆ. ಮಗಳು ಕಾಣೆಯಾಗಿರುವ ಹಿನ್ನೆಲೆ ಕುಟುಂಬಸ್ಥರು ತುಮಕೂರು ನಗರ ಠಾಣೆಗೆ ದೂರು ನೀಡಿದ್ದರು. ಈ ವೇಳೆ, ಯುವತಿಯೇ ಪೊಲೀಸರ ಮುಂದೆ ಹಾಜರಾಗಿ, “ಕುಟುಂಬದವರಿಂದ ಬೆದರಿಕೆ ಇದೆ. ನನಗೆ ರಕ್ಷಣೆ ಬೇಕು” ಎಂದು ಕೇಳಿಕೊಂಡಿದ್ದಾಳೆ.
ಯುವತಿ ಆರೋಪಗಳಿಗೆ ಪ್ರತಿಕ್ರಿಯಿಸಿದ ಆಕೆಯ ಸಹೋದರ, “ಅವಳ ಇಚ್ಛೆಗೆ ವಿರುದ್ಧವಾಗಿ ಮದುವೆ ನಿಶ್ಚಯಿಸಿಲ್ಲ. ಅವಳ ಒಪ್ಪಿಗೆಯೊಂದಿಗೆ ಚಿನ್ನಾಭರಣ, ಸೀರೆ ಖರೀದಿ ಹಾಗೂ ಮದುವೆ ಕಾರ್ಡ್ ಮುದ್ರಣ ಮಾಡಲಾಗಿತ್ತು. ತಾಯಿಯ ಆರೋಗ್ಯ ಸಮಸ್ಯೆಯ ನಡುವೆಯೂ ಮದುವೆ ಸಿದ್ಧತೆಗಾಗಿ ಓಡಾಡುತ್ತಿದ್ದೆವು. ಮದುವೆ ಇಷ್ಟವಿಲ್ಲ ಎಂದು ಹೇಳಬಹುದಿತ್ತು. ಈ ರೀತಿಯ ನಡೆ ನಮಗೆ ಆಘಾತ ತಂದಿದೆ” ಎಂದು ತಿಳಿಸಿದ್ದಾರೆ.
ಯುವತಿ ಕಾಣೆಯಾದ ಕುರಿತು ಪ್ರಕರಣ ದಾಖಲಾದ ಬಳಿಕ, ಪ್ರೇಮಿಗಳು ಮದುವೆಯಾಗಿರುವುದು ದೃಢಪಟ್ಟಿದೆ. ಕುಟುಂಬಸ್ಥರಿಂದ ಬೆದರಿಕೆ ಆರೋಪ ಇರುವ ಹಿನ್ನೆಲೆಯಲ್ಲಿ, ಪೊಲೀಸರ ಮಧ್ಯಸ್ಥಿಕೆಯಲ್ಲಿ ರಾಜಿ ಸಂಧಾನ ನಡೆಯಿತು. ಎರಡೂ ಕಡೆಯ ಕುಟುಂಬಗಳು ಒಪ್ಪಿಗೆ ಸೂಚಿಸಿ, ಖುಲಾಸೆ ಪತ್ರಗಳಿಗೆ ಸಹಿ ಹಾಕಿದ ಬಳಿಕ ಪ್ರಕರಣವನ್ನು ಮುಕ್ತಾಯಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
In a real-life story resembling a film plot, a wealthy businessman’s daughter eloped with her part-time family driver just a month before her wedding. Despite being engaged to her cousin and with all wedding preparations completed, the woman reportedly left home on January 19 and married the driver, Ravish, in Chikkanayakanahalli.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am