ಬ್ರೇಕಿಂಗ್ ನ್ಯೂಸ್
15-02-26 10:38 pm HK News Desk ಕರ್ನಾಟಕ
ಬೆಂಗಳೂರು, ಫೆ.15: ಎರಡನೇ ಮಗುವನ್ನು ಬರಮಾಡಿಕೊಳ್ಳುವ ಸಂತಸದ ಕ್ಷಣವನ್ನು ಸಂಭ್ರಮಿಸಲು ತೆರಳಿದ್ದ ದಂಪತಿಗೆ ದುರಂತ ಎದುರಾಗಿದೆ. ಎರಡನೇ ಮಗುವಿನ ಗರ್ಭ ಧರಿಸಿದ್ದ ಪತ್ನಿಯ ಪ್ರೆಗ್ನೆನ್ಸಿ ಫೋಟೋಶೂಟ್ ವೇಳೆ ಅವರ ಮೂರು ವರ್ಷದ ಮೊದಲ ಮಗು ನೀರಿನ ಪೂಲ್‌ಗೆ ಬಿದ್ದು ಸಾವನ್ನಪ್ಪಿದ ದಾರುಣ ಘಟನೆ ಬೆಂಗಳೂರು ಉತ್ತರ ತಾಲೂಕಿನ ಗಿಡ್ಡೆನಹಳ್ಳಿಯಲ್ಲಿ ನಡೆದಿದೆ.
ಎರಡನೇ ಮಗುವಿನ ಆಗಮನದ ಖುಷಿಯಲ್ಲಿ ದಂಪತಿ ಫೋಟೋಶೂಟ್ ವ್ಯವಸ್ಥೆ ಮಾಡಿಕೊಂಡಿದ್ದರು. ಫೋಟೋ ಶೂಟ್ ನಡೆಯುತ್ತಿದ್ದ ಸಂದರ್ಭದಲ್ಲಿ ಮಗುವನ್ನು ಸಮೀಪದಲ್ಲೇ ಆಟವಾಡಲು ಬಿಡಲಾಗಿತ್ತು. ಈ ವೇಳೆ ಗಮನಿಸದ ಕಾರಣ ಮಗು ಅಲ್ಲೇ ಇದ್ದ ಸಣ್ಣ ನೀರಿನ ಪೂಲ್‌ಗೆ ಬಿದ್ದಿದ್ದು, ಕೆಲ ಹೊತ್ತಿನ ಬಳಿಕ ಘಟನೆ ಬೆಳಕಿಗೆ ಬಂದಿದೆ.
ತಕ್ಷಣ ಮಗುವನ್ನು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ದರೂ, ಆಗಲೇ ಮಗು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಈ ಘಟನೆ ಕುಟುಂಬದವರನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ಮೃತದೇಹವನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A joyful maternity photoshoot celebrating a couple’s second pregnancy ended in tragedy after their three-year-old son drowned in a water pool in Giddenahalli, Bengaluru North Taluk.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am