ಬ್ರೇಕಿಂಗ್ ನ್ಯೂಸ್
20-02-26 09:20 pm HK News Desk ಕರ್ನಾಟಕ
ಹಾಸನ,ಫೆ 20: ವರ್ಷಕ್ಕೊಮ್ಮೆ ಮಾತ್ರ ದರ್ಶನ ಭಾಗ್ಯ ಕರುಣಿಸುವ ಶಕ್ತಿದೇವತೆ ಹಾಸನಾಂಬೆ ದೇವಸ್ಥಾನ ಉತ್ಸವ ಈ ಬಾರಿ ಭ್ರಷ್ಟಾಚಾರದ ಆರೋಪಗಳಿಂದ ಸುದ್ದಿಯಲ್ಲಿದೆ. ಕಳೆದ ವರ್ಷ ಲಕ್ಷಾಂತರ ಭಕ್ತರು ಹರಿದುಬಂದಿದ್ದ ಉತ್ಸವದ ವಿದ್ಯುತ್ ದೀಪಾಲಂಕಾರ ಟೆಂಡರ್‌ನಲ್ಲಿ ಭಾರೀ ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಆರ್‌ಟಿಐ ಕಾರ್ಯಕರ್ತ ಮನು ನೀಡಿದ ದೂರಿನ ಮೇರೆಗೆ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿ ತನಿಖೆ ನಡೆಸಿದರು. ಲೋಕಾಯುಕ್ತ ಅಧಿಕಾರಿ ಗಾಯಿತ್ರಿ ದೂರುದಾರ ಮನು ಸಮ್ಮುಖದಲ್ಲೇ ಮಹಾನಗರ ಪಾಲಿಕೆ ಇಂಜಿನಿಯರ್ ಸುಜಾತಾ ಹಾಗೂ ನಿವೃತ್ತ ಇಂಜಿನಿಯರ್ ರಂಗಸ್ವಾಮಿ ಅವರನ್ನು ವಿಚಾರಣೆ ನಡೆಸಿ ಸಂಪೂರ್ಣ ಮಾಹಿತಿ ಕಲೆಹಾಕಿದರು.
ಮುಜರಾಯಿ ಇಲಾಖೆಯ ಗ್ರೇಡ್-ಒನ್ ದೇವಾಲಯವಾಗಿರುವ ಹಾಸನಾಂಬೆ ದೇವಸ್ಥಾನದಲ್ಲಿ ಪ್ರತಿ ವರ್ಷವೂ ಒಬ್ಬನೇ ಗುತ್ತಿಗೆದಾರನಿಗೆ ದೀಪಾಲಂಕಾರ ಟೆಂಡರ್ ನೀಡಲಾಗುತ್ತಿದೆ ಎಂಬ ಆರೋಪ ಇದೆ. ವಿದ್ಯುತ್ ದೀಪಾಲಂಕಾರಕ್ಕೆ ಹಲವು ಗುತ್ತಿಗೆದಾರರು ಅರ್ಜಿ ಸಲ್ಲಿಸಿದ್ದರೂ, ನಿಯಮ ಪಾಲನೆ ಮಾಡದೆ ಒಬ್ಬರಿಗೇ ಅನುಕೂಲ ಮಾಡಿಕೊಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ದೀಪಾಲಂಕಾರದಲ್ಲೇ 15 ಲಕ್ಷಕ್ಕೂ ಅಧಿಕ ಮೊತ್ತದ ಅವ್ಯವಹಾರ ನಡೆದಿರುವ ಶಂಕೆ ವ್ಯಕ್ತವಾಗಿದೆ. ಹಾಸನಾಂಬೆ ಉತ್ಸವದಲ್ಲಿ ಅನುಭವ ಹೊಂದಿದವರಿಗೆ ಮಾತ್ರ ಆದ್ಯತೆ ಎನ್ನುವ ಷರತ್ತು ಸೇರಿಸಿ, ಲೈಟಿಂಗ್ ಹಾಗೂ ಹೂವಿನ ಅಲಂಕಾರ ಸೇರಿದಂತೆ ಎಲ್ಲಾ ಕಾಮಗಾರಿಗೂ ಒಂದೇ ವ್ಯಕ್ತಿಗೆ ಗುತ್ತಿಗೆ ನೀಡಲಾಗಿದೆ. “ಖರೀದಿ ಮಾಡಿದರೆ ಇಷ್ಟೊಂದು ವೆಚ್ಚ ಆಗುವುದಿಲ್ಲ, ದುಂದು ವೆಚ್ಚ ಮಾಡಲಾಗಿದೆ” ಎಂದು ದೂರುದಾರ ಆರೋಪಿಸಿದ್ದಾರೆ.
ತನಿಖೆ ವೇಳೆ ಅಗತ್ಯ ದಾಖಲೆಗಳನ್ನು ಸಲ್ಲಿಸಲು ವಿಳಂಬವಾದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿ ಅಸಮಾಧಾನ ವ್ಯಕ್ತಪಡಿಸಿ, ಸರಿಯಾದ ದಾಖಲೆ ನೀಡದಿದ್ದರೆ ವರದಿಯಲ್ಲಿ ದಾಖಲಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಲೋಕಾ ಅಧಿಕಾರಿಗಳ ಪ್ರಶ್ನೆಗಳಿಗೆ ಮಹಾನಗರ ಪಾಲಿಕೆ ಅಧಿಕಾರಿಗಳು ಕಂಗಾಲಾಗಿದ್ದಾರೆ.
ಭಕ್ತರ ನಂಬಿಕೆಗೆ ಧಕ್ಕೆ ತರುವ ರೀತಿಯಲ್ಲಿ ಹಣ ದುರ್ಬಳಕೆ ನಡೆದಿದೆಯೇ ಎಂಬ ಪ್ರಶ್ನೆ ಈಗ ಜನಮನದಲ್ಲಿ ಮೂಡಿದ್ದು, ಲೋಕಾಯುಕ್ತ ತನಿಖೆ ಮುಂದಿನ ಹಂತದಲ್ಲಿ ಯಾವ ರೀತಿಯ ಕ್ರಮ ಕೈಗೊಳ್ಳಲಿದೆ ಎಂಬುದರ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
17-10-26 11:09 am
HK News Staffer
LanchuLal, Astra Fraud, Mangalore: ‘ಅಕ್ಷಯ ಪಾತ...
16-10-26 03:37 pm
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am