ಬ್ರೇಕಿಂಗ್ ನ್ಯೂಸ್
21-02-26 11:27 am HK News Desk ಕರ್ನಾಟಕ
ಬೆಂಗಳೂರು, ಫೆ.21: ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ತೀವ್ರ ಸ್ವರೂಪ ಪಡೆದಿರುವಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತನ್ನ ಜಾತಿ ಮುಂದಿಟ್ಟು ಹಣಿಯಲು ನೋಡುತ್ತಿದ್ದಾರೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದು ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್ಣು ಕೆಂಪಾಗಲು ಕಾರಣ. ನನ್ನ ಮೇಲೆ ವಿರೋಧಿಗಳು ನಡೆಸುತ್ತಿರುವ ಬಹುತೇಕ ದಾಳಿಗಳು, ಮಾಡುತ್ತಿರುವ ಟೀಕೆ-ಆರೋಪಗಳಿಗೆ ನಾನು ಹುಟ್ಟಿದ ಜಾತಿಯೂ ಒಂದು ಕಾರಣ ಎಂದು ಸಿಎಂ ಸಿದ್ದರಾಮಯ್ಯ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಕುರಿ ಕಾಯುತ್ತ ಇರಬೇಕಾದವನು ಮುಖ್ಯಮಂತ್ರಿ ಆಗಿ ಬಿಟ್ಟನಲ್ಲಾ, ಆರ್ಥಿಕ ತಜ್ಞರಿಗೆ ಸರಿಸಮನಾಗಿ ನಿಂತು ಸಾಲು ಸಾಲು ಬಜೆಟ್ ಮಂಡಿಸಿ ಶಹಬ್ಬಾಸ್ ಗಿರಿ ಗಳಿಸುತ್ತಿದ್ದಾನಲ್ಲಾ ಎನ್ನುವ ಅಸಹನೆ, ಅವರೊಳಗೆ ದ್ವೇಷ, ಅಸೂಯೆ ಕುದಿಯುತ್ತಿದೆ. ಇವನೊಬ್ಬನನ್ನು ರಾಜಕೀಯವಾಗಿ ಮುಗಿಸಿಬಿಟ್ಟರೆ ಅದರ ನಂತರ ನಮ್ಮೆಲ್ಲರ ಹಾದಿ ಸುಲಭವಾಗುತ್ತದೆ ಎನ್ನುವ ರಾಜಕೀಯ ದುರುದ್ದೇಶದ ಲೆಕ್ಕಾಚಾರ ಇವರ ಮನಸ್ಸಿನಲ್ಲಿದೆ.

ಸಾಮಾಜಿಕ ಬದಲಾವಣೆಗೆ ಕೈ ಹಾಕಿದವರೆಲ್ಲರ ವಿರುದ್ಧ ಇಂತಹ ಷಡ್ಯಂತ್ರಗಳು ನಡೆದಿರುವುದನ್ನು ಇತಿಹಾಸದ ಪುಟದಲ್ಲಿ ಕಾಣಬಹುದು. ಬುದ್ಧ, ಬಸವಣ್ಣ, ಅಂಬೇಡ್ಕರ್, ಗಾಂಧೀಜಿ, ಪೆರಿಯಾರ್, ನಾರಾಯಣ ಗುರು, ಕನಕದಾಸರಾದಿಯಾಗಿ ಸಾಮಾಜಿಕ ಪರಿವರ್ತನೆಗೆ ಹೋರಾಟ ನಡೆಸಿದವರೆಲ್ಲರನ್ನು ಹಣಿಯುವ, ದಮನಿಸುವ, ಮುಗಿಸುವ ಸಂಚು, ಒಳಸಂಚುಗಳು ನಡೆಯುತ್ತಲೇ ಬಂದಿದೆ. ಬಸವಣ್ಣ ಏನು ತಪ್ಪು ಮಾಡಿದ್ದರು? ಜಾತಿ ವಿನಾಶಕ್ಕೆ ಪ್ರಯತ್ನ ಮಾಡಿದ್ದರು, ಅಂತರಜಾತಿ ಮದುವೆ ಮಾಡಿಸಿದ್ದರು, ಅವಕಾಶ ವಂಚಿತ ತಬ್ಬಲಿ ಜಾತಿಗಳಿಗೆ ಸ್ವಾಭಿಮಾನದ ದೀಕ್ಷೆ ಕೊಟ್ಟು ಸಮಾಜದ ಮುಖ್ಯವಾಹಿನಿಯಲ್ಲಿ ಸೇರಿಸುವ ಪ್ರಯತ್ನ ಮಾಡಿದ್ದರು. ಈ ಕಾರಣಕ್ಕಾಗಿ ಅವರನ್ನು ವ್ಯವಸ್ಥಿತ ಸಂಚಿನ ಮೂಲಕ ಮುಗಿಸಲಾಯಿತು ಎಂದು ಸಿಎಂ ಹೇಳಿದ್ದಾರೆ.
ಸಾಮಾಜಿಕ ನ್ಯಾಯದ ಬಂಡಿಯನ್ನು ಮುಂದಕ್ಕೆ ಎಳೆದುಕೊಂಡು ಹೋಗುವುದು ಸುಲಭದ ಕೆಲಸ ಅಲ್ಲ ಎನ್ನುವುದನ್ನು ನಾನು ಅನುಭವದ ಮೂಲಕ ಅರಿತುಕೊಂಡಿದ್ದೇನೆ. ಈ ಪ್ರಯತ್ನ ನಡೆಸಿದವರೆಲ್ಲರನ್ನು ವರ್ತಮಾನ ಬಹಳ ಕ್ರೂರವಾಗಿ ನಡೆಸಿಕೊಂಡಿದೆ. ನಾನು ಸಾಮಾಜಿಕ ನ್ಯಾಯದ ಪರವಾಗಿ ದನಿ ಎತ್ತುವ ಮತ್ತು ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರುವ ಪ್ರಯತ್ನವನ್ನು ಮಾಡಿದಾಗೆಲ್ಲ ನನ್ನ ವಿರುದ್ಧ ದಾಳಿಗಳು ನಡೆದಿವೆ, ಇದು ಈಗಲೂ ಮುಂದುವರಿಯುತ್ತಿದೆ.
ನನ್ನ ವಿರುದ್ಧ ಯಾಕೆ ಷಡ್ಯಂತ್ರ ಮಾಡುತ್ತಿದ್ದಾರೆ ಎನ್ನುವುದೂ ನನಗೆ ಗೊತ್ತಿದೆ. ನಾನು ಈ ರಾಜ್ಯದ ಬಡವರು, ಶೋಷಿತರು, ಅವಕಾಶ ವಂಚಿತರ ಪರವಾಗಿದ್ದೇನೆ, ಸಾಮಾಜಿಕ ನ್ಯಾಯದ ಪರವಾಗಿದ್ದೇನೆ, ಸಂವಿಧಾನದ ಪರವಾಗಿದ್ದೇನೆ, ಶೋಷಿತರ ಅಭಿವೃದ್ದಿಗಾಗಿ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೆ ತಂದಿದ್ದೇನೆ, ದುರ್ಬಲರಿಗೆ ಅನ್ಯಾಯವಾದಾಗ ದನಿ ಎತ್ತಿದ್ದೇನೆ. ಇದಕ್ಕಾಗಿ ರಾಜ್ಯದ ಜನತೆ 136 ಸ್ಥಾನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ ಅಧಿಕಾರಕ್ಕೆ ತಂದಿದ್ದಾರೆ. ಇದು ನಮ್ಮ ರಾಜಕೀಯ ವಿರೋಧಿಗಳಿಗೆ ಸಹಿಸಲಾಗುತ್ತಿಲ್ಲ ಎಂದು ಸಿದ್ದರಾಮಯ್ಯ ಅವರು ಸರಣಿ ಪೋಸ್ಟ್ ಮಾಡಿದ್ದಾರೆ.
"ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್ಣು ಕೆಂಪಾಗಲು ಕಾರಣ"
— CM of Karnataka (@CMofKarnataka) February 20, 2026
ನನ್ನ ಮೇಲೆ ವಿರೋಧಿಗಳು ನಡೆಸುತ್ತಿರುವ ಬಹುತೇಕ ದಾಳಿಗಳು, ಮಾಡುತ್ತಿರುವ ಟೀಕೆ-ಆರೋಪಗಳಿಗೆ ನಾನು ಹುಟ್ಟಿದ ಜಾತಿಯೂ ಒಂದು ಕಾರಣ. ಕುರಿಕಾಯುತ್ತಾ ಇರಬೇಕಾದವನು ಮುಖ್ಯಮಂತ್ರಿ ಆಗಿ ಬಿಟ್ಟನಲ್ಲಾ, ಆರ್ಥಿಕ ತಜ್ಞರಿಗೆ ಸರಿಸಮನಾಗಿ ನಿಂತು ಸಾಲುಸಾಲು ಬಜೆಟ್ ಮಂಡಿಸಿ… pic.twitter.com/xLLFrY5ZQg
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm