ಬ್ರೇಕಿಂಗ್ ನ್ಯೂಸ್
25-02-26 12:30 pm HK News Staffer ಕರ್ನಾಟಕ
ಕೊಪ್ಪಳ, ಫೆ.25: ಕೊಪ್ಪಳ ಜಿಲ್ಲೆಯ ಅಲ್ಪಸಂಖ್ಯಾತ ಇಲಾಖೆ ವ್ಯಾಪ್ತಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪಿಯು ವಿದ್ಯಾರ್ಥಿನಿಯೊಬ್ಬಳು ವಸತಿ ನಿಲಯದ ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿರುವ ಘಟನೆ ಬೆಳಕಿಗೆ ಬಂದಿದೆ.
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ವಿಜಯನಗರ ಜಿಲ್ಲೆಯ ಅಲ್ತಾಫ್ (21) ಎಂಬಾತನ ಜೊತೆ ವಿದ್ಯಾರ್ಥಿನಿಯ ಮದುವೆ ನಿಗದಿಯಾಗಿತ್ತು. ಮದುವೆಯ ಆಮಿಷವೊಡ್ಡಿದ್ದ ಆರೋಪಿ ಕಳೆದ ಅಕ್ಟೋಬರ್‌ನಲ್ಲಿಯೇ ದೈಹಿಕ ಸಂಪರ್ಕ ಬೆಳೆಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ವಿಷಯವನ್ನು ಯಾರಿಗೂ ತಿಳಿಸಬಾರದೆಂದು ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.
ವಿಚಾರಣೆ ಬಳಿಕ ವಿದ್ಯಾರ್ಥಿನಿ ಗರ್ಭವತಿಯಾಗಿರುವುದು ಹಾಗೂ ಆರೋಪಿಯ ಪಾತ್ರ ಸ್ಪಷ್ಟವಾಗಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಪ್ರಾಂಶುಪಾಲರ ವಿರುದ್ಧ ಕ್ರಮಕ್ಕೆ ಆಗ್ರಹ:
ಘಟನೆ ಬಹಿರಂಗವಾದ ಬಳಿಕ ಸ್ಥಳೀಯರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ವಿಷಯವನ್ನು ಮುಚ್ಚಿಡಲು ಯತ್ನಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ವಸತಿ ಶಾಲೆಯ ಪ್ರಾಂಶುಪಾಲರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಕೇಳಿಬಂದಿದೆ. ಎಸ್‌ಎಫ್‌ಐ ಕಾರ್ಯಕರ್ತರು ಪ್ರಾಂಶುಪಾಲರ ಅಮಾನತಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ.
ಪೊಲೀಸರು ವಿದ್ಯಾರ್ಥಿನಿಯ ಹೇಳಿಕೆ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ಸಂಗ್ರಹಿಸಿ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿದ್ದಾರೆ.
ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ, “ಕನಕಗಿರಿ ತಾಲೂಕಿನ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಗೆ ಹೆರಿಗೆಯಾದ ವಿಚಾರ ನನ್ನ ಗಮನಕ್ಕೂ ಬಂದಿದೆ. ವಾಸ್ತವ ಪರಿಶೀಲನೆ ನಡೆಸುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
ಕೊಪ್ಪಳ ಜಿಲ್ಲೆಯ ಕಾಕನೂರು ವಿದ್ಯಾರ್ಥಿ ನಿಲಯದಲ್ಲಿ ಕಳೆದ ನವೆಂಬರ್‌ನಲ್ಲಿ ಅಪ್ರಾಪ್ತ ಬಾಲಕಿಗೆ ಹೆರಿಗೆಯಾದ ಪ್ರಕರಣ ರಾಜ್ಯದಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು. ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವೂ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಂಡಿತ್ತು. ಇದೀಗ ಮತ್ತೊಮ್ಮೆ ಅಂತಹದ್ದೇ ಘಟನೆ ಮರುಕಳಿಸಿರುವುದು ಆತಂಕ ಮೂಡಿಸಿದೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm