ಬ್ರೇಕಿಂಗ್ ನ್ಯೂಸ್
25-02-26 04:30 pm HK News Staffer ಕರ್ನಾಟಕ
ಬೆಂಗಳೂರು, ಫೆ.25: ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಒಂದಲ್ಲ ಒಂದು ವಿಚಾರಕ್ಕೆ ಧ್ವನಿ ಎತ್ತುತಲೇ ಬಂದಿರುವ ಉದ್ಯಮಿ ಮೋಹನ್ ದಾಸ್ ಪೈ ಇದೀಗ "ನಮ್ಮ ಮೆಟ್ರೋ" ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಪಿಂಕ್ ಲೈನ್ನಲ್ಲಿ ಪಿಲ್ಲರ್ ಕಾಮಗಾರಿ ಹಿನ್ನೆಲೆ ಕಿಲೋ ಮೀಟರ್ ಗಟ್ಟಲೆ ದೂರದ ವರೆಗೆ ಬಿಎಂಆರ್ಸಿಎಲ್ ಬ್ಯಾರಿಕೇಡ್ ಅಳವಡಿಸಿತ್ತು. ಇದೀಗ ಕಾಮಗಾರಿ ಮುಗಿದು ಹಲವು ದಿನಗಳೇ ಕಳೆದಿದ್ದರು ಅವುಗಳನ್ನು ತೆರವು ಮಾಡಿಲ್ಲ. ಇದರಿಂದ ವಾಹನ ಸವಾರರು ಮತ್ತು ಸ್ಥಳೀಯ ನಿವಾಸಿಗಳು ನಿತ್ಯ ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ ಆಸರೆ ಸರ್ಕಾರಕ್ಕೆ ಮಾತ್ರ ಈ ಬಗ್ಗೆ ಯಾವುದೇ ಕಾಳಜಿಯಿಲ್ಲ ಎಂದು ಮೋಹನ್ ದಾಸ್ ಪೈ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಳೇನ ಅಗ್ರಹಾರದಿಂದ ನಾಗವಾರವರೆಗೆ ನಿರ್ಮಾಣವಾಗುತ್ತಿರುವ ಪಿಂಕ್ ಲೈನ್ ಮೆಟ್ರೋ ಮಾರ್ಗದಲ್ಲಿ ಪಿಲ್ಲರ್ ಕಾಮಗಾರಿ ಪೂರ್ಣಗೊಂಡು ಹಲವು ತಿಂಗಳು ಕಳೆದಿದ್ದರೂ, ಕಾಮಗಾರಿ ಸ್ಥಳದ ಸುತ್ತ ಅಳವಡಿಸಿರುವ ಬ್ಯಾರಿಕೇಡ್‌ಗಳನ್ನು ಇನ್ನೂ ತೆಗೆದಿಲ್ಲ. ಇದರಿಂದ ಹೊಸೂರು ರಸ್ತೆ ಹಾಗೂ ಬನ್ನೇರುಘಟ್ಟ ರಸ್ತೆ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ವಾಹನ ಸಂಚಾರ ದಟ್ಟಣೆ ಹೆಚ್ಚಾಗಿದೆ.
ಮೆಟ್ರೋ ಕಾಮಗಾರಿಗಾಗಿ ರಸ್ತೆಗಳಲ್ಲಿ ತೆಗೆದಿದ್ದ ಗುಂಡಿಗಳನ್ನು ಮುಚ್ಚುವ ಕಾರ್ಯವೂ ವಿಳಂಬವಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ಅಸಮಾಧಾನ ವ್ಯಕ್ತವಾಗಿದೆ. ಕೂಡಲೇ ಸಂಬಂಧಿತ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ನಿವಾಸಿಗಳು ಹಾಗೂ ವಾಹನ ಸವಾರರು ಒತ್ತಾಯಿಸಿದ್ದಾರೆ.
ಒಟ್ಟು 21.26 ಕಿಲೋಮೀಟರ್ ಉದ್ದದ ಈ ಪಿಂಕ್ ಲೈನ್ ಮಾರ್ಗದಲ್ಲಿ 7.5 ಕಿಲೋಮೀಟರ್ ಎಲಿವೇಟೆಡ್ ವಿಭಾಗವಿದ್ದು, ಸುರಕ್ಷತಾ ಪರೀಕ್ಷೆಗಳು ನಡೆಯುತ್ತಿವೆ. ಮೊದಲ ಹಂತದಲ್ಲಿ ಕಾಳೇನ ಅಗ್ರಹಾರದಿಂದ ತಾವರೆಕೆರೆಯವರೆಗೆ ಮೆಟ್ರೋ ಸಂಚಾರ ಆರಂಭಿಸಲು ಸಿದ್ಧತೆ ನಡೆಸಲಾಗುತ್ತಿದೆ. ಏಪ್ರಿಲ್ ತಿಂಗಳಲ್ಲಿ ಸಾರ್ವಜನಿಕ ಸೇವೆಗೆ ಈ ಮಾರ್ಗವನ್ನು ತೆರೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm