ಬ್ರೇಕಿಂಗ್ ನ್ಯೂಸ್
27-02-26 10:17 pm HK News Desk ಕರ್ನಾಟಕ
ಬೆಂಗಳೂರು, ಫೆ.27: ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಕರ್ನಾಟಕ ಕಾಂಗ್ರೆಸ್ ಸರ್ಕಾರ ಮತ್ತೆ ಶಾಕ್ ನೀಡಲು ಮುಂದಾಗಿದೆ. ಏಪ್ರಿಲ್ ಒಂದರಿಂದ ಅನ್ವಯವಾಗುವಂತೆ, ಜಮೀನು ಮತ್ತು ಕಟ್ಟಡಗಳ ಮಾರ್ಗದರ್ಶಿ ಮೌಲ್ಯದಲ್ಲಿ ಭಾರೀ ಪರಿಷ್ಕರಣೆ ತರಲು ಕಂದಾಯ ಇಲಾಖೆ ಮುಂದಾಗಿದೆ. ಮೂಲಗಳ ಪ್ರಕಾರ, ಗೈಡೆನ್ಸ್ ವ್ಯಾಲ್ಯೂನಲ್ಲಿ ಶೇ. 15 - 20ರಷ್ಟು ಏರಿಕೆಯಾಗುವ ಸಾಧ್ಯತೆಯಿದೆ.
ಮಾರ್ಗದರ್ಶಿ ಮೌಲ್ಯವನ್ನು ಹೆಚ್ಚಿಸಿದರೆ ನೇರವಾಗಿ ಮುದ್ರಾಂಕ ಶುಲ್ಕ (Stamp Duty) ಮತ್ತು ನೋಂದಣಿ ಶುಲ್ಕಗಳ (Registration Fees) ಮೇಲೆ ಪರಿಣಾಮ ಬೀರಲಿದೆ. ಕಂದಾಯ ಇಲಾಖೆಯಿಂದ ಕೊಟ್ಟ ಟಾರ್ಗೆಟ್ ರೀಚ್ ಆಗದ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮಕ್ಕೆ ಮುಂದಾಗಬಹುದು ಎಂದು ಹೇಳಲಾಗುತ್ತಿದೆ. ಆಸ್ತಿ ನೋಂದಣಿಯಿಂದ ಬರುತ್ತಿರುವ ಆದಾಯದಲ್ಲಿ ಕೊರತೆಯನ್ನು ನೀಗಿಸಲು ಸರ್ಕಾರ ಈ ದಾರಿಯನ್ನು ಹಿಡಿಯಬಹುದು.
ಗೈಡೆನ್ಸ್ ವ್ಯಾಲ್ಯೂ ಏಪ್ರಿಲ್ ಒಂದರಿಂದ ಅಧಿಕ?
ಪರಿಷ್ಕೃತ ಮಾರ್ಗದರ್ಶಿ ಮೌಲ್ಯವನ್ನು ಜಾರಿಗೆ ತರಲು ಮತ್ತು ಇದಕ್ಕೆ ಸಂಬಂಧಿಸಿದ ಕರಡನ್ನು ಆದಷ್ಟು ಬೇಗ ಪ್ರಕಟಿಸಲು, ಕರ್ನಾಟಕ ಸರ್ಕಾರ, ನೋಂದಣಿ ಇಲಾಖೆಗೆ ಸೂಚಿಸಿದೆ ಎಂದು ಹೇಳಲಾಗುತ್ತಿದೆ. ಏಪ್ರಿಲ್ ಒಂದರಿಂದ ಅನ್ವಯವಾಗುವಂತೆ ಹೊಸ ದರ ಜಾರಿಗೆ ಬರಬಹುದು. ಕಂದಾಯ ಇಲಾಖೆಯ ಕಾನೂನಿನ ಪ್ರಕಾರ, ಗೈಡೆನ್ಸ್ ವ್ಯಾಲ್ಯೂವನ್ನು ಪ್ರತೀ ವರ್ಷ ಬದಲಾಯಿಸಬಹುದು.
ಕಳೆದ ಬಾರಿ ಅಂದರೆ ಅಕ್ಟೋಬರ್ 2023ರಲ್ಲಿ ಸ್ಟ್ಯಾಂಪ್ ಡ್ಯೂಟಿ ಮೊತ್ತವನ್ನು ಹೆಚ್ಚಿಸಲಾಗಿತ್ತು. ಇದೀಗ ಮೌಲ್ಯಮಾಪನ ಸಮಿತಿ, ಮತ್ತೊಮ್ಮೆ ಶುಲ್ಕ ಪರಿಷ್ಕರಣೆಗೆ ಶಿಫಾರಸನ್ನು ಮಾಡಿದೆ ಎಂದು ಹೇಳಲಾಗುತ್ತಿದೆ. ಸದ್ಯ, ಸರ್ಕಾರ ಗೈಡೆನ್ಸ್ ವ್ಯಾಲ್ಯೂ ಮೇಲೆ ಶೇ. 5ರಷ್ಟು ಸ್ಟ್ಯಾಂಪ್ ಡ್ಯೂಟಿ, ಶೇ. 2ರಷ್ಟು ನೋಂದಣಿ ಶುಲ್ಕ ಮತ್ತು ಶೇ. 0.60ರಷ್ಟು ಸೆಸ್ ಮತ್ತು ಸರ್ಚಾರ್ಜ್ ಅನ್ನು ವಿಧಿಸುತ್ತದೆ. ಅಂದರೆ, ಒಟ್ಟಾರೆಯಾಗಿ ಆಸ್ತಿ ಖರೀದಿದಾರರು ಶೇ. 7.60 ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಈಗ, ಅದನ್ನು ಶೇ.15 - 20ಕ್ಕೆ ಸರ್ಕಾರ ಹೆಚ್ಚಿಸುವ ಸಾಧ್ಯತೆಯಿದೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm