ಬ್ರೇಕಿಂಗ್ ನ್ಯೂಸ್
03-03-26 08:25 pm HK News Staffer ಕರ್ನಾಟಕ
ಬೆಂಗಳೂರು, ಮಾರ್ಚ್ 3: ರಾಜ್ಯದಲ್ಲಿ ಸಿಎಂ ಸ್ಥಾನದ ಆಕಾಂಕ್ಷಿಯಾಗಿರುವವರು ತಮ್ಮದೇ ಸರ್ಕಾರದ ಶಾಸಕರ ಮೇಲೆ ಫೋನ್ ಕದ್ದಾಲಿಕೆ ಮಾಡುತ್ತಿದ್ದಾರೆಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಆರೋಪ ಮಾಡಿರುವುದು ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ಫೋನ್ ಕದ್ದಾಲಿಕೆ ಎಲ್ಲ ಸರ್ಕಾರದಲ್ಲೂ ಇತ್ತು. ಈಗಿನ ಸರ್ಕಾರದಲ್ಲಿ ಹೆಚ್ಚಾಗಿದೆ. ಆದರೆ ಫೋನ್ ಟ್ಯಾಪಿಂಗ್ ಮಾಡುತ್ತಾ ಪತಿವ್ರತೆ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ತಮ್ಮದೇ ಶಾಸಕರ ಮೇಲೆ ಸಚಿವರು ಟ್ಯಾಪಿಂಗ್ ಮಾಡುತ್ತಿರುವುದು ಇದೇ ಮೊದಲು ಎಂದವರು ಹೇಳಿದ್ದಾರೆ. ಇದೇ ರೀತಿಯ ಆರೋಪವನ್ನು ವಿಪಕ್ಷ ನಾಯಕ ಅಶೋಕ್ ಕೂಡ ಮಾಡಿದ್ದಾರೆ.
ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮ ಪ್ರಕಟಣೆ ಮೂಲಕ ಖಡಕ್ ತಿರುಗೇಟು ನೀಡಿದ್ದಾರೆ. ತಮ್ಮ ಮತ್ತು ಡಿ.ಕೆ. ಶಿವಕುಮಾರ್ ನಡುವಿನ ಹಾಲು ಜೇನಿನಂತಹ ಸಂಬಂಧವನ್ನು ಕೆಡಿಸಲು ನೋಡುತ್ತಿದ್ದಾರೆ. ವಿಪಕ್ಷ ನಾಯಕರ ಇಂತಹ ಆರೋಪಗಳು ‘’ತಾ ಕಳ್ಳ ಇತರರ ನಂಬ’’ ಎಂಬ ಗಾದೆಯಂತಿದೆ. ಇದೊಂದು ಅತೃಪ್ತ ಆತ್ಮಗಳ ಹತಾಶ ಹೇಳಿಕೆ. ಅತೃಪ್ತ ರಾಜಕೀಯ ಶಕ್ತಿಗಳ ಹತಾಶ ಪ್ರಯತ್ನ ಎಂದು ಟೀಕಿಸಿದ್ದಾರೆ.
ಇವರಲ್ಲಿ ಒಬ್ಬರು ರಾಜ್ಯದ ಮುಖ್ಯಮಂತ್ರಿಗಳಾಗಿದ್ದವರು, ಇನ್ನೊಬ್ಬರು ಉಪ ಮುಖ್ಯಮಂತ್ರಿ ಮತ್ತು ಗೃಹ ಸಚಿವರಾಗಿದ್ದವರು. ಅವರ ಕಾಲದಲ್ಲಿ ಕೂಡ ಗುಪ್ತಚರ ವಿಭಾಗ ಮುಖ್ಯಮಂತ್ರಿಯವರ ಬಳಿಯೇ ಇತ್ತು. ಅವರ ಹೇಳಿಕೆಗಳನ್ನು ಗಮನಿಸಿದರೆ ಇವರಿಬ್ಬರೂ ತಮ್ಮ ಅನುಭವದ ಬಲದಿಂದಲೇ ಈ ಆರೋಪ ಮಾಡುತ್ತಿರುವಂತೆ ಕಾಣಿಸುತ್ತಿದೆ.
ನಮ್ಮದು ಆಂತರಿಕ ಪ್ರಜಾಪ್ರಭುತ್ವ ಇರುವ ಪಕ್ಷ. ಕಾಂಗ್ರೆಸ್ ಪಕ್ಷ ಎನ್ನುವುದು ಪ್ರಧಾನಿ ಎದುರು ಬಾಯಿ ಬಿಡಲಾಗದೆ ಕೈಕಾಲು ನಡುಗುವಂತಹ ಸ್ಥಿತಿ ಇರುವ ಬಿಜೆಪಿಯೂ ಅಲ್ಲ, ಏಕ ಕುಟುಂಬದ ಅಧಿಪತ್ಯ ಇರುವ ಜೆಡಿಎಸ್ ಕೂಡ ಅಲ್ಲ. ನಮ್ಮ ಶಾಸಕರಲ್ಲಿ ಯಾರೂ ಕೂಡಾ ನನ್ನ ಇಲ್ಲವೇ ಡಿ.ಕೆ.ಶಿವಕುಮಾರ್ ಬೆಂಬಲಿಗರಲ್ಲ, ಎಲ್ಲರೂ ಕಾಂಗ್ರೆಸ್ ಪಕ್ಷದ ಬೆಂಬಲಿಗರು. ಪಕ್ಷದ ಶಿಸ್ತಿನ ಚೌಕಟ್ಟಿನೊಳಗೆ ವೈಯಕ್ತಿಕವಾಗಿ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ, ಜೊತೆಯಲ್ಲಿ ಊಟ-ತಿಂಡಿ ಮಾಡುವ ಎಲ್ಲ ಸ್ವಾತಂತ್ರ್ಯಗಳು ಅವರಿಗೆ ಇದೆ. ಆದರೆ ಯಾವ ಶಾಸಕರು ಏನನ್ನೇ ಹೇಳಿದರೂ ಅಂತಿಮವಾಗಿ ಅವರನ್ನೂ ಸೇರಿದಂತೆ ನಾನು ಮತ್ತು ಶಿವಕುಮಾರ್ ನಮ್ಮ ಪಕ್ಷದ ಹೈಕಮಾಂಡ್ ಆದೇಶಕ್ಕೆ ತಲೆಬಾಗುವವರು. ಇದನ್ನು ನಾವಿಬ್ಬರೂ ಒಂದಲ್ಲ ನೂರು ಬಾರಿ ಹೇಳಿದ್ದೇವೆ. ಇದೇ ಅಂತಿಮ ಸತ್ಯ.
ಸುಳ್ಳು ಸುದ್ದಿಗಳನ್ನು ಹರಡಿ ನಮ್ಮಿಬ್ಬರ ಸಂಬಂಧವನ್ನು ಕೆಡಿಸಿ ಡಿ.ಕೆ.ಶಿವಕುಮಾರ್ ಅವರನ್ನು ಒಲಿಸಿಕೊಳ್ಳುವ ದುರಾಲೋಚನೆ ಏನಾದರೂ ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಇದ್ದರೆ, ಅವರ ಹಗಲು ಕನಸುಗಳಿಗೆ ಶುಭ ಹಾರೈಸುತ್ತೇನೆ. ಶಿವಕುಮಾರ್ ಒಬ್ಬ ಕಟ್ಟಾ ಕಾಂಗ್ರೆಸಿಗ, ಸುಳ್ಳು ಕೇಸ್ ಗಳನ್ನು ಹಾಕಿ, ಜೈಲಿಗೆ ಕಳಿಸಿ ಅವರನ್ನು ಮಣಿಸುವ ಎಲ್ಲ ಪ್ರಯತ್ನಗಳನ್ನು ಬಿಜೆಪಿ ಮಾಡಿಯಾಗಿದೆ. ಇದಕ್ಕೆಲ್ಲ ಮಣಿಯದೆ ಅವರು ಪಕ್ಷಕ್ಕೆ ನಿಷ್ಠರಾಗಿ ಉಳಿದವರು ಎನ್ನುವುದು ಈ ಕುತಂತ್ರಿ ನಾಯಕರಿಗೆ ತಿಳಿದಿರಲಿ.
ಇತಿಹಾಸದ ಪುಟಗಳ ಮೇಲೆ ಕಣ್ಣಾಡಿಸಿದರೆ ಈ ಪೋನ್ ಕದ್ದಾಲಿಕೆ, ಗೂಢಚರ್ಯೆಗಳೆಲ್ಲ ಯಾವ ಪಕ್ಷದ ದುಷ್ಕೃತ್ಯಗಳು ಎನ್ನುವುದು ಅರಿವಾಗುತ್ತದೆ. ಈ ದುರ್ಬುದ್ಧಿಯ ಕಾರಣದಿಂದಾಗಿಯೇ ರಾಜ್ಯ ರಾಜಕೀಯದಲ್ಲಿ ಆಪರೇಷನ್ ಕಮಲ, ರೆಸಾರ್ಟ್ ರಾಜಕಾರಣ, ವಚನಭಂಗದಂತಹ ಅನಿಷ್ಠಗಳು ಕಾಣಿಸಿಕೊಂಡಿರುವುದು. 2004ರಿಂದ 2013 ವರೆಗಿನ ಒಂಬತ್ತು ವರ್ಷಗಳ ಅವಧಿಯಲ್ಲಿ ರಾಜ್ಯ ಐದು ಮುಖ್ಯಮಂತ್ರಿಗಳನ್ನು, 2018ರಿಂದ 2023ರ 5 ವರ್ಷಗಳ ಅವಧಿಯಲ್ಲಿ ಮೂರು ಮುಖ್ಯಮಂತ್ರಿಗಳನ್ನು ರಾಜ್ಯ ಕಾಣುವಂತಾಗಲು ಇವರೊಳಗಿನ ಪರಸ್ಪರ ಅಪನಂಬಿಕೆ, ದ್ವೇಷ, ಅಸೂಯೆ, ಬೆನ್ನಿಗೆ ಚೂರಿ ಹಾಕುವ ಕುತಂತ್ರಗಳೇ ಕಾರಣ ಎಂದು ಆರೋಪಿಸಿದರು.
ರಾಜ್ಯ ರಾಜಕೀಯ ಭವಿಷ್ಯದ ಕುರಿತು ಮಾತನಾಡಿದ ಸಿದ್ದರಾಮಯ್ಯ, ಕಾಂಗ್ರೆಸ್ ಸರ್ಕಾರ ಈ ಅವಧಿಯನ್ನು ಪೂರ್ಣಗೊಳಿಸಲಿದೆ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಆಡಳಿತ ಮುಂದುವರಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಆದರೆ ತಾವು ಸಿಎಂ ಹುದ್ದೆಯಲ್ಲಿ ಮುಂದುವರಿಯುವ ಬಗ್ಗೆ ನೇರವಾಗಿ ಹೇಳಿಕೆ ನೀಡದಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮತ್ತು ಚರ್ಚೆಗೆ ಕಾರಣವಾಗಿದೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm