ಬ್ರೇಕಿಂಗ್ ನ್ಯೂಸ್
03-03-26 08:39 pm HK News Staffer ಕರ್ನಾಟಕ
ಬೆಂಗಳೂರು, ಮಾ.3: ಐಷಾರಾಮಿ ಜೀವನ ಶೈಲಿಯಲ್ಲಿ ಕಾಣಿಸಿಕೊಂಡಿದ್ದ ಯುವಕ-ಯುವತಿಯರ ಅಸಲಿ ಮುಖವನ್ನು ಸಿಸಿಬಿ ನಾರ್ಕೋಟಿಕ್ಸ್ ವಿಭಾಗದ ಪೊಲೀಸರು ಬಯಲು ಮಾಡಿದ್ದಾರೆ. ನಗರದ ಪ್ರತಿಷ್ಠಿತ ಅಪಾರ್ಟ್ಮೆಂಟ್ ಒಂದರ ಮೇಲೆ ನಡೆಸಿದ ದಾಳಿಯಲ್ಲಿ ಸುಮಾರು 10 ಕೋಟಿ ರೂ. ಮೌಲ್ಯದ ಬೃಹತ್ ಪ್ರಮಾಣದ ಮಾದಕ ದ್ರವ್ಯ ವಶಪಡಿಸಿದ್ದು, ಅಂತರಾಷ್ಟ್ರೀಯ ಡ್ರಗ್ ಜಾಲದ ಬಗ್ಗೆ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.
ಬಾಗಲೂರಿನಲ್ಲಿರುವ ಪ್ರತಿಷ್ಠಿತ ಪ್ರೆಸ್ಟಿಜ್ ಫೈನ್ ಬೇರಿ ಪಾರ್ಕ್ ಅಪಾರ್ಟ್ಮೆಂಟ್ನ ಫ್ಲಾಟ್ನಲ್ಲಿ ಈ ಅಕ್ರಮ ಚಟುವಟಿಕೆ ಪತ್ತೆಯಾಗಿದೆ. ಖಚಿತ ಮಾಹಿತಿ ಆಧಾರದಲ್ಲಿ ದಾಳಿ ನಡೆಸಿದ ಪೊಲೀಸರು ಕೇರಳ ಮೂಲದ ಅಶ್ವಿನ್ (27) ಮತ್ತು ಮೊಬಿನಾ (25) ಎಂಬವರನ್ನು ಬಂಧಿಸಿದ್ದಾರೆ. ಡ್ರಗ್ ಪೆಡ್ಲಿಂಗ್ನ್ನೇ ವೃತ್ತಿಯನ್ನಾಗಿಸಿದ್ದ ಆರೋಪಿಗಳು ಯಾವುದೇ ಅನುಮಾನ ಮೂಡದಂತೆ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ವಾಸವಿದ್ದು ಅಕ್ರಮ ವ್ಯವಹಾರ ನಡೆಸುತ್ತಿದ್ದರು ಎಂದು ತನಿಖೆಯಲ್ಲಿ ಗೊತ್ತಾಗಿದೆ.
ತನಿಖೆ ವೇಳೆ ಡ್ರಗ್ ಜಾಲವು ಅಂತಾರಾಷ್ಟ್ರೀಯ ಮಟ್ಟದ ಸಂಪರ್ಕ ಹೊಂದಿರುವುದು ಬೆಳಕಿಗೆ ಬಂದಿದೆ. ಥೈಲ್ಯಾಂಡ್ ಮೂಲದ ವಿನ್ಸೆಂಟ್ ಎಂಬಾತ ಈ ಜಾಲದ ಮಾಸ್ಟರ್ ಮೈಂಡ್ ಆಗಿದ್ದು, ವಿಮಾನಗಳ ಮೂಲಕ ಹಂತ ಹಂತವಾಗಿ ಡ್ರಗ್ಸ್ ಅನ್ನು ಬೆಂಗಳೂರಿಗೆ ರವಾನಿಸುತ್ತಿದ್ದ ಎಂದು ತಿಳಿದುಬಂದಿದೆ. ವಿನ್ಸೆಂಟ್ ನೀಡುತ್ತಿದ್ದ ಸೂಚನೆಗಳ ಆಧಾರದಲ್ಲಿ ಅಶ್ವಿನ್ ಮತ್ತು ಮೊಬಿನಾ ಮಾದಕ ದ್ರವ್ಯಗಳನ್ನು ಸ್ವೀಕರಿಸಿ ಗ್ರಾಹಕರಿಗೆ ತಲುಪಿಸುವ ಕಾರ್ಯ ನಡೆಸುತ್ತಿದ್ದರು.
ಕಾರ್ಯಾಚರಣೆಯಲ್ಲಿ ಪೊಲೀಸರು ಕರ್ನಾಟಕದಲ್ಲೇ ಮೊದಲ ಬಾರಿಗೆ ಭಾರೀ ಪ್ರಮಾಣದ 8,335 LSD ಸ್ಟ್ರಿಪ್ಸ್ ವಶಪಡಿಸಿದ್ದಾರೆ. ಒಂದು ಎಲ್ಎಸ್ಡಿ ಸ್ಟ್ರಿಪ್ ಬೆಲೆ ಸುಮಾರು 6,000 ರೂ. ಆಗಿದ್ದು, ಇವುಗಳನ್ನು ದೇವತೆಗಳ ಚಿತ್ರಗಳು ಹಾಗೂ ಕಲಾಕೃತಿಗಳ ರೂಪದಲ್ಲಿ ಮುದ್ರಿಸಿ ಯಾರಿಗೂ ಅನುಮಾನ ಬಾರದಂತೆ ಮಾರಾಟ ಮಾಡಲಾಗುತ್ತಿತ್ತು. ಇದರ ಜೊತೆಗೆ 534 ಗ್ರಾಂ ಚರಸ್ ಮತ್ತು 5 ಕೆಜಿ ಹೈಡ್ರೋ ಗಾಂಜಾವನ್ನೂ ಜಪ್ತಿ ಮಾಡಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದ್ದು, ಈ ಡ್ರಗ್ ಜಾಲದಲ್ಲಿ ಇನ್ನೂ ಯಾರ್ಯಾರು ಭಾಗಿಯಾಗಿದ್ದಾರೆ ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಅಕ್ರಮ ವ್ಯವಹಾರಕ್ಕೆ ಬಳಸಲಾದ ಫ್ಲಾಟ್ನ ಮಾಲೀಕನ ಪಾತ್ರದ ಬಗ್ಗೆ ಕೂಡ ಸಿಸಿಬಿ ಅಧಿಕಾರಿಗಳು ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm