ಬ್ರೇಕಿಂಗ್ ನ್ಯೂಸ್
04-03-26 01:27 pm HK News Staffer ಕರ್ನಾಟಕ
ಬೆಂಗಳೂರು, ಮಾರ್ಚ್ 4: ನಾಯಕತ್ವ ಬದಲಾವಣೆಯ ಕೂಗಿನ ನಡುವಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಮಾರ್ಚ್ 10 ರಂದು ಎಲ್ಲಾ ಕಾಂಗ್ರೆಸ್ ಶಾಸಕರಿಗೆ ಡಿನ್ನರ್ ಆಯೋಜಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಮಾರ್ಚ್ 10ಕ್ಕೆ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಡಿನ್ನರ್ ಪಾರ್ಟಿ ಆಯೋಜಿಸಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಎಲ್ಲ ಸಚಿವರು, ಶಾಸಕರಿಗೂ ಆಹ್ವಾನ ನೀಡಲಾಗಿದೆ.
ಮಾರ್ಚ್ 6ಕ್ಕೆ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರ್ಣಗೊಳ್ಳಲಿದೆ. ಔತಣ ಕೂಟಕ್ಕೆ ಸಿಎಂ ಸಿದ್ದರಾಮಯ್ಯ ಸಚಿವರು, ಎಲ್ಲ ಶಾಸಕರು, ಪರಿಷತ್ ಸದಸ್ಯರು ಹಾಗೂ ಕೆಲವು ಹಿರಿಯ ನಾಯಕರಿಗೂ ಆಹ್ವಾನ ನೀಡಲಾಗಿದೆ.
ಈ ಬಗ್ಗೆ ಡಿಕೆಶಿ ಪ್ರತಿಕ್ರಿಯಿಸಿ, 6 ವರ್ಷ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ತೃಪ್ತಿ ಇದೆ. ಕಾಂಗ್ರೆಸ್ಗೆ ಶಕ್ತಿ ತುಂಬಲು ಹೊಸ ರಕ್ತ ಬರಬೇಕು. ಹೊಸಬರಿಗೆ ಅವಕಾಶ ಸಿಗಬೇಕು. ನಾನು ಸ್ಟ್ರೀಟ್ ಫೈಟರ್, ಯಾವ ರೀತಿ ಹೋರಾಟ ಮಾಡಬೇಕೆಂದು ಗೊತ್ತಿದೆ ಎಂದು ಹೇಳುವ ಮೂಲಕ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಟ್ಟುಕೊಡುವ ಬಗ್ಗೆ ಒಲವು ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಸಿಎಂ ಸ್ಥಾನಕ್ಕೆ ಪ್ರಬಲ ಹಕ್ಕೊತ್ತಾಯ ಮಾಡುವ ಬಗ್ಗೆಯೂ ಸುಳಿವು ನೀಡಿದ್ದಾರೆ.
ನಾನು ಸಿಎಂ ಬದಲಾವಣೆ ಆಗಬೇಕು, ದಲಿತ ಸಿಎಂ ಆಗಬೇಕು ಎಂದು ಹೇಳಿಯೇ ಇಲ್ಲ. ಆದರೆ ಗುಪ್ತ ಮಾತುಕತೆಯ ಸಂದರ್ಭದಲ್ಲಿ ನಾನೂ ಜೊತೆಗಿದ್ದೆ. ಅದರ ಬಗ್ಗೆ ಕ್ಲಾರಿಟಿ ಬೇಕಾಗಿದೆ ಎಂದು ಡಿಕೆಶಿ ಹೇಳಿದ್ದಾರೆ. ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ, ಎಂಬಿ ಪಾಟೀಲ್ ಆಕಾಂಕ್ಷೆ ತೋರಿದ್ದಾರೆ. ಸರ್ಕಾರಕ್ಕೆ ಮೂರು ವರ್ಷ ಪೂರೈಸುತ್ತಿದ್ದು ಈ ವೇಳೆ ಹೊಸ ದಾಳ ಎಸೆಯಲು ಡಿಕೆಶಿ ಸಜ್ಜಾಗಿರುವಂತಿದೆ. ಅದೇ ಉದ್ದೇಶದಿಂದ ಕೆಪಿಸಿಸಿ ಅಧ್ಯಕ್ಷ ಹುದ್ದೆ ಸಾಕು, ಹೊಸ ರಕ್ತ ಬರಬೇಕು ಎಂದು ಹೇಳಿದ್ದು ಎನ್ನುವ ಮಾತುಗಳಿವೆ.
ಡಿನ್ನರ್ ಪಾರ್ಟಿ ಮೂಲಕ ಎಲ್ಲ ಹಿರಿಯ ಸಚಿವರು, ಶಾಸಕರು, ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಜೊತೆಗೆ ಎಲ್ಲರ ಒಪ್ಪಿಗೆಯ ನಾಯಕ ಎಂಬ ಸಂದೇಶವನ್ನು ಹೈಕಮಾಂಡ್ ನಾಯಕರಿಗೆ ನೀಡುವುದು ಡಿಕೆಶಿ ಅಜೆಂಡಾ ಎನ್ನಲಾಗುತ್ತಿದೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm