ಬ್ರೇಕಿಂಗ್ ನ್ಯೂಸ್
04-03-26 05:06 pm HK News Staffer ಕರ್ನಾಟಕ
ಬೆಂಗಳೂರು, ಮಾರ್ಚ್ 4 : ಅತ್ತೆ ಜೊತೆ ಅಡುಗೆ ವಿಚಾರಕ್ಕೆ ನಡೆದ ಗಲಾಟೆಯಿಂದ ಮನನೊಂದು ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಅಬ್ಬಿಗೆರೆ ಪ್ರದೇಶದಲ್ಲಿ ನಡೆದಿದೆ.
ಮೃತರನ್ನು 35 ವರ್ಷದ ಸಾಫ್ಟ್ವೇರ್ ಎಂಜಿನಿಯರ್ ಸುಷ್ಮಾ ಎಂದು ಗುರುತಿಸಲಾಗಿದೆ. ಮೃತ ಸುಷ್ಮಾ ಈ ಹಿಂದೆ ಡೆಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಐದು ವರ್ಷಗಳ ಹಿಂದೆ ಪುನೀತ್ ಕುಮಾರ್ ಅವರನ್ನು ಮದುವೆಯಾಗಿದ್ದರು. ದಂಪತಿಗೆ ನಾಲ್ಕು ವರ್ಷದ ಮಗನಿದ್ದಾನೆ.
ಮನೆಯಲ್ಲಿ ಸಣ್ಣ ಸಣ್ಣ ಕಾರಣಗಳಿಗೆ ಆಗಾಗ್ಗೆ ಜಗಳ ನಡೆಯುತ್ತಿತ್ತು. ಮಂಗಳವಾರ ಸುಷ್ಮಾ ಅವರು ಅತ್ತೆ ಕಲ್ಪನಾ ಅವರೊಂದಿಗೆ ಅಡುಗೆ ಮಾಡುವ ವಿಚಾರದಲ್ಲಿ ಜಗಳವಾಡಿದ್ದು ಎರಡೂ ಕಡೆಯಿಂದ ಬೈದಾಟ ನಡೆದಿತ್ತು. ಇದೇ ಕಾರಣಕ್ಕೆ ಮನನೊಂದು ಸುಷ್ಮಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅತ್ತೆ ಅಡುಗೆ ಮಾಡುವ ಸಂದರ್ಭದಲ್ಲಿ ವಿನಾಕಾರಣ ಅಡ್ಡಿ ಪಡಿಸುತ್ತಿದ್ದರು ಹಾಗೂ ಕಿರುಕುಳ ನೀಡುತ್ತಿದ್ದರು. ಇದರಿಂದ ಮಾನಸಿಕವಾಗಿ ನೊಂದಿದ್ದ ಸುಷ್ಮಾ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸುಷ್ಮಾ ಕುಟುಂಬಸ್ಥರು ಆರೋಪಿಸಿದ್ದಾರೆ.
ಸುಷ್ಮಾ ಕುಟುಂಬಸ್ಥರು ನೀಡಿದ ದೂರಿನಂತೆ ವರದಕ್ಷಿಣೆ ಕಿರುಕುಳ ಆರೋಪದಲ್ಲಿ ಪೊಲೀಸರು ಸುಷ್ಮಾ ಅವರ ಪತಿ ಪುನೀತ್ ಕುಮಾರ್ ಅವರನ್ನು ಬಂಧಿಸಿದ್ದಾರೆ. ಅತ್ತೆ ಕಲ್ಪನಾ ನಾಪತ್ತೆಯಾಗಿದ್ದು ಅವರ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm