ಬ್ರೇಕಿಂಗ್ ನ್ಯೂಸ್
05-03-26 08:41 pm HK News Staffer ಕರ್ನಾಟಕ
ಬೆಂಗಳೂರು, ಮಾರ್ಚ್ 05: ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ, ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ರಾಜ್ಯದ ಹಲವು ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ಬೆಂಗಳೂರು, ಮೈಸೂರು, ಮಂಡ್ಯ, ಬಾಗಲಕೋಟೆ, ಧಾರವಾಡ, ಹಾಸನ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳ ಮನೆಗಳು ಹಾಗೂ ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಲಾಗಿದ್ದು, ಪರಿಶೀಲನೆ ನಡೆಸಲಾಗುತ್ತಿದೆ.
ಎಲ್ಲೆಲ್ಲಿ, ಯಾರ ಮೇಲೆ ದಾಳಿ?
ಬೆಂಗಳೂರಿನ ಯಲಹಂಕ ಗ್ರಾಮದ ರೈತ ಸೇವಾ ಸಹಕಾರ ಬ್ಯಾಂಕ್ನ ಸಿಇಒ ಶಶಿಧರ್ ಆರ್., ಹೆಬ್ಬಾಳದ ಪಶು ವೈದ್ಯಕೀಯ ಕಾಲೇಜಿನ ಅಸಿಸ್ಟೆಂಟ್ ಪ್ರೊಫೆಸರ್ ಹೆಚ್.ಸಿ ಇಂದ್ರೇಶ್, ಕೆಆರ್ಐಡಿಎಲ್ ಚೀಫ್ ಇಂಜಿನಿಯರ್ ವಸಂತ್ ವಿ ನಾಯ್ಕ್ ಅವರ ಮನೆ ಮತ್ತು ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ ಮುಂದುವರೆದಿದೆ.
ಅಲ್ಲದೆ ಯಾದಗಿರಿಯ ಎಲೆಕ್ಟ್ರಿಕಲ್ ಇಲಾಖೆ ಡೆಪ್ಯುಟಿ ಎಲೆಕ್ಟ್ರಿಕಲ್ ಇನ್ಸ್ಪೆಕ್ಟರ್ ವಿರೇಶ್ ಹಿರೇಮಠ, ಮಂಡ್ಯದ ಸಾರ್ವಜನಿಕ ಕಾಮಗಾರಿಗಳ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಎಸ್.ಸತೀಶ್, ಧಾರವಾಡದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕು ಅಧಿಕಾರಿ ಎಂ.ಕೆ. ಸುರಕೋಡ, ಮೈಸೂರಿನ ಜಲಮಂಡಳಿಯ ಎಇಇ ಹಾಗೂ ಇಇ (ಇನ್ಚಾರ್ಜ್) ಆಶಿಫ್ ಇಕ್ಬಾಲ್, ವಿಜಯಪುರದ ಕೃಷ್ಣಭಾಗ್ಯ ಜಲ ನಿಗಮದ ಜೂನಿಯರ್ ಇಂಜಿನಿಯರ್ ಪ್ರಕಾಶ್ ಪಿ.ಜಿ ಅವರಿಗೆ ಸೇರಿದ ಸ್ಥಳಗಳಲ್ಲಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.

ಬಾಗಿಲು ತೆಗೆಯದ ಎಇಇ:
ಹಾಸನದಲ್ಲಿ ಲೋಕಾಯುಕ್ತ ಅಧಿಕಾರಿಗಳ ದಾಳಿ ವೇಳೆ ಮಹಾನಗರ ಪಾಲಿಕೆಯ ಎಇಇ ಎಂ.ಸಿ. ಸತ್ಯನಾರಾಯಣ ಅವರು ಮನೆ ಬಾಗಿಲು ತೆರೆಯದ ಹಿನ್ನೆಲೆ ಸುಮಾರು 2 ತಾಸಿಗೂ ಹೆಚ್ಚು ಸಮಯ ಅಧಿಕಾರಿಗಳ ತಂಡ ಮನೆ ಮುಂದೆ ಕಾಯಬೇಕಾದ ಪರಿಸ್ಥಿತಿ ಉಂಟಾಗಿತ್ತು.
ಬೆಳಗ್ಗೆ 5.15 ಕ್ಕೆ ಲೋಕಾಯುಕ್ತ ಡಿವೈಎಸ್ಪಿ ಸುರೇಶ್ ಕುಮಾರ್, ಇನ್ಸ್ಪೆಕ್ಟರ್ ಶಿಲ್ಪಾ ನೇತೃತ್ವದಲ್ಲಿ ಅಧಿಕಾರಿಗಳು, ಸತ್ಯನಾರಾಯಣ ಅವರ ವಿದ್ಯಾನಗರದ ಮನೆಯ ಬಳಿ ಬರುತ್ತಿದ್ದಂತೆ ಲೈಟ್ ಆಫ್ ಮಾಡಿ, ಬಾಗಿಲು ತೆರೆದಿರಲಿಲ್ಲ.
ಮನೆಯ ಮೇಲೆ ಹತ್ತಿ ಕಿಟಕಿ ಬಡಿದು, ಕೂಗಿದರು ಮನೆಯ ಬಾಗಿಲು ತೆರೆದಿರಲಿಲ್ಲ. ಸತತ 2 ಗಂಟೆಗಳ ಕಾಲ ಬಾಗಿಲು ತೆರೆಯಿಸಲು ಅಧಿಕಾರಿಗಳು ಹರಸಾಹಪಟ್ಟರು. ಬಳಿಕ ಕೆಆರ್ ಪುರಂ ಪೊಲೀಸ್ ಠಾಣಾ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದರು.
ಬಾಗಿಲು ತೆರೆದ ಎಇಇ:
ಸಿಸಿಟಿವಿಯ ಮುಂದೆ ನಿಂತು ಬಾಗಿಲು ತೆರೆಯುವಂತೆ ಅಧಿಕಾರಿಗಳು ಹೇಳಿದ್ದರು. ಬಳಿಕ ಎಇಇ ಮನೆಯೆ ಬಾಗಿಲು ತೆರೆದಿದ್ದಾರೆ. ನಂತರ ಲೋಕಾಯುಕ್ತ ಅಧಿಕಾರಿಗಳು, ಮನೆಯೊಳಗೆ ಪ್ರವೇಶಿಸಿ ಪರಿಶೀಲನೆ ನಡೆಸಿದ್ದಾರೆ.
ಸ್ಥಳಕ್ಕೆ ಲೋಕಾಯುಕ್ತ ಎಸ್ಪಿ ನಂದಿನಿ ಭೇಟಿ:
ಇನ್ನೂ ಸತ್ಯನಾರಾಯಣ ಬಾಗಿಲು ತೆರೆಯದ ಕಾರಣ ಸ್ಥಳಕ್ಕೆ ಲೋಕಾಯುಕ್ತ ಎಸ್ಪಿ ನಂದಿನಿ ಕೂಡ ಭೇಟಿ ನೀಡಿ ಮೇಲ್ವಿಚಾರಣೆ ನಡೆಸಿದ್ದಾರೆ. ಬಳಿಕ ಅಧಿಕಾರಿಗಳಿಂದ ಮಾಹಿತಿ ಪಡೆದು ಅಲ್ಲಿಂದ ತೆರಳಿದ್ದರು.
ಬಿಸಿಎಂ ಅಧಿಕಾರಿ ಮೇಲೆ ಲೋಕಾ ದಾಳಿ:
ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ (ಬಿಸಿಎಂ) ಅಧಿಕಾರಿ ಎಂ.ಕೆ. ಸುರಕೋಡ ಅವರ ನಿವಾಸ ಹಾಗೂ ಸಂಬಂಧಿಸಿದ ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗದಗ ನಗರದ ವಿಶ್ವೇಶ್ವರ ನಗರದ ಅವರ ನಿವಾಸ ಸೇರಿದಂತೆ ಧಾರವಾಡ ಮತ್ತು ರೋಣ ತಾಲೂಕಿನ ಕೌಜಗೇರಿ ಸೇರಿ ಒಟ್ಟು ಆರು ಸ್ಥಳಗಳಲ್ಲಿ ಏಕಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಲೋಕಾಯುಕ್ತ ಎಸ್ಪಿ ಎಸ್.ಟಿ. ಸಿದ್ದಲಿಂಗಪ್ಪ ಅವರ ನೇತೃತ್ವದಲ್ಲಿ ಆರು ತಂಡಗಳನ್ನು ರಚಿಸಿ ಈ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಗದಗ ಲೋಕಾಯುಕ್ತ ಡಿವೈಎಸ್ಪಿ ವಿಜಯ ಬಿರಾದಾರ ಸೇರಿದಂತೆ ಹಲವಾರು ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ.
ರೋಣ ತಾಲೂಕಿನ ಕೌಜಗೇರಿ ಗ್ರಾಮದವರಾದ ಎಂ.ಕೆ. ಸುರಕೋಡ ಅವರು ಶಿರಹಟ್ಟಿಯಲ್ಲಿ ಬಿಸಿಎಂ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸೇವಾ ಅವಧಿಯಲ್ಲಿ ಅಕ್ರಮವಾಗಿ ಅಪಾರ ಆಸ್ತಿ ಗಳಿಸಿರುವ ಆರೋಪಗಳ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದ್ದು, ಪರಿಶೀಲನೆ ಪೂರ್ಣಗೊಂಡ ಬಳಿಕ ಅಧಿಕೃತ ಮಾಹಿತಿ ನೀಡಲಾಗುವುದು ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm