ಬ್ರೇಕಿಂಗ್ ನ್ಯೂಸ್
06-03-26 07:03 pm HK News Staffer ಕರ್ನಾಟಕ
ಕಾರವಾರ, ಮಾರ್ಚ್ 06: ಉತ್ತರ ಕನ್ನಡ ಜಿಲ್ಲೆಯ ಜನರ ಬಹುಕಾಲದ ಬೇಡಿಕೆಯಾಗಿದ್ದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣದ ಕನಸು ಕೊನೆಗೂ ನನಸಾಗುತ್ತಿದೆ. 2026–27ನೇ ಸಾಲಿನ ಕರ್ನಾಟಕ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರವಾರ ಹಾಗೂ ಯಾದಗಿರಿಯಲ್ಲಿ ತಲಾ 100 ಕೋಟಿ ರೂ. ವೆಚ್ಚದಲ್ಲಿ ಹೊಸ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪಿಸುವುದಾಗಿ ಮಹತ್ವದ ಘೋಷಣೆ ಮಾಡಿದ್ದಾರೆ.
ಈ ಹಿಂದೆ ಕಾರವಾರದಲ್ಲಿ ನಿರ್ಮಾಣಗೊಂಡಿದ್ದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಉದ್ಘಾಟನೆ ವೇಳೆ ಸಿಎಂ ಸಿದ್ದರಾಮಯ್ಯ, ಸಾರ್ವಜನಿಕರು ಮತ್ತು ಜನಪ್ರತಿನಿಧಿಗಳ ಒತ್ತಾಯದ ಹಿನ್ನೆಲೆಯಲ್ಲಿ ಮುಂದಿನ ಬಜೆಟ್‌ನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡುವ ಭರವಸೆ ನೀಡಿದ್ದರು. ಇದೀಗ ಬಜೆಟ್‌ನಲ್ಲಿ ಅನುದಾನ ಮೀಸಲಿಡುವ ಮೂಲಕ ತಮ್ಮ ಭರವಸೆಯನ್ನು ಈಡೇರಿಸಿದ್ದಾರೆ.
100 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಈ ಸುಸಜ್ಜಿತ ಆಸ್ಪತ್ರೆ, ಉನ್ನತ ಮಟ್ಟದ ವೈದ್ಯಕೀಯ ಸೇವೆಗಳಿಗಾಗಿ ಮಂಗಳೂರು, ಉಡುಪಿ ಹಾಗೂ ಗೋವಾ ನಗರಗಳಿಗೆ ತೆರಳಬೇಕಾದ ಕಾರವಾರ ಮತ್ತು ಮಲೆನಾಡು ಭಾಗದ ಜನರ ಸಂಕಷ್ಟವನ್ನು ಕಡಿಮೆ ಮಾಡುವ ನಿರೀಕ್ಷೆ ಇದೆ. ತುರ್ತು ಚಿಕಿತ್ಸೆ, ವಿಶೇಷ ಶಸ್ತ್ರಚಿಕಿತ್ಸೆ ಹಾಗೂ ಆಧುನಿಕ ಆರೋಗ್ಯ ಸೇವೆಗಳಿಗೆ ಇದು ಪ್ರಮುಖ ಕೇಂದ್ರವಾಗಲಿದೆ ಎಂದು ನಿರೀಕ್ಷಿಸಲಾಗಿದೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm