ಬ್ರೇಕಿಂಗ್ ನ್ಯೂಸ್
07-03-26 12:01 pm HK News Staffer ಕರ್ನಾಟಕ
ವಿಜಯವಾಡ, ಮಾರ್ಚ್ 06: ಜನಸಂಖ್ಯೆ ಕುಸಿತದ ಹಿನ್ನೆಲೆ ದಂಪತಿಗಳು ಹೆಚ್ಚು ಮಕ್ಕಳನ್ನು ಹೊಂದಲು ಉತ್ತೇಜನ ನೀಡುವ ಉದ್ದೇಶದಿಂದ ಆಂಧ್ರಪ್ರದೇಶ ಸರ್ಕಾರ ಮಹತ್ವದ ಯೋಜನೆ ಘೋಷಿಸಿದೆ. 3ನೇ ಮಗುವಿಗೆ ₹25,000 ನಗದು ಪ್ರೋತ್ಸಾಹಧನ ಹಾಗೂ 18 ವರ್ಷದ ತನಕ ಉಚಿತ ಶಿಕ್ಷಣ ನೀಡಲು ಸರ್ಕಾರ ತೀರ್ಮಾನಿಸಿದ್ದು, ಇದರ ಕುರಿತ ಕರಡು ಮಸೂದೆಯನ್ನು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ವಿಧಾನಸಭೆಯಲ್ಲಿ ಪ್ರಕಟಿಸಿದ್ದಾರೆ. ಈ ಯೋಜನೆಯನ್ನು ಏಪ್ರಿಲ್ 1ರಿಂದ ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸುತ್ತಿದೆ.
‘ಪೋಷಣ–ಶಿಕ್ಷಾ–ಸುರಕ್ಷಾ ಪ್ಯಾಕೇಜ್’ ಅಡಿಯಲ್ಲಿ ಈ ಯೋಜನೆ ಜಾರಿಯಾಗಲಿದೆ. ಇದರ ಜೊತೆಗೆ, ಕೆಲಸ ಮಾಡುವ ತಾಯಂದಿರಿಗೆ 12 ತಿಂಗಳ ಮಾತೃತ್ವ ರಜೆ ಹಾಗೂ ತಂದೆಗಳಿಗೆ 2 ತಿಂಗಳ ಪಿತೃತ್ವ ರಜೆ ನೀಡುವ ಪ್ರಸ್ತಾವನೆಯೂ ಇದೆ. ಐವಿಎಫ್ (IVF) ಮೂಲಕ ಮಗು ಪಡೆಯಲು ಬಯಸುವ ದಂಪತಿಗಳಿಗೆ ಸಬ್ಸಿಡಿ ದರದಲ್ಲಿ ಚಿಕಿತ್ಸೆ ಸೌಲಭ್ಯ ನೀಡಲಾಗುತ್ತದೆ.
ಇದೇ ವೇಳೆ, 3 ಮಕ್ಕಳನ್ನು ಹೊಂದಿರುವ ಸರ್ಕಾರಿ ನೌಕರರು ನಿವೃತ್ತಿಯ ವಯಸ್ಸಿನ ಹಂತಕ್ಕೆ ಬಂದಾಗ ಅವರಿಗೆ 15 ದಿನಗಳ ಯೋಗಕ್ಷೇಮ ರಜೆ ಹಾಗೂ ₹50,000 ಆರೋಗ್ಯ ನಿಧಿ ನೀಡುವ ವ್ಯವಸ್ಥೆಯೂ ಯೋಜನೆಯಲ್ಲಿ ಸೇರಿಸಲಾಗಿದೆ.
ಯೋಜನೆಗೆ ಕಾರಣವೇನು?
ಆಂಧ್ರಪ್ರದೇಶದಲ್ಲಿ ಜನನ ಪ್ರಮಾಣದಲ್ಲಿ ಗಣನೀಯ ಕುಸಿತ ಕಂಡುಬಂದಿದೆ. 1993ರಲ್ಲಿ ರಾಜ್ಯದ ಒಟ್ಟು ಫಲವತ್ತತೆ ದರ (ಟಿಎಫ್‌ಆರ್) 3.0 ಇತ್ತಾದರೆ, ಇದೀಗ ಅದು 1.4ಕ್ಕೆ ಇಳಿದಿದೆ. ಇದು ದಕ್ಷಿಣ ಭಾರತದ ಇತರ ರಾಜ್ಯಗಳಿಗೆ ಹೋಲಿಸಿದರೆ ಅತ್ಯಂತ ಕಡಿಮೆ ಪ್ರಮಾಣವಾಗಿದೆ.
ಈ ಪರಿಸ್ಥಿತಿ ಮುಂದುವರೆದರೆ ರಾಜ್ಯದ ಆರ್ಥಿಕ ಬೆಳವಣಿಗೆಗೂ ಹಾಗೂ ಭವಿಷ್ಯದಲ್ಲಿ ಲೋಕಸಭಾ ಸ್ಥಾನಗಳ ಸಂಖ್ಯೆಯ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಸರ್ಕಾರ ಆತಂಕ ವ್ಯಕ್ತಪಡಿಸಿದೆ.
ಈ ಹಿನ್ನೆಲೆಯಲ್ಲಿ ಜನಸಂಖ್ಯೆ ಕುಸಿತ ತಡೆಯಲು ಮೊದಲು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ 2ಕ್ಕಿಂತ ಹೆಚ್ಚು ಮಕ್ಕಳಿರುವವರಿಗೆ ಇದ್ದ ಸ್ಪರ್ಧಾ ನಿರ್ಬಂಧವನ್ನು ಸರ್ಕಾರ ತೆರವುಗೊಳಿಸಿತ್ತು. ಇದೀಗ ದಂಪತಿಗಳನ್ನು ಹೆಚ್ಚು ಮಕ್ಕಳನ್ನು ಹೊಂದಲು ಉತ್ತೇಜಿಸುವ ಉದ್ದೇಶದಿಂದ ಹೊಸ ಯೋಜನೆಯನ್ನು ಘೋಷಿಸಲಾಗಿದೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm