ಬ್ರೇಕಿಂಗ್ ನ್ಯೂಸ್
10-03-26 10:49 am HK News Staffer ಕರ್ನಾಟಕ
ಬೆಂಗಳೂರು, ಮಾ.10: ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅನುಮಾನಾಸ್ಪದ ಪಾರ್ಸೆಲ್ವೊಂದು ಬಂದಿದ್ದು, ಅದರೊಳಗಿನ ವಸ್ತುಗಳನ್ನು ಕಂಡು ಸಿಬ್ಬಂದಿ ಬೆಚ್ಚಿಬಿದ್ದಿದ್ದಾರೆ. ಪಾರ್ಸೆಲ್ನಲ್ಲಿ ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ, ಹೂವಿನ ಹಾರ ಸೇರಿದಂತೆ ಹಲವು ವಿಚಿತ್ರ ವಸ್ತುಗಳು ಪತ್ತೆಯಾಗಿದ್ದು, ವಾಮಾಚಾರ ನಡೆಸಿರುವ ಶಂಕೆ ವ್ಯಕ್ತವಾಗಿದೆ.
ವಿಮಾನ ನಿಲ್ದಾಣದ ಪೋಸ್ಟ್ ಆಫೀಸ್ಗೆ ಬಂದಿದ್ದ ಈ ಪಾರ್ಸೆಲ್ ಅನ್ನು ಪರಿಶೀಲಿಸಿದಾಗ ಅದರೊಳಗೆ ಮಹಿಳೆ ಮತ್ತು ಪುರುಷನ ಬೆತ್ತಲೆ ಫೋಟೋಗಳನ್ನು ಇಟ್ಟು, ಅದರ ಸುತ್ತ ಕೊಳೆತ ಟೊಮೆಟೋ, ಹೂವಿನ ಹಾರ, ಕಬ್ಬಿಣದ ತುಂಡು ಹಾಗೂ ಟೂತ್ಪೇಸ್ಟ್ ಇಟ್ಟಿರುವುದು ಕಂಡುಬಂದಿದೆ. ಈ ದೃಶ್ಯಗಳನ್ನು ಕಂಡ ಸಿಬ್ಬಂದಿ ಅಚ್ಚರಿಗೊಳಗಾಗಿದ್ದಾರೆ.
ಆ ಎಲ್ಲ ವಸ್ತುಗಳಿಗೆ ಪ್ಯಾಕ್ ಮಾಡಿ ಯಾರೋ ಕಿರಾತಕರು ಪಾರ್ಸೆಲ್ ಮಾಡಿದ್ದಾರೆ ಎನ್ನಲಾಗುತ್ತಿದೆ. ಪಾರ್ಸೆಲ್ನಲ್ಲಿದ್ದ ವಸ್ತುಗಳನ್ನು ನೋಡಿ ಅಲ್ಲಿನ ಸಿಬ್ಬಂದಿಯ ಮಾನಸಿಕ ಸ್ಥಿತಿಯ ಮೇಲೂ ಪರಿಣಾಮ ಬೀರಿದ್ದು, ಕರ್ತವ್ಯ ನಿರ್ವಹಣೆಯಲ್ಲಿ ನಿರಾಸಕ್ತಿ ಕಾಣಿಸುತ್ತಿದೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದ ಸಿಬ್ಬಂದಿ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದ್ದು, ಈ ಕೃತ್ಯ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ಸದ್ಯ ಈ ಪಾರ್ಸೆಲ್ ಯಾರು ಕಳುಹಿಸಿದ್ದಾರೆ ಮತ್ತು ಇದರ ಹಿಂದೆ ಇರುವ ಉದ್ದೇಶ ಏನು ಎಂಬುದರ ಬಗ್ಗೆ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm