ಬ್ರೇಕಿಂಗ್ ನ್ಯೂಸ್
13-03-26 09:44 am HK News Staffer ಕರ್ನಾಟಕ
ಕೊಪ್ಪಳ, ಮಾ 14: ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಸ್ಲೀಪರ್ ಬಸ್‌ನಿಂದ 90 ಲಕ್ಷ ಮೌಲ್ಯದ ಬಂಗಾರವನ್ನ ನಾಲ್ವರು ಖದೀಮರು ದರೋಡೆ ಮಾಡಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಬಸ್ ರಾತ್ರಿ ಊಟಕ್ಕೆ ನಿಲ್ಲಿಸಿದ್ದ ಸಂದರ್ಭದಲ್ಲಿ ಬಸ್ಸಿನಲ್ಲೇ ಮಲಗಿದ್ದ ಪ್ರಯಾಣಿಕರಿಂದ ಈ ಕೃತ್ಯ ನಡೆದಿದ್ದು, ಘಟನೆಯ ಸಂಪೂರ್ಣ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಕೊಪ್ಪಳ ಜಿಲ್ಲೆಯ ಹೊರವಲಯದಲ್ಲಿ ನಡೆದ ಬಂಗಾರದ ದರೋಡೆ ಪ್ರಕರಣ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಮಂತ್ರಾಲಯದಿಂದ ಮಂಗಳೂರಿಗೆ ಬಸ್‌ನಲ್ಲಿ ಸಾಗಿಸುತ್ತಿದ್ದ 90 ಲಕ್ಷ ರೂ. ಒಡವೆ ಇರೋ ಬಂಗಾರದ ಚೀಲವನ್ನು ಖದೀಮರು ಕಳ್ಳತನ ಮಾಡಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ನಾಲ್ಕು ಜನರಿಂದ ಈ ದರೋಡೆ ನಡೆದಿದೆ. ಇದೀಗ ಪೊಲೀಸರು ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ.
ಸ್ಲೀಪರ್ ಬಸ್‌ನಲ್ಲೇ ಬಂದ ಮಾಸ್ಟರ್ ಮೈಂಡ್ ಕಳ್ಳ , ಸಿಂಧನೂರಿನಿಂದ ಬಸ್‌ನಲ್ಲೇ ಪ್ರಯಾಣಿಸಿ ಕೊಪ್ಪಳಕ್ಕೆ ಬಂದಿದ್ದಾನೆ. ಅದೇ ವೇಳೆ ಇನ್ನೂ ಮೂವರು ಖದೀಮರು ಬೇರೆ ವಾಹನದಲ್ಲಿ ಬಸ್‌ನ್ನು ಹಿಂಬಾಲಿಸಿಕೊಂಡು ಬಂದಿದ್ದಾರೆ. ಒಟ್ಟು ನಾಲ್ವರು ಸೇರಿಕೊಂಡು ಈ ದರೋಡೆ ಕೃತ್ಯವನ್ನು ಸಂಚು ರೂಪಿಸಿ ಕಳ್ಳತನ ನಡೆಸಿದ್ದಾರೆ.
ಮಂತ್ರಾಲಯದಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಶ್ರೀ ಕುಮಾರ್ ಖಾಸಗಿ ಬಸ್ ಕೊಪ್ಪಳ ಹೊರವಲಯದಲ್ಲಿ ಊಟಕ್ಕಾಗಿ ನಿಲ್ಲಿಸಿತ್ತು. ಆ ವೇಳೆ ಊಟಕ್ಕೆ ಹೋದ ಮಹಮ್ಮದ್ ಮತ್ತು ಇರ್ಷಾದ್ ಎಂಬ ಪ್ರಯಾಣಿಕರ ಬ್ಯಾಗಿನಲ್ಲಿದ್ದ ಬಂಗಾರದ ಚೀಲವನ್ನು ಖದೀಮರು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದಾರೆ.
ಹೋಟೆಲ್ ಮುಂಭಾಗದಲ್ಲಿದ್ದ ಸಿಸಿ ಕ್ಯಾಮರದಲ್ಲಿ ಈ ದರೋಡೆ ಕೃತ್ಯದ ಸಂಪೂರ್ಣ ದೃಶ್ಯ ದಾಖಲಾಗಿದ್ದು, ಆರೋಪಿಗಳು ಹೇಗೆ ಬಸ್ ಹತ್ತಿ ಬಂಗಾರದ ಚೀಲವನ್ನು ಕದ್ದುಕೊಂಡು ಹೋಗಿದ್ದಾರೆ ಎಂಬುದು ಸ್ಪಷ್ಟವಾಗಿ ಕಾಣಿಸುತ್ತಿದೆ. ಈ ದೃಶ್ಯಾವಳಿಗಳನ್ನು ಆಧರಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm