ಬ್ರೇಕಿಂಗ್ ನ್ಯೂಸ್
20-03-26 12:02 pm HK News Staffer ಕರ್ನಾಟಕ
ಬುಲಂದ್‌ಶಹರ್, ಮಾರ್ಚ್ 20: ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ವಿಚಿತ್ರ ಮತ್ತು ಬೆಚ್ಚಿಬೀಳಿಸುವ ಘಟನೆೊಂದು ಬೆಳಕಿಗೆ ಬಂದಿದೆ. ‘ನೀಲಿ ಡ್ರಮ್ ಮತ್ತು ಸಿಮೆಂಟ್’ ಎಂಬ ಸೋಶಿಯಲ್ ಮೀಡಿಯಾ ಪೋಸ್ಟ್‌ನಿಂದ ಆತಂಕಗೊಂಡ ಪತಿಯೋರ್ವ, ಜೀವಭಯದಿಂದ ಪತ್ನಿಯನ್ನು ಆಕೆಯ ಪ್ರಿಯಕರನ ಜೊತೆ ಕಳುಹಿಸಿ ಕೊಟ್ಟಿದ್ದು ಸದ್ಯ ಈ ಘಟನೆ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.
ದೌಲತ್‌ಪುರ ಗ್ರಾಮದ ದಿನಗೂಲಿ ಕಾರ್ಮಿಕ ರಾಜಕುಮಾರ್ ಕಳೆದ ಏಳು ವರ್ಷಗಳ ಹಿಂದೆ ಮದುವೆಯಾಗಿದ್ದ. ದಂಪತಿಗೆ ಆರು ತಿಂಗಳ ಮಗು ಕೂಡ ಇದೆ. ಆದರೆ ಇತ್ತೀಚೆಗೆ ರಾಜ್‌ಕುಮಾರ್ ಪತ್ನಿ ಸೋಶಿಯಲ್ ಮೀಡಿಯಾದಲ್ಲಿ ಪರಿಚಯವಾದ ವ್ಯಕ್ತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದು ಇದೇ ವಿಚಾರವಾಗಿ ಮನೆಯಲ್ಲಿ ಪತಿ ಹಾಗೂ ಪತ್ನಿ ನಡುವೆ ನಿತ್ಯ ಜಗಳ ನಡೆಯುತ್ತಿತ್ತು.
ಇತ್ತೀಚೆಗೆ ರಾಜ್‌ಕುಮಾರ್ ಪತ್ನಿಯ ಫೋನ್ ಪರಿಶೀಲಿಸಿದಾಗ ಪ್ರಿಯಕರನ ಜೊತೆಗಿನ ನಗ್ನ ಫೋಟೋಗಳು, ಫೇಸ್‌ಬುಕ್‌ನಲ್ಲಿ ಹಂಚಿಕೊಂಡ ಕೊಲೆ ಸ್ಟೋರಿಗಳು ಮತ್ತು “ನೀಲಾ ಡ್ರಮ್ ಔರ್ ಸಿಮೆಂಟ್” ಎಂಬ ಕ್ಯಾಪ್ಷನ್ ಹಾಕಿರುವ ಒಂದು ಫೋಟೋ ಇರುವುದು ಕಂಡುಬಂದಿತ್ತು. ರಾಜ್‌ಕುಮಾರ್ ಇದನ್ನು ತನ್ನನ್ನು ಕೊಲ್ಲಲು ಸಂಚು ರೂಪಿಸುವ ಗುಪ್ತ ಸಂದೇಶವೆಂದು ಭಯಭೀತನಾಗಿದ್ದಾನೆ.
“ನೀಲಿ ಡ್ರಮ್ ಮತ್ತು ಸಿಮೆಂಟ್” ಎಂಬ ಶೀರ್ಷಿಕೆ ಕಳೆದ ವರ್ಷ ಮಾರ್ಚ್ ತಿಂಗಳಲ್ಲಿ ನಡೆದ ಕೊಲೆ ಪ್ರಕರಣವನ್ನು ನೆನಪಿಸುತ್ತದೆ. ಆ ಕೊಲೆ ಪ್ರಕರಣದಲ್ಲಿ ಮಹಿಳೆ ಮುಸ್ಕಾನ್ ರಸ್ತೋಗಿ ತನ್ನ ಪ್ರಿಯಕರ ಸಾಹಿಲ್ ಶುಕ್ಲಾ ಜೊತೆ ಸೇರಿಕೊಂಡು ತನ್ನ ಪತಿ ಸೌರಭ್ ರಜಪೂತ್ನನ್ನು ಕೊಂದು, ಸೌರಭ್‌ನ ದೇಹವನ್ನು 15 ತುಂಡುಗಳಾಗಿ ಕತ್ತರಿಸಿ ಮೀರತ್‌ನ ಬ್ರಹ್ಮಪುರಿ ಪ್ರದೇಶದ ಅವರ ಮನೆಯಲ್ಲಿ ನೀಲಿ ಡ್ರಮ್ನೊಳಗೆ ತುಂಬಿ ಸಿಮೆಂಟ್ ಹಾಕಿ ಮುಚ್ಚಿದ್ದಳು. ದೇಶದಾದ್ಯಂತ ಸದ್ದು ಮಾಡಿದ್ದ ಈ ಸುದ್ದಿ ರಾಜ್‌ಕುಮಾರ್ ಕಿವಿಗೂ ತಲುಪಿತ್ತು. ಅಲ್ಲದೆ ರಾಜ್‌ಕುಮಾರ್ ಪತ್ನಿಯೊಂದಿಗೆ ಜಗಳ ಮಾಡಿದ್ದ ವೇಳೆ ಆಕೆ, “ನೀನೂ ಅಡ್ಡ ಬಂದರೆ ನಿನ್ನನ್ನು ಡ್ರಮ್‌ನಲ್ಲಿ ಪ್ಯಾಕ್ ಮಾಡುತ್ತೇನೆ” ಎಂದು ಬೆದರಿಕೆ ಹಾಕಿದ್ದಾಳೆ ಎನ್ನಲಾಗಿದೆ. ಇದರಿಂದ ಭಯಗೊಂಡ ರಾಜಕುಮಾರ್ ಪೊಲೀಸರ ಮೊರೆ ಹೋಗಿದ್ದಾನೆ.
ಮಹಿಳಾ ಮಧ್ಯಸ್ಥಿಕೆ ಕೇಂದ್ರದಲ್ಲಿ ನಡೆದ ಸಮಾಲೋಚನೆ ವೇಳೆ ಪತ್ನಿ ತನ್ನ ಪ್ರಿಯಕರನ ಜೊತೆಗೇ ಇರಲು ಹಠ ಹಿಡಿದಿದ್ದು, ಕೊನೆಗೆ ತನ್ನ ಜೀವ ಉಳಿಸಿಕೊಳ್ಳಲು ರಾಜಕುಮಾರ್ ಆಕೆಯನ್ನು ಪ್ರಿಯಕರನೊಂದಿಗೆ ಕಳುಹಿಸಲು ಒಪ್ಪಿಕೊಂಡಿದ್ದಾನೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm