ಬ್ರೇಕಿಂಗ್ ನ್ಯೂಸ್
21-03-26 05:32 pm HK News Staffer ಕರ್ನಾಟಕ
ತುಮಕೂರು, ಮಾ.21: ಜಿಲ್ಲೆಯ ಪಾವಗಡ ಪಟ್ಟಣದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಕಚೇರಿಯಲ್ಲೇ ದುರಂತ ಅಂತ್ಯ ಕಂಡ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಮಲ್ಲಿಕಾರ್ಜುನ ಎಂದು ಗುರುತಿಸಲಾಗಿದೆ. ಮೃತ ಮಲ್ಲಿಕಾರ್ಜುನ್ ನಿನ್ನೆ ತಮ್ಮ ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದು ಈ ಬಗ್ಗೆ ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತ ಮಲ್ಲಿಕಾರ್ಜುನ ಕಳೆದ ಮೂರು ವರ್ಷಗಳಿಂದ ಪಾವಗಡ ಸಮಾಜ ಕಲ್ಯಾಣ ಇಲಾಖೆಯಲ್ಲಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು. ಮಲ್ಲಿಕಾರ್ಜುನ್ ನಿವೃತ್ತಿಗೆ ಇನ್ನೂ ಕೇವಲ ಒಂದು ವಾರವಷ್ಟೇ ಭಾಕಿ ಇತ್ತು. ಆದ್ರೆ ನಿವೃತ್ತಿಗೂ ಮುನ್ನವೇ ಮಲ್ಲಿಕಾರ್ಜುನ್ ಕೊನೆಯುಸಿರೆಳೆದಿದ್ದಾರೆ.
ಸಾವಿಗೂ ಮುನ್ನ ಅವರು ಸಹೋದ್ಯೋಗಿಗಳಿಗೆ ಕಳುಹಿಸಿದ ವಿಡಿಯೋದಲ್ಲಿ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ಪ ನೀಡಿದ ಕಿರುಕುಳವೇ ಈ ನಿರ್ಧಾರಕ್ಕೆ ಕಾರಣ ಎಂದು ಆರೋಪಿಸಿದ್ದಾರೆ. ಅವರಿಗೆ ದೇವರೇ ಶಿಕ್ಷೆ ನೀಡುತ್ತಾನೆ. ಅವನು ತರ್ಲೆ ಇರುವುದರಿಂದ ನಮ್ ಕುಟುಂಬದವರು ಏನು ಸೇಡು ತೀರಿಸಿಕೊಳ್ಳುವ ಅವಶ್ಯಕತೆ ಇಲ್ಲಾ, ಅವನಿಗೆ ದೇವರು, ಕಾನೂನು ಶಿಕ್ಷೆ ಕೊಟ್ಟೆ ಕೊಡುತ್ತಾನೆ ಎಂದು ವಿಡಿಯೋದಲ್ಲಿ ಹೇಳಿದ್ದಾರೆ.
ಇನ್ನೂ ತಮ್ಮ ಕುಟುಂಬದ ಬಗ್ಗೆ ಉಲ್ಲೇಖಿಸಿದ ಅವರು, ತಾಯಿ, ಪತ್ನಿ ಹಾಗೂ ಮಕ್ಕಳ ಬಗ್ಗೆ ಕಾಳಜಿ ವ್ಯಕ್ತಪಡಿಸಿ, “ನಾನು ಇನ್ನೂ ಅವರಿಗೆ ಸಹಾಯ ಮಾಡಬೇಕಿತ್ತು, ಆದರೆ ಅದು ಸಾಧ್ಯವಾಗುತ್ತಿಲ್ಲ” ಎಂದು ಹೇಳಿದ್ದಾರೆ.
ಈ ಪ್ರಕರಣವು ಸಾರ್ವಜನಿಕ ವಲಯದಲ್ಲಿ ಆತಂಕ ಹುಟ್ಟಿಸಿದ್ದು, ವಿಡಿಯೋದಲ್ಲಿನ ಆರೋಪಗಳ ಆಧಾರವಾಗಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮಲ್ಲಿಕಾರ್ಜುನ ಅವರ ತಂದೆಯೂ ಇದೇ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದರು. ಮಲ್ಲಿಕಾರ್ಜುನ ತಂದೆ ನಿವೃತ್ತಿಗೆ ಕೆಲವೇ ತಿಂಗಳು ಇರುವಾಗ ಮೃತಪಟ್ಟಿದ್ದರು. ತಂದೆಯ ನಿಧನದ ಬಳಿಕ ಅನುಕಂಪದ ಆಧಾರದ ಮೇಲೆ ಮಲ್ಲಿಕಾರ್ಜುನ ಅವರಿಗೆ ಉದ್ಯೋಗ ನೀಡಲಾಗಿತ್ತು. ಮಲ್ಲಿಕಾರ್ಜನ ಕೂಡ ಸಮಾಜ ಕಲ್ಯಾಣ ಇಲಾಖೆಯಲ್ಲೇ ಕೆಲಸಕ್ಕೆ ಸೇರಿಕೊಂಡಿದ್ದರು. ಇದೀಗ ಇದೀಗ ಮಲ್ಲಿಕಾರ್ಜುನ್ ಗೆ ನಿವೃತ್ತಿ ಕೇವಲ ಒಂದು ವಾರ ಇರುವಾಗ ದುರಂತ ಅಂತ್ಯಕಂಡಿರುವುದು ಅನುಮಾನಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ ಹೇಳಿರುವಂತೆ ಮೇಲಧಿಕಾರಿಗಳ ಕಿರುಕುಳಕ್ಕೆ ಈ ನಿರ್ಧಾರ ಮಾಡಿಕೊಂಡ್ರಾ, ಇಲ್ಲ ಮಕ್ಕಳಿಗೆ ಕೆಲಸ ಸಿಗಲಿ ಎಂದು ದುರಂತ ಅಂತ್ಯ ಕಂಡಿದ್ದಾರಾ ಅನ್ನೋ ಅನುಮಾನ ಶುರುವಾಗಿತ್ತು ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm