ಬ್ರೇಕಿಂಗ್ ನ್ಯೂಸ್
21-03-26 08:25 pm HK News Staffer ಕರ್ನಾಟಕ
ಬೆಂಗಳೂರು, ಮಾರ್ಚ್ 21: ಹಿರಿಯ ಐಪಿಎಸ್ ಅಧಿಕಾರಿ ಹಾಗೂ ಡಿಜಿಪಿ ಕೆ. ರಾಮಚಂದ್ರ ರಾವ್ ಅವರ ವೈರಲ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿ ಮಹತ್ವದ ತಿರುವು ಲಭಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ಈ ವಿಡಿಯೋಗಳು ಸಂಪೂರ್ಣ ನಿಜವಾಗಿದ್ದು, ಅವು ಯಾವುದೇ ರೀತಿಯ ಡೀಪ್‌ಫೇಕ್, ಕೃತಕ ಬುದ್ಧಿಮತ್ತೆ (AI) ನಿರ್ಮಿತ ಅಥವಾ ಎಡಿಟ್ ಮಾಡಲಾದ ದೃಶ್ಯಗಳಲ್ಲ ಎಂಬುದು ಇದೀಗ ತನಿಖೆಯಲ್ಲಿ ದೃಢಪಟ್ಟಿದೆ. ಆಮೂಲಕ ನಿವೃತ್ತಿ ಅಂಚಿನಲ್ಲಿರುವ ಹಿರಿಯ ಪೊಲೀಸ್ ಅಧಿಕಾರಿಗೆ ತೀವ್ರ ಸಂಕಷ್ಟ ಎದುರಾಗಿದೆ.
ರಾಜ್ಯ ಮಟ್ಟದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಲು ರಾಜ್ಯ ಸರ್ಕಾರವು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆರ್. ಹಿತೇಂದ್ರ ಅವರ ನೇತೃತ್ವದಲ್ಲಿ ನಾಲ್ವರು ಐಪಿಎಸ್ ಅಧಿಕಾರಿಗಳ ವಿಶೇಷ ತನಿಖಾ ತಂಡವನ್ನು ರಚಿಸಿತ್ತು. ಇದೀಗ ಈ ಸಮಿತಿಯು ಸರ್ಕಾರಕ್ಕೆ ಬರೋಬ್ಬರಿ 100 ಪುಟಗಳ ವರದಿಯನ್ನು ಸಲ್ಲಿಸಿದ್ದು, ವಿಡಿಯೋ ಅಸಲಿಯತ್ತನ್ನು ಬಯಲು ಮಾಡಿದೆ.
ವಿಧಿವಿಜ್ಞಾನ ಪ್ರಯೋಗಾಲಯ ತಜ್ಞರು ಈ ವಿವಾದಿತ ವಿಡಿಯೋವನ್ನು ಕೂಲಂಕಷವಾಗಿ ಪರಿಶೀಲಿಸಿದ್ದು, ದೃಶ್ಯಗಳಲ್ಲಿ ಯಾವುದೇ ರೀತಿಯ ತಾಂತ್ರಿಕ ಮಾರ್ಪಾಡುಗಳು ಅಥವಾ ಎಡಿಟಿಂಗ್ ನಡೆದಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಕಚೇರಿಯೊಳಗೆ ನಡೆದಿರುವ ಈ ಘಟನೆ ಸಂಪೂರ್ಣ ಸತ್ಯವಾಗಿದೆ. ಕೆ. ರಾಮಚಂದ್ರ ರಾವ್ ಅವರು 2016-17ರ ಅವಧಿಯಲ್ಲಿ ಬೆಳಗಾವಿ ವಲಯದ ಐಜಿಪಿಯಾಗಿ ಸೇವೆ ಸಲ್ಲಿಸುತ್ತಿದ್ದ ಸಂದರ್ಭದಲ್ಲಿ ಅವರದೇ ಕಚೇರಿಯಲ್ಲಿ ಈ ದೃಶ್ಯಗಳನ್ನು ಸೆರೆಹಿಡಿಯಲಾಗಿದೆ.
ವರದಿಯ ಪ್ರಕಾರ, ರಾವ್ ಅವರ ಬೆಳಗಾವಿ ಕಚೇರಿಯಲ್ಲಿ ಆ ಸಮಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಚಾಲಕರು ಮತ್ತು ಕಚೇರಿ ಸಿಬ್ಬಂದಿ ವಿಡಿಯೋದಲ್ಲಿರುವ ಮಹಿಳೆಯರನ್ನು ಗುರುತಿಸಿದ್ದಾರೆ. ಅಷ್ಟೇ ಅಲ್ಲದೆ, ಈ ಇಬ್ಬರು ಮಹಿಳೆಯರು ಆಗಾಗ್ಗೆ ರಾವ್ ಅವರ ಖಾಸಗಿ ಕಚೇರಿಗೆ ಭೇಟಿ ನೀಡುತ್ತಿದ್ದರು ಎಂಬ ಅಂಶವನ್ನೂ ಸಹ ಸಿಬ್ಬಂದಿ ತನಿಖಾ ತಂಡದ ಮುಂದೆ ದೃಢಪಡಿಸಿದ್ದಾರೆ.
ನಾಪತ್ತೆಯಾಗಿರುವ ಮಹಿಳೆಯರು
ಮೂಲಗಳ ಪ್ರಕಾರ, ಕಚೇರಿಗೆ ಬರುತ್ತಿದ್ದ ಇಬ್ಬರು ಮಹಿಳೆಯರಲ್ಲಿ ಒಬ್ಬರು ಉದ್ದೇಶಪೂರ್ವಕವಾಗಿ ತಮ್ಮದೇ ಮೊಬೈಲ್ ಫೋನ್ ಬಳಸಿ ಈ ದೃಶ್ಯಗಳನ್ನು ಚಿತ್ರೀಕರಿಸಿದ್ದಾರೆ ಎನ್ನಲಾಗಿದೆ. ಆದರೆ, ಈ ವಿಡಿಯೋ ಬಹಿರಂಗವಾಗಿ ವಿವಾದ ಭುಗಿಲೇಳುತ್ತಿದ್ದಂತೆ ವಿಡಿಯೋದಲ್ಲಿರುವ ಆ ಇಬ್ಬರೂ ಮಹಿಳೆಯರು ದಿಢೀರ್ ನಾಪತ್ತೆಯಾಗಿದ್ದಾರೆ. ಘಟನೆ ಬೆಳಕಿಗೆ ಬಂದ ಬಳಿಕ ಅವರು ಸಂಪರ್ಕಕ್ಕೆ ಸಿಗುತ್ತಿಲ್ಲ. ಪ್ರಕರಣದ ಮುಂದಿನ ತನಿಖೆ ಹಾಗೂ ಕಾನೂನು ಪ್ರಕ್ರಿಯೆಗಳಿಗೆ ಈ ಮಹಿಳೆಯರ ಹೇಳಿಕೆ ಅತ್ಯಂತ ನಿರ್ಣಾಯಕವಾಗಿದೆ. ಹೀಗಾಗಿ, ಅವರು ತನಿಖಾ ತಂಡದ ಮುಂದೆ ಖುದ್ದಾಗಿ ಹಾಜರಾಗಬೇಕಾದ ಅನಿವಾರ್ಯತೆ ಇದ್ದು, ಅವರ ಪತ್ತೆಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm