ಬ್ರೇಕಿಂಗ್ ನ್ಯೂಸ್
22-03-26 11:44 am HK News Staffer ಕರ್ನಾಟಕ
ನವದೆಹಲಿ, ಮಾರ್ಚ್ 21: ಗ್ಯಾಸ್ ಸಿಲಿಂಡರ್ ಗಳಿಲ್ಲದೆ ಪರದಾಡುತ್ತಿದ್ದ ಹೋಟೆಲ್ ಮತ್ತು ರೆಸ್ಟೋರೆಂಟ್ ಮಾಲೀಕರಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ವಾಣಿಜ್ಯ ಬಳಕೆ LPG ಸಿಲಿಂಡರ್ ಹಂಚಿಕೆಯನ್ನು ಶೇ. 50ಕ್ಕೆ ಹೆಚ್ಚಿಸಿದೆ. ಇರಾನ್ ಅಧ್ಯಕ್ಷರ ಜೊತೆಗೆ ಪ್ರಧಾನಿ ಮೋದಿ ಮಾತುಕತೆ ನಡೆಸಿದ ಬೆನ್ನಲ್ಲೇ ಎಲ್ ಪಿಜಿ ಹೆಚ್ಚಳದ ಆದೇಶ ಹೊರಬಿದ್ದಿದೆ.
ಮನೆಗಳಿಗೆ ಪೂರೈಸುವ ಅಡುಗೆ ಅನಿಲ ಉತ್ಪಾದನೆಯಲ್ಲಿ ಹೆಚ್ಚಳವಾಗಿದ್ದು, ಪರಿಸ್ಥಿತಿ ಸಾಮಾನ್ಯ ಸ್ಥಿತಿಗೆ ತರಲು ಸಹಾಯವಾಗುತ್ತಿದೆ. ಹೀಗಾಗಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹೆಚ್ಚುವರಿಯಾಗಿ ಶೇ. 20 ರಷ್ಟು ವಾಣಿಜ್ಯ ಎಲ್‌ಪಿಜಿ ಹಂಚಿಕೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಇದರೊಂದಿಗೆ ಒಟ್ಟು ಹಂಚಿಕೆಯನ್ನು ಶೇ. 50ಕ್ಕೆ ಹೆಚ್ಚಿಸಲಾಗಿದೆ. ಕಳೆದ ಮೂರು ವಾರಗಳಿಂದ ನಡೆಯುತ್ತಿರುವ ಗಲ್ಫ್ ಯುದ್ಧದಿಂದಾಗಿ ಭಾರತಕ್ಕೆ ಇಂಧನ ಸರಬರಾಜಿನಲ್ಲಿ ವ್ಯತ್ಯಯವಾಗಿದೆ. ಇದರಿಂದಾಗಿ ಮನೆಗಳಿಗೆ ಎಲ್ ಪಿಜಿ ಸರಬರಾಜು ಮಾಡಲು ಆದ್ಯತೆ ನೀಡಲು ಹೋಟೆಲ್‌ಗಳಂತಹ ವಾಣಿಜ್ಯ ಸಂಸ್ಥೆಗಳಿಗೆ ಎಲ್‌ಪಿಜಿ ಸರಬರಾಜಿನಲ್ಲಿ ಕಡಿತ ಮಾಡಲಾಗಿತ್ತು.
ಇದೀಗ ರಾಜ್ಯಗಳಿಗೆ ಹೆಚ್ಚುವರಿಯಾಗಿ ಶೇ. 20ರಷ್ಟು ಅನಿಲ ಹಂಚಿಕೆ ಮಾಡಲು ನಿರ್ಧರಿಸಲಾಗಿದ್ದು, ಇದರಿಂದ ಒಟ್ಟು ಹಂಚಿಕೆ ಪ್ರಮಾಣ ಶೇಕಡಾ 50ಕ್ಕೆ ತಲುಪಲಿದೆ. ಮಾರ್ಚ್ 23ರಿಂದ (ಸೋಮವಾರ) ಜಾರಿಗೆ ಬರುವಂತೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹೆಚ್ಚುವರಿಯಾಗಿ ಶೇ. 20ರಷ್ಟು ವಾಣಿಜ್ಯ ಬಳಕೆ LPG ಹಂಚಿಕೆ ಮಾಡಲಾಗುವುದು. ಮುಂದಿನ ಆದೇಶದ ವರೆಗೆ ಈ ವ್ಯವಸ್ಥೆ ಜಾರಿಯಲ್ಲಿರುತ್ತದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ತಿಳಿಸಿದೆ.
ಹೆಚ್ಚುವರಿ ಅನಿಲವನ್ನು ಪ್ರಮುಖವಾಗಿ ರೆಸ್ಟೋರೆಂಟ್, ಢಾಬಾ, ಹೋಟೆಲ್, ಕೈಗಾರಿಕಾ ಕ್ಯಾಂಟೀನ್, ಆಹಾರ ಸಂಸ್ಕರಣೆ ಮತ್ತು ಡೈರಿ ಕ್ಷೇತ್ರಗಳಿಗೆ ಆದ್ಯತೆಯ ಮೇಲೆ ನೀಡಲು ಸೂಚಿಸಲಾಗಿದೆ. ರಾಜ್ಯ ಸರ್ಕಾರ ಅಥವಾ ಸ್ಥಳೀಯ ಸಂಸ್ಥೆಗಳು ನಡೆಸುವ ಸಬ್ಸಿಡಿ ಊಟದ ಕೇಂದ್ರಗಳು ಮತ್ತು ಸಮುದಾಯ ಅಡುಗೆ ಮನೆಗಳಿಗೆ ತಡೆರಹಿತ ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಪೆಟ್ರೋಲಿಯಂ ಇಲಾಖೆ ಕಾರ್ಯದರ್ಶಿ ರಾಜ್ಯಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm