ಬ್ರೇಕಿಂಗ್ ನ್ಯೂಸ್
26-03-26 12:31 pm HK News Staffer ಕರ್ನಾಟಕ
ಢಾಕಾ: ಮಾರ್ಚ್ 26: ದಕ್ಷಿಣ ಏಷ್ಯಾದಲ್ಲಿ ಕೆಲವೇ ಗಂಟೆಗಳ ಅಂತರದಲ್ಲಿ ಸಂಭವಿಸಿದ ಎರಡು ಭೀಕರ ಸಾರಿಗೆ ದುರಂತಗಳು 33 ಮಂದಿ ಜೀವಗಳನ್ನು ಕಸಿದುಕೊಂಡಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಾಂಗ್ಲಾದೇಶ ಮತ್ತು ಆಂಧ್ರಪ್ರದೇಶದಲ್ಲಿ ನಡೆದ ಈ ಪ್ರತ್ಯೇಕ ಘಟನೆಗಳು ಸಾರ್ವಜನಿಕ ಸಾರಿಗೆ ಸುರಕ್ಷತೆ ಕುರಿತು ಗಂಭೀರ ಚಿಂತೆಗಳನ್ನು ಹುಟ್ಟಿಸಿವೆ.
ಬಾಂಗ್ಲಾದೇಶದ ರಾಜ್ಬರಿ ಜಿಲ್ಲೆಯ ದೌಲಾಡಿಯಾ ಟರ್ಮಿನಲ್ನಲ್ಲಿ ಬುಧವಾರ ಸಂಜೆ ಸಂಭವಿಸಿದ ದುರಂತದಲ್ಲಿ, ಸುಮಾರು 50 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಸಾರಿಗೆ ದೋಣಿಗೆ ಹತ್ತುವ ವೇಳೆ ನಿಯಂತ್ರಣ ತಪ್ಪಿ ಪದ್ಮಾ ನದಿಗೆ ಉರುಳಿ ಬಿದ್ದಿದೆ. ಈ ಘಟನೆಯಲ್ಲಿ ಕನಿಷ್ಠ 23 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.




ಘಟನೆ ನಡೆದ ತಕ್ಷಣ ಅಗ್ನಿಶಾಮಕ ದಳ ಹಾಗೂ ಡೈವರ್ಗಳ ತಂಡಗಳು ಸ್ಥಳಕ್ಕೆ ಧಾವಿಸಿ ವ್ಯಾಪಕ ರಕ್ಷಣಾ ಕಾರ್ಯಾಚರಣೆ ಕೈಗೊಂಡು ಹಲವರನ್ನು ರಕ್ಷಿಸಿವೆ. ಸುಮಾರು 11 ಮಂದಿ ಪ್ರಯಾಣಿಕರು ಸ್ವತಃ ಈಜಿ ದಡ ಸೇರಲು ಯಶಸ್ವಿಯಾಗಿದ್ದಾರೆ. ಆದಾಗ್ಯೂ, ಇನ್ನೂ ಕೆಲವರು ನಾಪತ್ತೆಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ, ಬಸ್ ತನ್ನ ಸಾಮರ್ಥ್ಯಕ್ಕಿಂತ ಹೆಚ್ಚಿನ ಪ್ರಯಾಣಿಕರನ್ನು ಹೊತ್ತಿದ್ದು, ಅಧಿಕ ಭಾರವೇ ಅಪಘಾತಕ್ಕೆ ಕಾರಣವಾಗಿರಬಹುದು ಎನ್ನಲಾಗಿದೆ. ಘಟನೆ ನಡೆದ ಸುಮಾರು ಆರು ಗಂಟೆಗಳ ನಂತರ ‘ಹಮ್ಜಾ’ ರಕ್ಷಣಾ ಹಡಗು ಕ್ರೇನ್ ಸಹಾಯದಿಂದ ಬಸ್ ಅನ್ನು ನದಿಯಿಂದ ಮೇಲಕ್ಕೆತ್ತಿತು ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಈ ಘಟನೆಗೆ ಸಂಬಂಧಿಸಿದಂತೆ ಬಾಂಗ್ಲಾದೇಶದ ಪ್ರಧಾನಿ ತನಿಖೆಗೆ ಆದೇಶ ನೀಡಿದ್ದಾರೆ.
ಇನ್ನೊಂದೆಡೆ, ಆಂಧ್ರಪ್ರದೇಶದ ಮಾರ್ಕಪುರಂ ಜಿಲ್ಲೆಯ ರಾಯವರಂ ಸಮೀಪ ಗುರುವಾರ ಸಂಭವಿಸಿದ ಮತ್ತೊಂದು ಭೀಕರ ಅಪಘಾತದಲ್ಲಿ 10 ಮಂದಿ ಜೀವಂತವಾಗಿ ಸುಟ್ಟು ಕರಕಲಾಗಿದ್ದಾರೆ. ಹೈದರಾಬಾದ್ನಿಂದ ಪಾಮೂರ್ಗೆ ತೆರಳುತ್ತಿದ್ದ ಖಾಸಗಿ ಟ್ರಾವೆಲ್ ಬಸ್ ಮತ್ತು ಚಿಮಕುರ್ತಿಯಿಂದ ಜಲ್ಲಿಕಲ್ಲು ಸಾಗಿಸುತ್ತಿದ್ದ ಟಿಪ್ಪರ್ ಟ್ರಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬಸ್ಗೆ ತಕ್ಷಣ ಬೆಂಕಿ ಹೊತ್ತಿಕೊಂಡಿದೆ.
ಈ ವೇಳೆ ಬಸ್ನಲ್ಲಿ ಸುಮಾರು 40 ಪ್ರಯಾಣಿಕರಿದ್ದು, 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು 18 ಮಂದಿ ಗಂಭೀರ ಗಾಯಗಳೊಂದಿಗೆ ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲ್ಪಟ್ಟಿದ್ದು, ಕೆಲವರ ಸ್ಥಿತಿ ಆತಂಕಕಾರಿಯಾಗಿದೆ. ಉಳಿದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಘಟನೆಯ ಮಾಹಿತಿ ಪಡೆದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರೂ, ಆಗಲೇ ಎರಡೂ ವಾಹನಗಳು ಸಂಪೂರ್ಣವಾಗಿ ಸುಟ್ಟುಹೋಗಿದ್ದವು. ಮೃತರಲ್ಲಿ ಹೆಚ್ಚಿನವರು ಕಣಿಗಿರಿ ಮತ್ತು ಪಾಮೂರ್ ಭಾಗದ ನಿವಾಸಿಗಳಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎರಡೂ ಘಟನೆಗಳ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. ಈ ದುರ್ಘಟನೆಗಳು ಸಾರಿಗೆ ವ್ಯವಸ್ಥೆಯ ಸುರಕ್ಷತೆ ಮತ್ತು ನಿಯಂತ್ರಣ ಕ್ರಮಗಳ ಅಗತ್ಯತೆಯನ್ನು ಮತ್ತೊಮ್ಮೆ ಒತ್ತಿ ಹೇಳುತ್ತಿವೆ.
At least 35 passengers are missing after a bus plunged into the Padma River at Daulatdia Ghat, Bangladesh; two bodies have been recovered so far as rescue operations continue.
— Lord Immy Kant (@KantInEastt) March 25, 2026
People live like cockroaches and die like cockroaches
pic.twitter.com/kq6pxbfvrs
A bus carrying about 50 people plunged into a major river in central Bangladesh as it was driving onto a ferry, leaving at least 18 people dead, authorities said Thursday.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm