ಬ್ರೇಕಿಂಗ್ ನ್ಯೂಸ್
28-03-26 08:39 pm HK News Staffer ಕರ್ನಾಟಕ
ಬೆಂಗಳೂರು, ಮಾರ್ಚ್ 28: ಐಪಿಎಲ್ 19ನೇ ಆವೃತ್ತಿಯ ಉದ್ಘಾಟನಾ ಪಂದ್ಯಕ್ಕೂ ಮುನ್ನ, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಅಭಿಮಾನಿಗಳು ತಮ್ಮ ತಂಡದ ಮೇಲೆ ಇರುವ ಅಭಿಮಾನವನ್ನು ವಿಶಿಷ್ಟ ರೀತಿಯಲ್ಲಿ ವ್ಯಕ್ತಪಡಿಸಿದ್ದಾರೆ. ಗಿರಿನಗರದ ರಾಷ್ಟ್ರೋತ್ಥಾನ ರಕ್ತ ಕೇಂದ್ರದಲ್ಲಿ ನೂರಾರು ಅಭಿಮಾನಿಗಳು ಸಾಮೂಹಿಕವಾಗಿ ರಕ್ತದಾನ ಮಾಡಿ ತಂಡದ ಗೆಲುವಿಗಾಗಿ ಶುಭ ಹಾರೈಸಿದ್ದಾರೆ.
ಪ್ರತಿ ವರ್ಷ ಆರ್‌ಸಿಬಿ ಪಂದ್ಯಕ್ಕೂ ಮುನ್ನ ರಕ್ತದಾನ ಮಾಡುವ ಪದ್ಧತಿಯನ್ನು ಮುಂದುವರಿಸಿರುವ ಅಭಿಮಾನಿಗಳು, “ಈ ಬಾರಿ ಉದ್ಘಾಟನಾ ಪಂದ್ಯದಲ್ಲಿ ಜಯ ಸಾಧಿಸುವ ವಿಶ್ವಾಸವಿದೆ. ಜೊತೆಗೆ ಈ ಸೀಸನ್‌ನಲ್ಲಿ ಕಪ್ ನಮ್ದೇ” ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. “ಆರ್‌ಸಿಬಿ ಗಾಡ್ ವಿರಾಟ್ ಕೋಹ್ಲಿಯನ್ನು ಮೈದಾನದಲ್ಲಿ ನೋಡುವುದೇ ನಮಗೆ ದೊಡ್ಡ ಸಂತೋಷ” ಎಂದು ಅಭಿಮಾನಿಗಳು ಉತ್ಸಾಹದಿಂದ ತಿಳಿಸಿದ್ದಾರೆ.
ರಕ್ತದಾನ ನಂತರ ಅಭಿಮಾನಿಗಳು ತಂಡದ ಗೆಲುವಿಗಾಗಿ ಪ್ರಾರ್ಥನೆ ಸಲ್ಲಿಸಿದ್ದು, ಕಳೆದ ಬಾರಿ ನಡೆದ ಕಾಲ್ತುಳಿತ ದುರಂತದಲ್ಲಿ ಸಾವನ್ನಪ್ಪಿದ ಅಭಿಮಾನಿಗಳನ್ನು ಸ್ಮರಿಸಿ ಗೌರವ ಸಲ್ಲಿಸಿದರು. “ಆ ಅಭಿಮಾನಿಗಳಿಗೆ ನ್ಯಾಯ ಸಿಗುವಂತೆ ತಂಡ ಆಡಬೇಕು” ಎಂಬ ಭಾವನಾತ್ಮಕ ಮನವಿ ಕೂಡ ಕೇಳಿಬಂದಿದೆ.
ಇದೇ ವೇಳೆ, 18 ವರ್ಷಗಳಿಂದ ಕ್ರಿಕೆಟ್ ಅಭಿಮಾನಿಗಳಿಗೆ ಮನರಂಜನೆ ನೀಡುತ್ತಿರುವ ಐಪಿಎಲ್ ಟೂರ್ನಿಯ 19ನೇ ಆವೃತ್ತಿಗೆ ಇಂದು ಚಾಲನೆ ಸಿಗಲಿದೆ. ಕರ್ನಾಟಕ ಕ್ರಿಕೆಟ್‌ನ ಹೃದಯಭೂಮಿ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉದ್ಘಾಟನಾ ಪಂದ್ಯ ನಡೆಯಲಿದ್ದು, ಬೆಂಗಳೂರಿನಲ್ಲಿ 18 ವರ್ಷಗಳ ಬಳಿಕ ಈ ಗೌರವ ಸಿಕ್ಕಿದೆ. ಮೊದಲ ಪಂದ್ಯದಲ್ಲಿ ಆರ್‌ಸಿಬಿ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ. ಕಾಲ್ತುಳಿತ ದುರಂತದ ಬಳಿಕ ಇದೇ ಮೊದಲ ಬಾರಿಗೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟೂರ್ನಿ ನಡೆಯುತ್ತಿರುವ ಹಿನ್ನೆಲೆ, ಭದ್ರತೆಗೆ ವಿಶೇಷ ಒತ್ತು ನೀಡಲಾಗಿದೆ.
ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ಸುಮಾರು 2000 ಪೊಲೀಸರನ್ನು ನಿಯೋಜಿಸಲಾಗಿದ್ದು, ಬೆಂಗಳೂರು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಂಡಿದೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm