ಬ್ರೇಕಿಂಗ್ ನ್ಯೂಸ್
31-03-26 10:13 am HK News Staffer ಕರ್ನಾಟಕ
ತಿರುವನಂತಪುರಂ, ಮಾರ್ಚ್ 31: ಕೇರಳದಲ್ಲಿ ಯುಡಿಎಫ್ ಅಧಿಕಾರಕ್ಕೇರಿದರೆ ಕರ್ನಾಟಕ, ತೆಲಂಗಾಣ ರೀತಿಯಲ್ಲೇ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗುವುದು ಎಂದಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ಇಂದು ಒಂದು ಹೆಜ್ಜೆ ಮುಂದೆ ಹೋಗಿದ್ದು ಕೇರಳದಲ್ಲಿ ಮಹಿಳೆಯೊಬ್ಬರು ಸಿಎಂ ಆಗುವುದನ್ನು ಬಯಸುವುದಾಗಿ ಹೇಳಿದ್ದಾರೆ.
ಪುತ್ತುಪಲ್ಲಿ ಎಂಬಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಐದು ಗ್ಯಾರಂಟಿ ಸ್ಕೀಮ್ ಜಾರಿಗೆ ತರಲಾಗುವುದು. ಮಹಿಳೆಯರಿಗೆ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಉಚಿತ ಪ್ರಯಾಣ, ಕಾಲೇಜು ತೆರಳುವ ವಿದ್ಯಾರ್ಥಿನಿಯರಿಗೆ ತಿಂಗಳಿಗೆ ಒಂದು ಸಾವಿರ ಗೌರವ ಧನ ನೀಡಲಾಗುವುದು ಎಂದಿದ್ದಾರೆ.
ತಮ್ಮನ್ನು ನೋಡಿ ಮಹಿಳೆಯರು ಕೈ ಬೀಸುತ್ತಿರುವುದನ್ನು ಉತ್ತೇಜಿತರಾದ ರಾಹುಲ್, ಮಹಿಳೆಯರು ರಾಜಕೀಯದಲ್ಲಿ ಇನ್ನಷ್ಟು ಸಕ್ರಿಯರಾಗಬೇಕು, ಈ ಬಾರಿ ಮಹಿಳೆ ಸಿಎಂ ಆಗುವುದನ್ನು ನೋಡಲು ಬಯಸುತ್ತೇನೆ, ಅವರ ಆಶೋತ್ತರಗಳನ್ನು ಅವರೇ ಈಡೇರಿಸಿಕೊಳ್ಳಬೇಕು, ಅದಕ್ಕಾಗಿ ಅವರೇ ಅಧಿಕಾರಕ್ಕೆ ಏರಬೇಕು ಎಂದು ಹೇಳಿದ್ದಾರೆ.
ಕೇರಳದಲ್ಲಿ ಯಾರು ಕೂಡ ಮಹಿಳೆಯರು ಸಿಎಂ ಆಗಿಲ್ಲ, ಕೆ.ಆರ್ ಗೌರಿ ಅಮ್ಮನಂಥ ಪ್ರಭಾವಿ ಮಹಿಳೆಯರು ಇಲ್ಲಿದ್ದಾರೆ ಎಂದು ಅವರು ಹೇಳಿದ್ದಾರೆ. ಕಾಂಗ್ರೆಸ್ 92 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದು 9 ಕಡೆ ಮಹಿಳೆಯರಿಗೆ ಮಣೆ ಹಾಕಿದೆ. ಮುಸ್ಲಿಂ ಲೀಗ್ ಎರಡು ಕಡೆ ಮಹಿಳೆಯರಿಗೆ ಸ್ಥಾನ ನೀಡಿದೆ. ಸಭೆ ಮುಗಿದ ಬಳಿಕ ರಾಹುಲ್ ಗಾಂಧಿ ಸೈಕಲ್ ತುಳಿಯುತ್ತಾ ರ್ಯಾಲಿ ನಡೆಸಿದರು. ಇತ್ತೀಚೆಗೆ ಮಾರ್ಚ್ 8ರಂದು ಕೇರಳದಲ್ಲಿ ಪ್ರಚಾರ ಸಭೆ ನಡೆಸಿದ್ದ ರಾಹುಲ್ ಗಾಂಧಿ, ಯುಡಿಎಫ್ ಅಧಿಕಾರಕ್ಕೆ ಬಂದಲ್ಲಿ ಐದು ಗ್ಯಾರಂಟಿ ಯೋಜನೆ ಜಾರಿಗೆ ತರುವ ಭರವಸೆ ನೀಡಿದ್ದರು. ಮಹಿಳೆಯರಿಗೆ ಸಾರಿಗೆ ಉಚಿತ ಪ್ರಯಾಣ, ಕಾಲೇಜು ಕಲಿಯುವ ಹೆಣ್ಮಕ್ಕಳಿಗೆ ತಿಂಗಳಿಗೆ ಒಂದು ಸಾವಿರ, ಬಡ ಕುಟುಂಬಗಳಿಗೆ ಮೂರು ಸಾವಿರ ಪಿಂಚಣಿ, 25 ಲಕ್ಷ ಹೆಲ್ತ್ ಇನ್ಶೂರೆನ್ಸ್, ವ್ಯವಹಾರ ಉದ್ದೇಶಕ್ಕೆ 5 ಲಕ್ಷ ವರೆಗೆ ಉಚಿತ ಸಾಲ ಸೇರಿ ಐದು ಘೋಷಣೆಗಳನ್ನು ನೀಡಿದ್ದರು.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm