ಬ್ರೇಕಿಂಗ್ ನ್ಯೂಸ್
04-04-26 07:33 pm HK News Staffer ಕರ್ನಾಟಕ
ನವದೆಹಲಿ, ಎಪ್ರಿಲ್ 4: ಟೋಲ್ ಬೂತ್‌ಗಳಲ್ಲಿ ನಗದು ಪಾವತಿಯನ್ನು ಸ್ಥಗಿತಗೊಳಿಸುವ ಕುರಿತಂತೆ ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ ಗುರುವಾರ ಅಧಿಸೂಚನೆ ಹೊರಡಿಸಿದೆ. ಏಪ್ರಿಲ್ 10ರಿಂದ ಜಾರಿಗೆ ಬರಲಿದ್ದು ಟೋಲ್ ಪ್ಲಾಜಾಗಳಲ್ಲಿ ವಾಹನ ಸಾಲು ಮತ್ತು ಪ್ರಯಾಣಿಕ-ಸಿಬ್ಬಂದಿ ನಡುವಿನ ಸಂಘರ್ಷವನ್ನು ತಡೆಯಲು ಉದ್ದೇಶಿಸಿದೆ.
ರಾಷ್ಟ್ರೀಯ ಹೆದ್ದಾರಿ ಮತ್ತು ಎಕ್ಸ್‌ಪ್ರೆಸ್ ವೇಗಳಲ್ಲಿ ಪ್ರಯಾಣಿಸುವ ಎಲ್ಲಾ ವಾಹನಗಳು ನಗದು ಬದಲು ಫಾಸ್ಟ್ ಟ್ಯಾಗ್ ಅಥವಾ ಯುಪಿಐ ಮೂಲಕ ಮಾತ್ರವೇ ಶುಲ್ಕ ಪಾವತಿಸಬೇಕು. ಈಗಾಗಲೇ ಸರ್ಕಾರಿ ಇಲಾಖೆಗಳು, ಸಂಸ್ಥೆಗಳು ಮತ್ತು ಕಚೇರಿ ಉದ್ಯೋಗಿಗಳಿಗೆ ವಾರ್ಷಿಕ ಫಾಸ್ಟ್‌ಟ್ಯಾಗ್ ಪಡೆಯುವಂತೆ ಸೂಚಿಸಲಾಗಿದೆ. ವಿನಾಯ್ತಿ ವರ್ಗದಲ್ಲಿ ಬರುವ ಎಲ್ಲಾ ವಾಹನಗಳು ಸಹ ಈ ನಿಯಮವನ್ನು ಪಾಲಿಸಬೇಕಾಗುತ್ತದೆ. ಖಾಸಗಿ ವಾಹನಗಳಿಗೆ ವಾರ್ಷಿಕ ಫಾಸ್ಟ್‌ಟ್ಯಾಗ್ ಶುಲ್ಕ 3075 ರೂ. ಆಗಿದ್ದು, 200 ಟೋಲ್ ಪ್ಲಾಜಾಗಳಲ್ಲಿ ಪ್ರಯಾಣ ಮಾಡಲು ಅವಕಾಶ ಕಲ್ಪಿಸಲಾಗಿದೆ.
ಫಾಸ್ಟ್‌ಟ್ಯಾಗ್ ಇಲ್ಲದ ವಾಹನಗಳಿಗೆ ಟೋಲ್ ಶುಲ್ಕವನ್ನು ಯುಪಿಐ ಮೂಲಕ ಪಾವತಿಸುವ ವ್ಯವಸ್ಥೆ ಇದ್ದರೂ, ಪಾವತಿ ನಿರಾಕರಿಸಿದರೆ ರಾಷ್ಟ್ರೀಯ ಹೆದ್ದಾರಿ ಶುಲ್ಕ ನಿಯಮಾವಳಿಯ 14ನೇ ನಿಯಮದ ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ. ಅಗತ್ಯವಿದ್ದರೆ ಟೋಲ್ ಪ್ಲಾಜಾಗಳ ಪ್ರವೇಶ ನಿರ್ಬಂಧಿಸುವ ಹಕ್ಕು ಮತ್ತು ರಾಷ್ಟ್ರೀಯ ಹೆದ್ದಾರಿ ಸೆಕ್ಷನ್‌ನಿಂದ ವಾಹನವನ್ನು ತೆರವುಗೊಳಿಸುವ ಕ್ರಮವೂ ಕೈಗೊಳ್ಳಬಹುದು.
ಸಂಚಾರ ಸುಗಮ, ವ್ಯವಸ್ಥೆಯ ದಕ್ಷ ನಿರ್ವಹಣೆ ಮತ್ತು ಪ್ರಯಾಣಿಕರ ಸುರಕ್ಷತೆಯನ್ನು ಕೇಂದ್ರೀಕರಿಸಿ ಹೊರಡಿಸಲಾದ ಈ ಹೊಸ ನಿಯಮವು, ಫಾಸ್ಟ್ ಟ್ಯಾಗ್ ಮತ್ತು ಯುಪಿಐ ಪಾವತಿಯನ್ನು ಹೆಚ್ಚಿಸುವ ಮೂಲಕ, ರಾಷ್ಟ್ರೀಯ ಹೆದ್ದಾರಿ ಸೌಲಭ್ಯಗಳನ್ನು ಮುಂದಿನ ಹಂತದಲ್ಲಿ ಸುಧಾರಿಸಲು ಸಹಾಯಕವಾಗಲಿದೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm