ಬ್ರೇಕಿಂಗ್ ನ್ಯೂಸ್
05-04-26 07:24 pm HK News Staffer ಕರ್ನಾಟಕ
ಬೆಂಗಳೂರು, ಎಪ್ರಿಲ್ 5: ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಯುವತಿ ಜಿ.ಎಸ್.ಶರಣ್ಯಾ (36) ನಾಪತ್ತೆಯಾಗಿ ಮೂರು ದಿನ ಕಳೆದರೂ ಆಕೆಯ ಸುಳಿವು ಸಿಗದ ಕಾರಣ ಪತ್ತೆಗಾಗಿ ಎಲ್ಲ ರೀತಿಯ ಸಾಮರ್ಥ್ಯ ಬಳಸಿಕೊಂಡು ಶೋಧ ನಡೆಸುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.
ಸಿಎಂ ಸೂಚನೆ ಹಿನ್ನೆಲೆಯಲ್ಲಿ ಹೆಚ್ಚುವರಿಯಾಗಿ 40 ಸಿಬ್ಬಂದಿಯನ್ನೊಳಗೊಂಡ ನಾಲ್ಕು ಪೊಲೀಸ್ ತಂಡಗಳನ್ನು ನಿಯೋಜಿಸಲಾಗಿದೆ. ಅಲ್ಲದೆ, ಶೋಧಕ್ಕಾಗಿ ಡ್ರೋನ್ ಕ್ಯಾಮರಾ ಬಳಸುವಂತೆ ಅರಣ್ಯ ಇಲಾಖೆಗೆ ಸೂಚನೆ ನೀಡಲಾಗಿದೆ. ಒಟ್ಟು ಒಂಬತ್ತು ತಂಡಗಳು ಕಾರ್ಯಾಚರಣೆ ನಡೆಸುತ್ತಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ದಾವಣಗೆರೆಯಲ್ಲಿ ತಿಳಿಸಿದ್ದಾರೆ. ಇದೇ ವೇಳೆ, ಕಾಡಿನಲ್ಲಿ ಶೋಧ ಕಾರ್ಯಕ್ಕೆ ನಕ್ಸಲ್ ವಿರೋಧಿ ತಂಡವನ್ನೂ ನಿಯೋಜನೆ ಮಾಡಲಾಗಿದೆ.
ಕೋಯಿಕ್ಕೋಡ್ ನಿವಾಸಿ ಹಾಗೂ ಎರ್ನಾಕುಲಂನಲ್ಲಿ ಐಟಿ ಉದ್ಯೋಗಿಯಾಗಿರುವ ಶರಣ್ಯಾ ಕಕ್ಕಬ್ಬೆಯ ಹೋಂಸ್ಟೇಯಲ್ಲಿ ಒಬ್ಬರೇ ತಂಗಿದ್ದರು. ಏಪ್ರಿಲ್ 2ರಂದು ಬೆಳಗ್ಗೆ ಚಾರಣಕ್ಕೆಂದು ಅರಣ್ಯ ಇಲಾಖೆ ಚೆಕ್ಪೋಸ್ಟ್ ಬಳಿ ಬಂದಿದ್ದ ಅವರನ್ನು ಸುರಕ್ಷತೆಯ ದೃಷ್ಟಿಯಿಂದ 15 ಜನರಿದ್ದ ಮತ್ತೊಂದು ಪ್ರವಾಸಿಗರ ತಂಡದೊಂದಿಗೆ ಕಳುಹಿಸಲಾಗಿತ್ತು. ಆದರೆ, ಮಧ್ಯಾಹ್ನ 1:30ಕ್ಕೆ ವಾಪಸ್ ಬರಬೇಕಿದ್ದ ಶರಣ್ಯಾ ಹಿಂದಿರುಗಿ ಬರದಿರುವುದು ಆತಂಕಕ್ಕೆ ಕಾರಣವಾಗಿತ್ತು.
ಹೋಂಸ್ಟೇ ಮಾಲೀಕರು ಆಕೆಗೆ ಫೋನ್ ಮಾಡಿದಾಗ ಮೊದಲು ಸಂಪರ್ಕ ಸಿಕ್ಕಿರಲಿಲ್ಲ. ನಂತರ ಕರೆ ಸ್ವೀಕರಿಸಿದ ಶರಣ್ಯಾ, ‘ದಾರಿ ತಪ್ಪಿದ್ದೇನೆ’ ಎಂದು ಗಾಬರಿಯಿಂದ ಹೇಳಿದ್ದರು. ಅಷ್ಟರಲ್ಲೇ ಫೋನ್ ಸಂಪರ್ಕ ಕಡಿತಗೊಂಡಿದ್ದು, ಆ ಬಳಿಕ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಅದರ ಬೆನ್ನಲ್ಲೇ ಅರಣ್ಯ ಇಲಾಖೆ, ಪೊಲೀಸ್ ಮತ್ತು ಸ್ಥಳೀಯರು ಹುಡುಕಾಟ ನಡೆಸುತ್ತಿದ್ದರೂ ದಟ್ಟ ಅರಣ್ಯ ಮತ್ತು ಕಾಡಾನೆಗಳ ಹಾವಳಿಯಿಂದಾಗಿ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಪ್ರಸ್ತುತ ನಕ್ಸಲ್ ನಿಗ್ರಹ ಪಡೆಯೂ ಬೆಟ್ಟದ ದುರ್ಗಮ ಹಾದಿಗಳಲ್ಲಿ ಶೋಧ ನಡೆಸುತ್ತಿದೆ. ಮೂರು ದಿನ ಕಳೆದರೂ ಶರಣ್ಯ ಪತ್ತೆಯಾಗದಿರುವುದು ಆತಂಕಕ್ಕೆ ಕಾರಣವಾಗಿದೆ. ಇದೀಗ ಕರ್ನಾಟಕ ಮತ್ತು ಕೇರಳ ಸರ್ಕಾರಗಳು ಶರಣ್ಯ ಪತ್ತೆಗೆ ಕಾರ್ಯಾಚರಣೆ ತೀವ್ರಗೊಳಿಸಲು ಮುಂದಾಗಿದೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm