ಬ್ರೇಕಿಂಗ್ ನ್ಯೂಸ್
07-04-26 12:37 pm HK News Staffer ಕರ್ನಾಟಕ
ಬೆಂಗಳೂರು, ಏಪ್ರಿಲ್ 07: ಅಕ್ರಮ ಆಸ್ತಿ ಸಂಪಾದನೆ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದಾಳಿ ನಡೆಸಿ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. ಚಿತ್ರದುರ್ಗ, ಬಳ್ಳಾರಿ, ಶಿವಮೊಗ್ಗ, ಬೆಳಗಾವಿ ಹಾಗೂ ಮಂಡ್ಯ ಸೇರಿದಂತೆ ಹಲವು ಕಡೆಗಳಲ್ಲಿ ಮನೆಗಳು ಮತ್ತು ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದು ಹಲವು ದಾಖಲೆ ಪತ್ರಗಳನ್ನು ವಶಪಡಿಸಿಕೊಂಡಿದ್ದಾರೆ.
ಚಿತ್ರದುರ್ಗ ; ಅಸಿಸ್ಟೆಂಟ್ ಅಕೌಂಟೆಂಟ್ ಮನೆ ಮೇಲೆ ದಾಳಿ
ಚಿತ್ರದುರ್ಗ ನಿರ್ಮಿತಿ ಕೇಂದ್ರದ ಅಸಿಸ್ಟೆಂಟ್ ಅಕೌಂಟೆಂಟ್ ಸುಶೀಲಮ್ಮ ಅವರ ಮೆದೇಹಳ್ಳಿ ರಸ್ತೆಯಲ್ಲಿರುವ ನಿವಾಸ ಹಾಗೂ ಹಿರಿಯೂರಿನ ಯಾರದಕಟ್ಟೆ ತೋಟದ ಮನೆಯಲ್ಲಿ ಲೋಕಾಯುಕ್ತ ತಂಡ ದಾಳಿ ನಡೆಸಿದೆ. ಎಸ್‌ಪಿ ವಾಸುದೇವ್ ರಾಮ್ ಮತ್ತು ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ದಾಖಲೆಗಳನ್ನು ವಶಪಡಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.
ಬಳ್ಳಾರಿ: ಮೀನುಗಾರಿಕೆ ಇಲಾಖೆ ಅಧಿಕಾರಿ ಟಾರ್ಗೆಟ್
ಬಳ್ಳಾರಿಯಲ್ಲಿ ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಶಿವಣ್ಣ ಅವರ ಮನೆ ಮತ್ತು ಕಚೇರಿಯ ಮೇಲೆ ದಾಳಿ ನಡೆದಿದೆ. ಸಿದ್ಧಾರ್ಥ್ ನಗರದಲ್ಲಿರುವ ನಿವಾಸ ಸೇರಿದಂತೆ ನಾಲ್ಕು ಕಡೆಗಳಲ್ಲಿ ಪರಿಶೀಲನೆ ನಡೆಸಿದ್ದು, ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಕ್ರಮ ಕೈಗೊಳ್ಳಲಾಗಿದೆ.
ಶಿವಮೊಗ್ಗ: ಜಿಲ್ಲಾ ಅಧಿಕಾರಿ ನಿವಾಸ–ಕಚೇರಿ ಪರಿಶೀಲನೆ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶೋಭಾ ಅವರ ಕಚೇರಿ ಮತ್ತು ನಿವಾಸದ ಮೇಲೆ ದಾಳಿ ನಡೆದಿದೆ. ತರಲಘಟ್ಟ, ಆನಂದಪುರ ಹಾಗೂ ಚಾಲುಕ್ಯ ನಗರ ಸೇರಿ ಹಲವು ಸ್ಥಳಗಳಲ್ಲಿ ಶಿವಮೊಗ್ಗ, ದಾವಣಗೆರೆ ಮತ್ತು ಹಾವೇರಿ ತಂಡಗಳು ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.
ಬೆಳಗಾವಿ: ಚಿನ್ನಾಭರಣ, ಕೋಟ್ಯಾಂತರ ಠೇವಣಿ ಪತ್ತೆ
ಬೆಳಗಾವಿ ಜಿಲ್ಲೆಯ ನಗರಾಭಿವೃದ್ಧಿ ಕೋಶದ ಎಇಇ ಅಜಯ್ ಸಿಂಗ್ ರಜಪೂತ್ ಅವರ ಮನೆ ಮೇಲೆ ನಡೆದ ದಾಳಿಯಲ್ಲಿ ಒಂದು ಕೆಜಿ ಚಿನ್ನಾಭರಣ ಹಾಗೂ ಬ್ಯಾಂಕ್‌ನಲ್ಲಿ ಸುಮಾರು ₹2 ಕೋಟಿ ಠೇವಣಿ ಪತ್ತೆಯಾಗಿದೆ. ಬೆಳಗಾವಿ, ಅಥಣಿ ಮತ್ತು ಹುಕ್ಕೇರಿ ಸೇರಿ ಮೂರು ಸ್ಥಳಗಳಲ್ಲಿ ಪರಿಶೀಲನೆ ನಡೆದಿದೆ.
ಮಂಡ್ಯ: ಲೋಕೋಪಯೋಗಿ ಇಲಾಖೆ ಅಧಿಕಾರಿ ವಿರುದ್ಧ ದಾಳಿ
ಮಂಡ್ಯ ಲೋಕೋಪಯೋಗಿ ಇಲಾಖೆಯ ಎಇಇ ರೇವಣ್ಣ ವಿರುದ್ಧ ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ ಕೇಳಿಬಂದಿದ್ದು, ಮೈಸೂರು ಕಚೇರಿ ಹಾಗೂ ಮಂಡ್ಯದ ನಿವಾಸಗಳಲ್ಲಿ ದಾಳಿ ನಡೆದಿದೆ. ಲೋಕಾಯುಕ್ತ ಎಸ್‌ಪಿ ಟಿ.ಜೆ. ಉದೇಶ್ ಮಾರ್ಗದರ್ಶನದಲ್ಲಿ ತಂಡ ಕಾರ್ಯಾಚರಣೆ ನಡೆಸಿದೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm