ಬ್ರೇಕಿಂಗ್ ನ್ಯೂಸ್
08-04-26 02:09 pm HK News Staffer ಕರ್ನಾಟಕ
ಚಿಕ್ಕಮಗಳೂರು, ಎಪ್ರಿಲ್ 8: ಮುಳ್ಳಯ್ಯನಗಿರಿಗೆ ಪ್ರವಾಸ ಬಂದಿದ್ದ ಕೇರಳದ ಕುಟುಂಬದ ಜೊತೆಗಿದ್ದ 10ನೇ ತರಗತಿ ವಿದ್ಯಾರ್ಥಿನಿ ಕಾಡಿನ ಮಧ್ಯೆ ನಾಪತ್ತೆಯಾಗಿದ್ದು, ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ನಾಪತ್ತೆಯಾದ ಬಾಲಕಿಯನ್ನು ಕೇರಳದ ಪಾಲಕ್ಕಾಡ್ ನಿವಾಸಿ ಶ್ರೀನಂದನ ಎಂದು ಗುರುತಿಸಲಾಗಿದೆ.
ಕೇರಳದ ಪಾಲಕ್ಕಾಡ್ ಮೂಲದ 15 ವರ್ಷದ ಬಾಲಕಿ, ತನ್ನ ಪೋಷಕರು ಹಾಗೂ ಸುಮಾರು 40 ಜನರ ತಂಡದೊಂದಿಗೆ ಮಂಗಳವಾರ ಚಿಕ್ಕಮಗಳೂರಿಗೆ ಆಗಮಿಸಿದ್ದರು. ಏಪ್ರಿಲ್ 7ರ ಸಂಜೆ 6 ಗಂಟೆಯ ವೇಳೆಗೆ ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಸಮೀಪದಲ್ಲಿ ಬಾಲಕಿ ಕಾಣೆಯಾಗಿದ್ದಾಳೆ. ಬಾಲಕಿ ಕಾಣೆಯಾಗುತ್ತಿದ್ದಂತೆ ಸ್ಥಳೀಯರು ಹಾಗೂ ಪ್ರವಾಸಿಗರು ಹುಡುಕಾಟ ಆರಂಭಿಸಿದರೂ ಯಾವುದೇ ಸುಳಿವು ಸಿಗಲಿಲ್ಲ. ಗಾಬರಿಗೊಂಡ ಪೋಷಕರು ಕೂಡಲೇ ಪೊಲೀಸರಿಗೆ ದೂರು ನೀಡಿದ್ದರು.
ಬಾಲಕಿ ನಾಪತ್ತೆಯಾದ ವಿಷಯ ತಿಳಿದು ಎಚ್ಚೆತ್ತ ಜಿಲ್ಲಾಡಳಿತ, ನಿನ್ನೆ ತಡರಾತ್ರಿ ವರೆಗೂ ಅರಣ್ಯ ಮತ್ತು ಪೊಲೀಸ್ ಇಲಾಖೆಯಿಂದ ಹುಡುಕಾಟ ನಡೆಸಿದೆ. ಸುಮಾರು 30ಕ್ಕೂ ಹೆಚ್ಚು ಪೊಲೀಸ್, ಅಗ್ನಿಶಾಮಕ ದಳ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ರಾತ್ರಿ 1 ಗಂಟೆಯ ವರೆಗೆ ಬೆಟ್ಟದ ಮೂಲೆ ಮೂಲೆಗಳಲ್ಲಿ ಹುಡುಕಾಟ ನಡೆಸಿದರು. ಆದರೆ, ದಟ್ಟವಾದ ಮಂಜು ಮತ್ತು ಭಾರೀ ಕತ್ತಲು ಆವರಿಸಿದ್ದರಿಂದ ರಾತ್ರಿ ಕಾರ್ಯಾಚರಣೆ ಸ್ಥಗಿತಗೊಳಿಸಿ ಸಿಬ್ಬಂದಿ ವಾಪಸ್ಸಾಗಿದ್ದರು.
ಇಂದು ಮುಂಜಾನೆಯಿಂದಲೇ ಶೋಧ ಕಾರ್ಯ ಆರಂಭಿಸಲಾಗಿದ್ದು, ಅರಣ್ಯ ಇಲಾಖೆ ಹಾಗೂ ಪೊಲೀಸರ ತಂಡಗಳು ಬೆಟ್ಟದ ತಪ್ಪಲಿನಲ್ಲಿ ಹುಡುಕಾಡುತ್ತಿವೆ. ದಟ್ಟ ಅರಣ್ಯ ಮತ್ತು ಕಡಿದಾದ ಪರ್ವತ ಪ್ರದೇಶ ಇರುವುದರಿಂದ ಬಾಲಕಿಯನ್ನು ಪತ್ತೆಹಚ್ಚಲು ಡ್ರೋನ್ ಕ್ಯಾಮೆರಾಗಳನ್ನು ಬಳಸಲಾಗಿದೆ. ಅಗ್ನಿಶಾಮಕ ದಳ ಮತ್ತು ಸ್ಥಳೀಯ ಅರಣ್ಯ ರಕ್ಷಕರು ವಿವಿಧ ತಂಡಗಳಾಗಿ ಶೋಧ ನಡೆಸುತ್ತಿದ್ದಾರೆ. ಎರಡು ದಿನಗಳ ಹಿಂದಷ್ಟೇ ಮಡಿಕೇರಿ ಬಳಿಯ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ಹೋಗಿದ್ದ ಕೇರಳದ ಯುವತಿ ಶರಣ್ಯ ನಾಪತ್ತೆಯಾಗಿ ನಾಲ್ಕು ದಿನ ಕಾಡಿನಲ್ಲಿ ಅಂಡಲೆದು ಬಳಿಕ ಸ್ಥಳೀಯ ಮಲೆಕುಡಿಯ ಜನರಿಗೆ ಸಿಕ್ಕಿದ್ದರು. ಈ ಪ್ರಕರಣ ರಾಜ್ಯದಲ್ಲಿ ಭಾರೀ ಆತಂಕಕ್ಕೆ ಕಾರಣವಾಗಿತ್ತು. ಇದೀಗ ಅಂತಹದ್ದೇ ಮತ್ತೊಂದು ಎಡವಟ್ಟು ಉಂಟಾಗಿದೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm