ಬ್ರೇಕಿಂಗ್ ನ್ಯೂಸ್
15-04-26 03:15 pm HK News Staffer ಕರ್ನಾಟಕ
ಬೆಂಗಳೂರು, ಎಪ್ರಿಲ್ 15: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಲಾಗಿದೆ.
ಪಕ್ಷದಲ್ಲಿ ಆಂತರಿಕ ಶಿಸ್ತು ಕಾಪಾಡುವ ನಿಟ್ಟಿನಲ್ಲಿ ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶಿಸಿದ್ದಾರೆ. ಬೆಂಗಳೂರಿನ ಬೆನ್ಸನ್ ಟೌನ್ ನಿವಾಸಿಯಾದ ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ದಾವಣಗೆರೆ ದಕ್ಷಿಣ ಉಪ ಚುನಾವಣೆಯಲ್ಲಿ ನಡೆಸಿದ ಪಕ್ಷ ವಿರೋಧಿ ಚಟುವಟಿಕೆಗಳ ಹಿನ್ನೆಲೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಆಮೂಲಕ ದೊಡ್ಡ ನಾಯಕರಾಗಿದ್ದರೂ ಪಕ್ಷದ ಶಿಸ್ತನ್ನು ಮೀರಿದರೆ ಕ್ರಮ ಅನಿವಾರ್ಯ ಎಂಬ ಸಂದೇಶವನ್ನು ಡಿ.ಕೆ. ಶಿವಕುಮಾರ್ ರವಾನಿಸಿದ್ದಾರೆ. ಇತ್ತೀಚೆಗೆ ನಡೆದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಸಂದರ್ಭದಲ್ಲಿ ಅಬ್ದುಲ್ ಜಬ್ಬಾರ್ ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧವಾಗಿ ಕೆಲಸ ಮಾಡಿದ್ದಾರೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದವು. ಈ ಬಗ್ಗೆ ಕೆಪಿಸಿಸಿ ಶಿಸ್ತು ಸಮಿತಿಗೆ ದೂರು ಸಲ್ಲಿಕೆಯಾಗಿತ್ತು.
ಎರಡು ದಿನಗಳ ಹಿಂದೆ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ನಜೀರ್ ಅಹ್ಮದ್ ಅವರನ್ನು ಹುದ್ದೆಯಿಂದ ವಜಾಗೊಳಿಸಲಾಗಿತ್ತು. ಏ.13 ರಂದು ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ಕೊಡುವಂತೆ ನಜೀರ್ ಅಹ್ಮದ್ಗೆ ಡೆಡ್ಲೈನ್ ನೀಡಿದ್ದರು. ಸಂಜೆಯೊಳಗೆ ರಾಜೀನಾಮೆ ನೀಡದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರಿಗೆ ಒತ್ತಡ ಹೇರಿ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ತೆರವು ಮಾಡಲಾಗಿತ್ತು.
ಶಾಸಕರಾದ ರಿಜ್ವಾನ್ ಅರ್ಷದ್ ಹಾಗೂ ಸಲೀಂ ಅಹ್ಮದ್ ಪತ್ರಿಕಾಗೋಷ್ಠಿಯನ್ನು ನಡೆಸಿ, ಪಕ್ಷದ ಅಭ್ಯರ್ಥಿ ಸಮರ್ಥ್ ಅವರನ್ನು ಸೋಲಿಸಲು ಕಾಂಗ್ರೆಸ್ ಮುಖಂಡರು ಪ್ರಯತ್ನ ನಡೆಸಿದ್ದಾರೆ ಎಂದು ಆರೋಪಿಸಿದ್ದರು. ಆರೋಪದ ಬೆನ್ನಲ್ಲೇ ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ರಾಜೀನಾಮೆ ಹಿನ್ನೆಲೆಯಲ್ಲಿ ಬಳಿಕ ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜನೆ ಮಾಡಲಾಗಿತ್ತು.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm