ಬ್ರೇಕಿಂಗ್ ನ್ಯೂಸ್
31-07-20 11:24 am Bangalore Correspondent ಕರ್ನಾಟಕ
ಬೆಂಗಳೂರು (ಜು. 31): ಬೆಂಗಳೂರಿನ ನೂತನ ಪೊಲೀಸ್ ಆಯುಕ್ತರಾಗಿ ನೇಮಕಗೊಂಡಿರುವ ಐಪಿಎಸ್ ಅಧಿಕಾರಿ ಕಮಲ್ ಪಂತ್ ಇಂದು ಸಂಜೆ ಅಧಿಕಾರ ಸ್ವೀಕರಿಸಲಿದ್ದಾರೆ. ಬೆಂಗಳೂರಿನ ಪೊಲೀಸ್ ಕಮಿಷನರ್ ಆಗಿದ್ದ ಭಾಸ್ಕರ್ ರಾವ್ ಅವರನ್ನು ವರ್ಗಾವಣೆ ಮಾಡಿ ಇಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.
ಇಂದು ಸಂಜೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ಅಧಿಕಾರ ಸ್ವೀಕಕರಿಸಲಿದ್ದಾರೆ. 1990ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿರುವ ಕಮಲ್ ಪಂತ್ ಮೂಲತಃ ಉತ್ತರಾಂಚಲದ ಪಿತೋರ್ಗಢದವರು. ಭೂಗೋಳಶಾಸ್ತ್ರದಲ್ಲಿ ಎಂಎಸ್ ಸಿ ಪದವಿ ಪಡೆದಿರುವ ಕಮಲ್‌ಪಂತ್ 1990ರ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿ ಅಯ್ಕೆಯಾಗಿದ್ದರು.
ಗುಲ್ಬರ್ಗಾದಲ್ಲಿ ಪ್ರೊಬೆಷನರಿ ಎಎಸ್ಪಿ ಪೊಲೀಸ್ ಸೇವೆ ಆರಂಭಿಸಿದ ಕಮಲ್ ಪಂತ್ ಬಳಿಕ ಶಿವಮೊಗ್ಗದ ಭದ್ರಾವತಿಯಲ್ಲಿ ಎಎಸ್ಪಿಯಾಗಿ ಕರ್ತವ್ಯ ನಿರ್ವಹಣೆ ಮಾಡಿದ್ದಾರೆ. ಬಳಿಕ ಶಿವಮೊಗ್ಗ ಹಾಗೂ ಮಂಗಳೂರಿನಲ್ಲಿ ಎಸ್ಪಿಯಾಗಿ ಕಾರ್ಯ ನಿರ್ವಹಿಸಿದ್ದ ಕಮಲ್ ಪಂತ್ ಕೇಂದ್ರ ವಲಯ ಐಜಿಪಿಯಾಗಿಯೂ ಕರ್ತವ್ಯ ನಿರ್ವಹಿಸಿದ್ದಾಎ. ನಂತರ ಬೆಂಗಳೂರು ನಗರದಲ್ಲಿ ಕಾನೂನು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ನೇಮಕಗೊಂಡಿದ್ದರು. ಬಳಿಕ ಆಂತರಿಕ ಭದ್ರತಾ ವಿಭಾಗ ಎಡಿಜಿಪಿ ಆಗಿ ಕಾರ್ಯ ನಿರ್ವಹಣೆ ಮಾಡಿದರು. ಗುಪ್ತಚರ ಇಲಾಖೆ ಎಡಿಜಿಪಿಯಾಗಿ ಕರ್ತವ್ಯ ನಿರ್ವಹಿಸಿದ ಕಮಲ್ ಪಂತ್ ಇದೀಗ ಬೆಂಗಳೂರು ಪೊಲೀಸ್ ಆಯುಕ್ತರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಬೆಂಗಳೂರು ಪೊಲೀಸ್ ಆಯುಕ್ತರಾಗಿದ್ದ ಭಾಸ್ಕರ್ ರಾವ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಎಡಿಜಿಪಿ ಆಗಿ ವರ್ಗಾವಣೆ ಮಾಡಲಾಗಿದೆ. ನೂತನ ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ಇಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಗುಪ್ತಚರ ಇಲಾಖೆಯ ಮುಖ್ಯಸ್ಥರಾಗಿದ್ದ ಕಮಲ್ ಪಂತ್ ಜಾಗಕ್ಕೆ 1994ನೇ ಬ್ಯಾಚ್ನ ಐಪಿಎಸ್ ಅಧಿಕಾರಿ ಬಿ. ದಯಾನಂದ ಅವರನ್ನು ನೇಮಕ ಮಾಡಲಾಗಿದೆ.
ಆ. 1ಕ್ಕೆ ಭಾಸ್ಕರ್ ರಾವ್ ಬೆಂಗಳೂರು ಪೊಲೀಸ್ ಕಮಿಷನರ್ ಆಗಿ ಒಂದು ವರ್ಷ ಪೂರ್ಣವಾಗುತ್ತಿತ್ತು. ಅವರ ಒಂದು ವರ್ಷದ ಅವಧಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ನೂತನ ಕಮಿಷನರ್ ಆಗಿ ಕಮಲ್ ಪಂತ್ ಅವರನ್ನು ನೇಮಕ ಮಾಡಲಾಗಿದೆ ಎನ್ನಲಾಗುತ್ತಿದೆ. ಬೆಂಗಳೂರು ಪೊಲೀಸ್ ಕಮಿಷನರ್ ಹುದ್ದೆಗಾಗಿ ಕಮಲ್ ಪಂತ್ ಮತ್ತು ಸುನಿಲ್ ಅಗರ್ವಾಲ್ ಅವರ ನಡುವೆ ಪೈಪೋಟಿ ನಡೆದಿತ್ತು. ಕೊನೆಗೂ ಬೆಂಗಳೂರು ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ನೇಮಕಗೊಂಡಿದ್ದಾರೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm