ಬ್ರೇಕಿಂಗ್ ನ್ಯೂಸ್
18-04-26 10:20 am HK News Staffer ಕರ್ನಾಟಕ
ಲಕ್ನೋ, ಎಪ್ರಿಲ್ 18: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ದ್ವಿ ಪೌರತ್ವ ಹೊಂದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿ, ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಅಲಹಾಬಾದ್ ಹೈಕೋರ್ಟ್ ಶುಕ್ರವಾರ ಆದೇಶ ನೀಡಿದೆ.
ಉತ್ತರ ಪ್ರದೇಶದ ರಾಯ್‌ಬರೇಲಿ ಜಿಲ್ಲೆಯ ಕೊತ್ವಾಲಿ ಪೊಲೀಸ್ ಠಾಣೆಗೆ ಎಫ್‌ಐಆರ್ ದಾಖಲಿಸುವಂತೆ ಅಲಹಾಬಾದ್ ಹೈಕೋರ್ಟ್ ಲಕ್ನೋ ಪೀಠವು ಆದೇಶ ಹೊರಡಿಸಿದೆ. ರಾಹುಲ್ ಗಾಂಧಿ ಅವರು ಪ್ರಸ್ತುತ ರಾಯ್ ಬರೇಲಿ ಲೋಕಸಭಾ ಕ್ಷೇತ್ರದ ಸಂಸದರು. ರಾಹುಲ್ ವಿರುದ್ಧ ಕಾನೂನು ಕ್ರಮಕ್ಕೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನ ಪುರಸ್ಕರಿಸಿದ ಕೋರ್ಟ್ ಪ್ರಕರಣ ದಾಖಲಿಸಲು ಆದೇಶಿಸಿದೆ.
ಬೆಂಗಳೂರು ಮೂಲದ ಬಿಜೆಪಿ ಕಾರ್ಯಕರ್ತ ಎಸ್. ವಿಘ್ನೇಶ್ ಶಿಶಿರ್ ಎಂಬವರು ರಾಹುಲ್ ಗಾಂಧಿ ದ್ವಿಪೌರತ್ವ ಹೊಂದಿದ್ದಾರೆಂದು ಆರೋಪಿಸಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಈ ಮೊದಲು ಜನವರಿ 28 ರಂದು ಲಕ್ನೋದ ವಿಶೇಷ ನ್ಯಾಯಾಲಯವು ರಾಹುಲ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿದ್ದ ವಿಘ್ನೇಶ್ ಅವರ ಅರ್ಜಿಯನ್ನು ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ರಾಹುಲ್ ಗಾಂಧಿ ಅವರು ಭಾರತೀಯ ಪ್ರಜೆಯ ಜೊತೆಗೆ ಬ್ರಿಟಿಷ್ ಪ್ರಜೆಯೂ ಆಗಿದ್ದಾರೆ ಎಂಬುದನ್ನು ಸಾಬೀತುಪಡಿಸುವ ಬ್ರಿಟನ್ ಸರ್ಕಾರದ ಗೌಪ್ಯ ಇಮೇಲ್‌ಗಳು ಮತ್ತು ಪ್ರಮುಖ ದಾಖಲೆಗಳು ತಮ್ಮ ಬಳಿ ಇವೆ ಎಂದು ಅರ್ಜಿದಾರ ಶಿಶಿರ್ ಹೇಳಿಕೊಂಡಿದ್ದರು.
ಅಲ್ಲದೇ ಬ್ರಿಟಿಷ್ ಪೌರತ್ವ ಹೊಂದಿರುವುದರಿಂದ ರಾಹುಲ್ ಗಾಂಧಿ ಅವರು ಭಾರತದ ಚುನಾವಣೆಗಳಲ್ಲಿ ಸ್ಪರ್ಧಿಸಲು ಅನರ್ಹರಾಗಿದ್ದಾರೆ ಮತ್ತು ಲೋಕಸಭಾ ಸದಸ್ಯ ಹುದ್ದೆಯನ್ನು ಹೊಂದಲು ಸಾಧ್ಯವಿಲ್ಲ ಎಂದು ಆರೋಪಿಸಿದ್ದರು. ಈ ಸಂಬಂಧ 2025ರ ಡಿಸೆಂಬರ್ 17 ರಂದು ರಾಹುಲ್ ಗಾಂಧಿ ವಿರುದ್ಧ ರಾಯ್ ಬರೇಲಿಯ ವಿಶೇಷ ಜನಪ್ರತಿನಿಧಿ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು. ಬಳಿಕ ಹೈಕೋರ್ಟ್ ಪ್ರಕರಣವನ್ನ ಲಕ್ನೋ ಪೀಠಕ್ಕೆ ವರ್ಗಾಯಿಸಿತ್ತು. ಲಕ್ನೋ ಪೀಠ ಅರ್ಜಿಯನ್ನ ವಜಾಗೊಳಿಸಿದ ಬಳಿಕ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm