ಬ್ರೇಕಿಂಗ್ ನ್ಯೂಸ್
21-04-26 09:02 pm HK News Staffer ಕರ್ನಾಟಕ
ಚೆನ್ನೈ, ಎಪ್ರಿಲ್ 21: ತಮಿಳುನಾಡು ಚುನಾವಣೆ ಪ್ರಚಾರದಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡ ಎಐಎಡಿಎಂಕೆ ಪಕ್ಷವನ್ನ ಟೀಕಿಸುವ ಭರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ಮೋದಿಯನ್ನು ಭಯೋತ್ಪಾದಕ ಎಂದು ಹೇಳುವ ಮೂಲಕ ವಿವಾದಕ್ಕೆ ಗುರಿಯಾಗಿದ್ದಾರೆ.
ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಖರ್ಗೆ, ಎಐಡಿಎಂಕೆ ಪಕ್ಷವು ಮೋದಿ ಅವರೊಂದಿಗೆ ಹೇಗೆ ಸೇರಬಹುದು? ಮೋದಿ ಒಬ್ಬ ಭಯೋತ್ಪಾದಕ, ಅವರು ಸಮಾನತೆಯನ್ನ ನಂಬುವುದಿಲ್ಲ. ಅವರ ಪಕ್ಷಕ್ಕೂ ಸಮಾನತೆ ಮತ್ತು ನ್ಯಾಯದಲ್ಲಿ ನಂಬಿಕೆಯಿಲ್ಲ. ಈ ಜನ ಅವರೊಂದಿಗೆ ಸೇರುತ್ತಿದ್ದಾರೆ ಅಂದ್ರೆ, ಅವರು ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುತ್ತಿದ್ದಾರೆ ಎಂದರ್ಥ ಎಂದು ಹೇಳಿದರು.
ತಮ್ಮ ಹೇಳಿಕೆ ವಿವಾದ ಆಗುತ್ತಲೇ ಸ್ಪಷ್ಟನೆ ನೀಡಿದ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ಒಬ್ಬ ಭಯೋತ್ಪಾದಕ ಎಂದು ನಾನು ಎಂದಿಗೂ ಹೇಳಿಲ್ಲ. ಅವರು ಜನರನ್ನು ಮತ್ತು ರಾಜಕೀಯ ಪಕ್ಷಗಳನ್ನು ಬೆದರಿಸುವ ಕೆಲಸ ಮಾಡುತ್ತಾರೆ ಎಂದು ನಾನು ಹೇಳಲು ಬಯಸಿದ್ದೆ. ಪ್ರಧಾನಿ ಮೋದಿ ಯಾವಾಗಲೂ ಬೆದರಿಕೆ ಹಾಕುತ್ತಾರೆ ಮತ್ತು ಅವರ ನಡವಳಿಕೆ ರಾಜಕೀಯ ವಲಯದಲ್ಲಿ ಭಯ ಉಂಟು ಮಾಡುತ್ತದೆ ಎಂದು ಖರ್ಗೆ ಸ್ಪಷ್ಟಪಡಿಸಿದರು.
ತಮ್ಮ ಹೇಳಿಕೆ ಪ್ರಧಾನಿ ಕಾರ್ಯಶೈಲಿಯನ್ನ ಪ್ರಶ್ನಿಸುವ ಉದ್ದೇಶ ಹೊಂದಿತ್ತೇ ಹೊರತು ವೈಯಕ್ತಿಕ ದಾಳಿ ಮಾಡುವ ಉದ್ದೇಶವನ್ನಲ್ಲ. ಕೇಂದ್ರ ಸರ್ಕಾರ ಮತ್ತು ಸರ್ಕಾರಿ ಸಂಸ್ಥೆಗಳನ್ನು ಪ್ರಧಾನಿ ತಮಗೆ ಬೇಕಾದ ರೀತಿ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂದು ಖರ್ಗೆ ಆರೋಪಿಸಿದರು. ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ ಇಲಾಖೆ ಮತ್ತು CBI ನಂತಹ ಪ್ರಮುಖ ಸಂಸ್ಥೆಗಳು ಸಂಪೂರ್ಣ ಪ್ರಧಾನಿಯವರ ನಿಯಂತ್ರಣದಲ್ಲಿವೆ ಮತ್ತು ವಿರೋಧಿಗಳನ್ನ ಬೆದರಿಸಲು ಅವುಗಳನ್ನು ಬಳಸಲಾಗುತ್ತಿದೆ ಎಂದವರು ಹೇಳಿದರು.
ಖರ್ಗೆ ಹೇಳಿಕೆಗೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದು ಮೋದಿಯನ್ನು ಅವಮಾನಿಸುವುದು ಕಾಂಗ್ರೆಸ್‌ನ ಪಿತೂರಿ ಎಂದು ಬಿಜೆಪಿ ವಕ್ತಾರ ಸಂಭಿತ್ ಪಾತ್ರ ಹೇಳಿದ್ದಾರೆ. ಪ್ರಧಾನಿ ಮೋದಿಯನ್ನು ಭಯೋತ್ಪಾದಕ ಎಂದು ಕರೆಯುವುದು ನಾಲಿಗೆಯ ಎಡವಟ್ಟಲ್ಲ, ಬದಲಾಗಿ ರಾಹುಲ್ ಗಾಂಧಿಯವರ ಆಜ್ಞೆಯ ಮೇರೆಗೆ ಮಾಡಿದ ಹೇಳಿಕೆ ಎಂದು ಪತ್ರಾ ಆರೋಪಿಸಿದರು.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm