ಬ್ರೇಕಿಂಗ್ ನ್ಯೂಸ್
26-04-26 12:41 pm HK News Staffer ಕರ್ನಾಟಕ
ಬೆಂಗಳೂರು, ಎಪ್ರಿಲ್ 26: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತಂದವರಿಗೆ ಅದನ್ನು ಕೆಳಗಿಳಿಸುವುದೂ ಗೊತ್ತಿದೆ. ಕಾಂಗ್ರೆಸ್ ಪಕ್ಷದ ಬೆನ್ನೆಲುಬಾಗಿ ನಿಂತ ಮುಸ್ಲಿಮರನ್ನು ಈಗ ನಡುನೀರಿನಲ್ಲಿ ಕೈಬಿಡಲಾಗುತ್ತಿದೆ ಎಂದು ಮಂಡ್ಯದ ಮುಸ್ಲಿಂ ಧರ್ಮಗುರುಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಅಹಮ್ಮದ್ ಮತ್ತು ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ವಜಾಗೊಳಿಸಿದ್ದಕ್ಕೆ ಮಂಡ್ಯದ ಜಾಮಿಯಾ ಮಸೀದಿಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿ ಸರ್ಕಾರಕ್ಕೆ ನೇರ ಎಚ್ಚರಿಕೆ ನೀಡಿದ್ದಾರೆ. ಅಬ್ದುಲ್ ಖದೀರ್ ಮಾತನಾಡಿ, ನಮಗೆ ಕಾಂಗ್ರೆಸ್ ಒಂದೇ ಅಲ್ಲ, ಬೇರೆ ಆಯ್ಕೆಗಳೂ ಇವೆ. ಮುಸ್ಲಿಂ ಸಮುದಾಯ 90 ಶೇ. ಮತಗಳನ್ನು ಕಾಂಗ್ರೆಸ್ಗೆ ಹಾಕಿದೆ. ನಾವು ಬೇರೆ ಕಡೆ ಹೋಗಲ್ಲ ಎಂಬ ಭ್ರಮೆಯಲ್ಲಿ ಕಾಂಗ್ರೆಸ್ ನಾಯಕರಿದ್ದಾರೆ. ಆದರೆ ನಮಗೆ ಬೇರೆ ಪಕ್ಷಗಳ ಆಯ್ಕೆಯೂ ಇದೆ ಎಂಬುದನ್ನು ಮರೆಯಬೇಡಿ ಎಂದು ಎಚ್ಚರಿಸಿದರು.
ನಿಮ್ಮನ್ನು ಅಧಿಕಾರದ ಕುರ್ಚಿಯ ಮೇಲೆ ಕೂರಿಸಿದವರು ನಾವು. ಹಾಗೆಯೇ ನಿಮ್ಮನ್ನು ಅಧಿಕಾರದಿಂದ ಕೆಳಗಿಳಿಸುವುದು ಗೊತ್ತಿದೆ. ನಜೀರ್ ಅಹಮ್ಮದ್ ಅವರನ್ನು ವಜಾ ಮಾಡುವ ಮೊದಲು ಕನಿಷ್ಠ ಒಂದು ನೋಟಿಸ್ ಕೂಡ ನೀಡಿಲ್ಲ. ಸಿಎಂ ಸಿದ್ದರಾಮಯ್ಯ ಅವರಿಗೆ ಗೊತ್ತಿಲ್ಲದೆ ಹೈಕಮಾಂಡ್ ಈ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವೇ ಎಂದು ಪ್ರಶ್ನಿಸಿದರು.
ದಾವಣಗೆರೆ ಮುಸ್ಲಿಂ ನಾಯಕರನ್ನು ಟಾರ್ಗೆಟ್ ಮಾಡುತ್ತಿರುವ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು ಶಾಮನೂರು ಶಿವಶಂಕರಪ್ಪ ಹಿಂದೆ ಬಹಿರಂಗವಾಗಿ ಬಿಜೆಪಿ ಅಭ್ಯರ್ಥಿ ಪರ ಮತ ಕೇಳಿದರೂ ಅವರ ವಿರುದ್ಧ ಕ್ರಮ ಮಾಡಿರಲಿಲ್ಲ. ಆದರೆ ದಾವಣಗೆರೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಒಂದು ಅವಕಾಶ ಕೇಳಿದ್ದೇ ತಪ್ಪಾಯಿತೇ? ಅಲ್ಲಿ ಶಾಮನೂರು ಕುಟುಂಬದವರೇ ಶಾಸಕ, ಸಚಿವ ಮತ್ತು ಸಂಸದರಾಗಿದ್ದಾರೆ. ಸಮರ್ಥ್ ಅವರಿಗೆ ಇನ್ನೂ ವಯಸ್ಸಿತ್ತು. ಮುಂದಿನ ಬಾರಿ ಅವಕಾಶ ನೀಡಬಹುದಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಚುನಾವಣೆ ಸಮಯದಲ್ಲಿ ನಮ್ಮನ್ನು ಬೇಕಾದಂತೆ ಬಳಸಿಕೊಳ್ಳುತ್ತೀರಿ. ಪ್ರಣಾಳಿಕೆಯಲ್ಲಿ ಭರವಸೆಗಳ ಮಹಾಪೂರವನ್ನೇ ಹರಿಸುತ್ತೀರಿ. ಆದರೆ ಅಧಿಕಾರಕ್ಕೆ ಬಂದ ಮೇಲೆ ನಮಗೆ ಒಂದು ಗ್ಲಾಸ್ ನೀರು ಕೊಡಲು ಹಿಂದೆ ಮುಂದೆ ನೋಡುತ್ತೀರಿ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.
ನಾವು ಬ್ಲಾಕ್ ಮೇಲ್ ಮಾಡುತ್ತಿಲ್ಲ, ನಮ್ಮ ಹಕ್ಕನ್ನು ಕೇಳುತ್ತಿದ್ದೇವೆ. ಬಿಎಸ್ ವೈ ಮತ್ತು ನಿರಾಣಿ ಪರವಾಗಿ ಸ್ವಾಮೀಜಿಗಳು ನಿಂತಂತೆ ನಾವು ಇಷ್ಟು ದಿನ ಮಾಡಿರಲಿಲ್ಲ. ಆದರೆ ಈಗ ನಮ್ಮ ಅಸ್ತಿತ್ವದ ಪ್ರಶ್ನೆ ಬಂದಿದೆ. ನಜೀರ್ ಅಹಮ್ಮದ್ ಮತ್ತು ಅಬ್ದುಲ್ ಜಬ್ಬಾರ್ ಅವರನ್ನು ತಕ್ಷಣ ಪುನರ್ ನೇಮಕ ಮಾಡಬೇಕು. ಇಲ್ಲವಾದರೆ 2028ರ ವಿಧಾನಸಭಾ ಚುನಾವಣೆಯಲ್ಲಿ ಮುಸ್ಲಿಂ ಸಮುದಾಯ ಕಾಂಗ್ರೆಸ್ಗೆ ತಕ್ಕ ಪಾಠ ಕಲಿಸುವುದು ಗ್ಯಾರಂಟಿ ಎಂದು ಎಚ್ಚರಿಕೆ ನೀಡಿದ್ದಾರೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm