ಬ್ರೇಕಿಂಗ್ ನ್ಯೂಸ್
30-04-26 11:53 am HK News Staffer ಕರ್ನಾಟಕ
ಬೆಂಗಳೂರು, ಏಪ್ರಿಲ್ 30: ಕರ್ನಾಟಕದ ಹಲವು ಜಿಲ್ಲೆಗಳು ಇಂದು ಮತ್ತು ನಾಳೆ ವರುಣನ ಅಬ್ಬರಕ್ಕೆ ಸಿದ್ಧವಾಗುತ್ತಿದ್ದು, ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಅಲರ್ಟ್ ಘೋಷಿಸಿದೆ. ಕರಾವಳಿ ಭಾಗದಲ್ಲಿ ಉಷ್ಣಾಂಶ ಮತ್ತು ತೇವಾಂಶ ಮುಂದುವರಿದರೂ, ಕೆಲವು ಕಡೆ ಗುಡುಗು-ಮಿಂಚಿನ ಆರ್ಭಟ ಮಾತ್ರ ಕಂಡುಬರುವ ಸಾಧ್ಯತೆ ಇದೆ.
ಭಾರತ ಹವಾಮಾನ ಇಲಾಖೆ ನೀಡಿರುವ ಮಾಹಿತಿ ಪ್ರಕಾರ, ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ, ಕೊಪ್ಪಳ ಸೇರಿದಂತೆ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಅತಿ ಭಾರಿ ಮಳೆಯ ಸಾಧ್ಯತೆ ಹಿನ್ನೆಲೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇನ್ನು ತುಮಕೂರು, ಚಾಮರಾಜನಗರ ಹಾಗೂ ಮೇ 1ರಂದು ಚಿಕ್ಕಮಗಳೂರು, ಮೈಸೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಗುಡುಗು, ಆಲಿಕಲ್ಲು ಸಹಿತ ಸಾಧಾರಣ ಮಳೆಯ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಇತ್ತೀಚಿನ ಮಳೆಯಿಂದ ಬೆಂಗಳೂರಿನಲ್ಲಿ ತಾಪಮಾನ ಗಣನೀಯವಾಗಿ ಇಳಿಕೆಯಾಗಿ, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಬುಧವಾರ ಸಂಜೆ ಸುರಿದ ಮಳೆಯಲ್ಲಿ ಒಟ್ಟು 111.5 ಮಿಮೀ ಮಳೆಯಾಗಿದ್ದು, ಗಾಳಿಯ ವೇಗ ಗಂಟೆಗೆ 75 ಕಿ.ಮೀ. ದಾಖಲಾಗಿದೆ. ಕಳೆದ ಕೆಲವು ವಾರಗಳಿಂದ 36-39 ಡಿಗ್ರಿವರೆಗೆ ಏರಿದ್ದ ಉಷ್ಣಾಂಶಕ್ಕೆ ಇದರಿಂದ ತಾತ್ಕಾಲಿಕ ತಣ್ಣನೆಯ ವಾತಾವರಣ ಉಂಟಾಗಿದೆ.
ಹವಾಮಾನ ತಜ್ಞರ ಪ್ರಕಾರ, ಹೆಚ್ಚಿದ ತಾಪಮಾನದಿಂದ ಉಂಟಾದ ಸಂವಹನ ಪ್ರಕ್ರಿಯೆ (ಕನ್ವೆಕ್ಟಿವ್ ಆಕ್ಟಿವಿಟಿ), ಕೆಳಮಟ್ಟದ ಗಾಳಿಯ ಅಸ್ಥಿರತೆ ಮತ್ತು ತೇವಾಂಶದ ಸಂಯೋಜನೆಯೇ ಆಲಿಕಲ್ಲು ಮಳೆಯ ಪ್ರಮುಖ ಕಾರಣವಾಗಿದೆ.
ಇದರ ಜೊತೆಗೆ ಕೇರಳ ರಾಜ್ಯದಲ್ಲೂ ಮುಂದಿನ ನಾಲ್ಕು ದಿನಗಳವರೆಗೆ ಬೇಸಿಗೆ ಮಳೆಯ ಸಾಧ್ಯತೆ ಇದ್ದು, ಕಣ್ಣೂರು, ಕಾಸರಗೋಡು ಮತ್ತು ಇಡುಕ್ಕಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಗುಡುಗು-ಮಿಂಚು ಹಾಗೂ ಭಾರಿ ಮಳೆಯ ಸಮಯದಲ್ಲಿ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅಗತ್ಯ. ವಿದ್ಯುತ್ ಕಂಬಗಳು, ಮರಗಳು ಮತ್ತು ನೀರು ತುಂಬಿದ ಪ್ರದೇಶಗಳಿಂದ ದೂರವಿರುವುದು ಅಪಾಯ ತಪ್ಪಿಸಲು ಸಹಕಾರಿಯಾಗಲಿದೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm