ಬ್ರೇಕಿಂಗ್ ನ್ಯೂಸ್
03-05-26 12:34 pm HK News Staffer ಕರ್ನಾಟಕ
ಚಿಕ್ಕಮಗಳೂರು, ಮೇ 3: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಗೆ ಸಂಬಂಧಿಸಿದಂತೆ ರಾತ್ರಿಯಿಡೀ ಹೈಡ್ರಾಮಾ ನಡೆದಿದ್ದು, ಭಾರೀ ತಿರುವು ಪಡೆದುಕೊಂಡಿದೆ. ಹೈಕೋರ್ಟ್ ಆದೇಶದಂತೆ ನಡೆದ ಅಂಚೆ ಮತಗಳ ಮರು ಎಣಿಕೆಯಲ್ಲಿ ನಿನ್ನೆ ಸಂಜೆ ಗೆಲುವು ಎಂದು ಘೋಷಿಸಲ್ಪಟ್ಟಿದ್ದ ಹಾಲಿ ಶಾಸಕ ಕಾಂಗ್ರೆಸಿನ ಟಿ.ಡಿ. ರಾಜೇಗೌಡ ಅವರಿಗೆ ಹಿನ್ನಡೆಯಾಗಿದೆ.
ಅಂಚೆ ಮತಗಳ ಮರು ಎಣಿಕೆಯಲ್ಲಿ ನಿನ್ನೆ ಸಾಯಂಕಾಲ ಟಿ.ಡಿ ರಾಜೇಗೌಡ ವಿಜಯ ಸಾಧಿಸಿದರು ಎಂದು ಹೇಳಲಾಗಿತ್ತು. ಆದರೆ ಮತ ಎಣಿಕೆಯಲ್ಲಿ ಭಾರೀ ಗೊಂದಲ ಉಂಟಾಗಿದ್ದರಿಂದ ನಿನ್ನೆ ಬೆಳಗ್ಗೆ ಆರಂಭವಾದ ಮತ ಎಣಿಕೆ ಮಧ್ಯರಾತ್ರಿಯ ವರೆಗೂ ನಡೆಯಿತು. ಇಂದು ಬೆಳಗ್ಗೆ ಎಲ್ಲ ಗೊಂದಲಗಳಿಗೆ ಮಹತ್ವದ ತಿರುವು ಸಿಕ್ಕಿದೆ. 2023ರ ಮೇ 13 ರಂದು ನಡೆದಿದ್ದ ಮತ ಎಣಿಕೆ ವೇಳೆ ಸಿಂಧು ಎಂದು ಪರಿಗಣಿಸಲಾಗಿದ್ದ ಮತಗಳು, ಈಗ ಮರು ಎಣಿಕೆ ವೇಳೆ ತಿರಸ್ಕೃತಗೊಂಡಿವೆ.
ಮತ ಎಣಿಕೆ ಪತ್ರದಲ್ಲಿ ರಾಜೇಗೌಡ ಮತ್ತು ಮತ್ತೊಬ್ಬ ಅಭ್ಯರ್ಥಿ ಇಬ್ಬರಿಗೂ ‘ಡಬ್ಬಲ್ ಟಿಕ್’ ಮಾಡಿರುವುದು ಕಂಡುಬಂದ ಹಿನ್ನೆಲೆಯಲ್ಲಿ 258 ಮತಗಳು ತಿರಸ್ಕೃತಗೊಂಡವು. ಈ ಹಿಂದೆ 569 ಅಂಚೆ ಮತಗಳನ್ನು ಪಡೆದಿದ್ದ ರಾಜೇಗೌಡರ ಪಟ್ಟಿಯಿಂದ 255 ಮತಗಳು ಮರು ಎಣಿಕೆ ವೇಳೆ ಕಡಿತಗೊಂಡವು. ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರಿಗೆ ಬಂದಿದ್ದ 692 ಅಂಚೆ ಮತಗಳಲ್ಲಿ ಕೇವಲ 2 ಮತಗಳು ಮಾತ್ರ ತಿರಸ್ಕೃತಗೊಂಡಿವೆ.
ಹೀಗಾಗಿ ಮರು ಎಣಿಕೆಯಲ್ಲಿ ರಾಜೇಗೌಡರ 255 ಅಂಚೆ ಮತಗಳು ಕಡಿತಗೊಂಡಿದ್ದರಿಂದ ತನಗೆ ಬಹುಮತ ಬಂದಿದೆ ಎಂದು ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ವಿಶ್ವಾಸ ವ್ಯಕ್ತಪಡಿಸಿದ್ದು ಚುನಾವಣಾ ಆಯೋಗ ಅಧಿಕೃತವಾಗಿ ಘೋಷಣೆ ಮಾಡುವುದು ಬಾಕಿ ಇದೆ. ಮರು ಎಣಿಕೆಯಲ್ಲಿ ಇಷ್ಟೊಂದು ದೊಡ್ಡ ಮಟ್ಟದ ವ್ಯತ್ಯಾಸ ಕಂಡುಬಂದ ಬೆನ್ನಲ್ಲೇ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಶಾಸಕ ರಾಜೇಗೌಡ ಅವರು ನಸುಕಿನ ಜಾವ 4 ಗಂಟೆಯ ವರೆಗೂ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಬೀಡುಬಿಟ್ಟಿದ್ದರು.
ಇದೇ ವೇಳೆ, ಕಾಂಗ್ರೆಸ್ ಮುಖಂಡ ಸುಧೀರ್ ಕುಮಾರ್ ಮುರೋಳಿ ಅವರು ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಮತ್ತು ಅಂದಿನ ಚುನಾವಣಾಧಿಕಾರಿ ವೇದಮೂರ್ತಿ ವಿರುದ್ಧ ಮತಗಳ ತಿದ್ದುಪಡಿ ಮಾಡಲಾಗಿದೆ ಎಂದು ದೂರು ನೀಡಿದ್ದಾರೆ. ರಾಜೇಗೌಡರ ಮತಪತ್ರಗಳಲ್ಲಿ ‘ಡಬ್ಬಲ್ ಟಿಕ್’ ಮಾಡಿ ಉದ್ದೇಶಪೂರ್ವಕ ತಿರಸ್ಕೃತ ಆಗುವಂತೆ ಮಾಡಲಾಗಿದೆ ಎಂದು ಕಾಂಗ್ರೆಸ್ ಆರೋಪ ಮಾಡುತ್ತಿದೆ. ಹೈಕೋರ್ಟ್ ಆದೇಶದಂತೆ ಮರು ಎಣಿಕೆ ಮಾಡಿದ್ದೇವೆ. ಹ್ಯಾಂಡ್ ಬುಕ್ ನಿಯಮಗಳ ಪ್ರಕಾರ ಸಿಂಧು ಮತ್ತು ಅಸಿಂಧು ಮತಗಳನ್ನು ನಿರ್ಧರಿಸಲಾಗಿದೆ. ವರದಿಯನ್ನು ಈಗ ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗಿದೆ ಎಂದು ಚುನಾವಣಾ ಅಧಿಕಾರಿ ತಿಳಿಸಿದ್ದಾರೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm