ಬ್ರೇಕಿಂಗ್ ನ್ಯೂಸ್
09-05-26 10:41 pm HK News Desk ಕರ್ನಾಟಕ
ತುಮಕೂರು, ಮೇ 10: ಕುಣಿಗಲ್-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ. ಮಾರುತಿ ಆಲ್ಟೊ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಕಾರಿನಲ್ಲಿದ್ದವರು ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ತಿಳಿಸಿದ್ದಾರೆ.
ಇಂದು ಮಧ್ಯಾಹ್ನ ಸುಮಾರು 2:15ರ ವೇಳೆಗೆ ತುಮಕೂರಿನಿಂದ ಕುಣಿಗಲ್ ಕಡೆಗೆ ತೆರಳುತ್ತಿದ್ದ ಆಲ್ಟೊ ಕಾರು ಎದುರಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೋರ್ವ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
ಮೃತರನ್ನು ಮಂಡ್ಯ ಜಿಲ್ಲೆಯ ಸ್ವರ್ಣಸಂದ್ರ ನಿವಾಸಿಗಳಾದ ಕುಮಾರಸ್ವಾಮಿ, ಅವರ ತಂಗಿ ಗಾಯತ್ರಿ, ಪತ್ನಿ ಹಾಗೂ ಕಾರು ಚಾಲಕ ಗಿರೀಶ್ ಎಂದು ಗುರುತಿಸಲಾಗಿದೆ. ಕುಟುಂಬದವರು ತಮ್ಮ 25ನೇ ವಿವಾಹ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ದೇವರಾಯನದುರ್ಗ ಬೆಟ್ಟಕ್ಕೆ ಭೇಟಿ ನೀಡಿ ಮರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಅಪಘಾತದ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆತನ ಪತ್ತೆಗೆ ಬಲೆ ಬೀಸಿದ್ದಾರೆ. ತನಿಖೆ ಮುಂದುವರಿದಿದೆ ಎಂದು ಎಸ್ಪಿ ತಿಳಿಸಿದ್ದಾರೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm