ಬ್ರೇಕಿಂಗ್ ನ್ಯೂಸ್
10-05-26 01:04 pm HK News Staffer ಕರ್ನಾಟಕ
ಬೆಂಗಳೂರು, ಮೇ 10: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ (66) ಅವರು (ಇಂದು) ಭಾನುವಾರ ನಸುಕಿನ ಜಾವ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಚಿವ ಡಿ. ಸುಧಾಕರ್ ಅವರು ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಮಣಿಪಾಲ ಆಸ್ಪತ್ರೆಯಿಂದ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿ ಹೆಚ್ಚಿನ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಬೆಳಗಿನ ಜಾವ 3:15ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಡಿ. ಸುಧಾಕರ್ ಹಿರಿಯೂರು ಕ್ಷೇತ್ರದ ಶಾಸಕರಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರೂ ಆಗಿದ್ದರು. ಮೊಣಕಾಲು ಶಸ್ತ್ರಚಿಕಿತ್ಸೆ ಸಂಬಂಧ ಸಚಿವ ಸುಧಾಕರ್ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಶಸ್ತ್ರಚಿಕಿತ್ಸೆ ನಂತರ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡು ಆರೋಗ್ಯ ಸ್ಥಿತಿ ಬಿಗಡಾಯಿಸಿತ್ತು. ಬಳಿಕ ಅವರನ್ನು ಮಣಿಪಾಲ್ ಆಸ್ಪತ್ರೆಯಿಂದ ಬೆಂಗಳೂರಿನ ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು.
ಸಚಿವ ಸುಧಾಕರ್ ನಿಧನಕ್ಕೆ ವಿವಿಧ ಗಣ್ಯರು ಸಂತಾಪ ಸೂಚಿಸಿದ್ದಾರೆ. ಡಿ. ಸುಧಾಕರ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿರುವ ಡಿ. ಸುಧಾಕರ್ ಸ್ಟೇಡಿಯಂನಲ್ಲಿ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ.
2004ರಲ್ಲಿ ಮೊದಲ ಬಾರಿಗೆ ಚಳ್ಳಕೆರೆ ಕ್ಷೇತ್ರದಿಂದ ಕಾಂಗ್ರೆಸಿನಿಂದ ಸ್ಪರ್ಧಿಸಿ ಶಾಸಕರಾಗಿದ್ದರು. 2008ರ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಸಿಗದ ಕಾರಣ ಪಕ್ಷೇತರ ಸ್ಪರ್ಧಿಸಿ ಜಯ ಗಳಿಸಿದರು. ಬಳಿಕ ಬಿ.ಎಸ್. ಯಡಿಯೂರಪ್ಪ ಸರ್ಕಾರಕ್ಕೆ ಬೆಂಬಲ ಘೋಷಿಸಿ ಸಮಾಜ ಕಲ್ಯಾಣ ಇಲಾಖೆ ಸಚಿವರಾದರು. 2013ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಅವರು ಮತ್ತೆ ಆಯ್ಕೆಯಾದರು.
2018ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪೂರ್ಣಿಮಾ ಶ್ರೀನಿವಾಸ್ ವಿರುದ್ಧ ಸೋಲು ಅನುಭವಿಸಿದರು. 2023ರಲ್ಲಿ ಕಾಂಗ್ರೆಸ್ ನಿಂದ ಮರು ಆಯ್ಕೆಗೊಂಡು ಸಾಂಖಿಕ ಮತ್ತು ಯೋಜನಾ ಸಚಿವರಾದರು. ಚಳ್ಳಕೆರೆ, ಹಿರಿಯೂರು ಕ್ಷೇತ್ರದಲ್ಲಿ ಜೈನ ಸಮುದಾಯದ ಮತ 100 ದಾಟುವುದಿಲ್ಲ. ಆದರೆ ಇತರ ಸಮುದಾಯಗಳ ಪ್ರೀತಿ ಸಂಪಾದಿಸಿದ್ದ ಅವರು 4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಡಿ.ಸುಧಾಕರ್ ಅವರು ಕಳೆದ 20 ವರ್ಷಗಳಿಂದ ಜಿಲ್ಲಾ ಸಹಕಾತ ಕೇಂದ್ರ ಬ್ಯಾಂಕ್ ಗೆ ಅಧ್ಯಕ್ಷರೂ ಆಗಿದ್ದರು.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm