ಬ್ರೇಕಿಂಗ್ ನ್ಯೂಸ್
17-05-26 08:55 pm HK News Staffer ಕರ್ನಾಟಕ
ಚಿಕ್ಕಮಗಳೂರು, ಮೇ 17: ಜಿಲ್ಲೆಯಲ್ಲಿ ಕಾಡುಕೋಣಗಳ ಹಾವಳಿ ಹೆಚ್ಚಾದ ಹಿನ್ನೆಲೆಯಲ್ಲಿ ಅವುಗಳನ್ನು ಸೆರೆ ಹಿಡಿದು ಸ್ಥಳಾಂತರ ಮಾಡಬೇಕು ಎಂಬ ಒತ್ತಾಯ ಸಾರ್ವಜನಿಕರಿಂದ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ತಂಡ ಕಾಡುಕೋಣ ಸೆರೆ ಕಾರ್ಯಾಚರಣೆಯ ಕುರಿತು ಮಧ್ಯ ಪ್ರದೇಶಕ್ಕೆ ಭೇಟಿ ನೀಡಿ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಇದರ ಅಂಗವಾಗಿ ಸರ್ಕಾರ ಕಾಡುಕೋಣ ಸೆರೆಗೆ ಒಪ್ಪಿಗೆ ಸೂಚಿಸಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೇ ಮೊದಲ ಬಾರಿಗೆ ನಡೆದ ಕಾರ್ಯಾಚರಣೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಯಶಸ್ವಿಯಾಗಿದ್ದು ಅದರ ಕುರಿತ ಒಂದು ವರದಿ ಇಲ್ಲಿದೆ ನೋಡಿ.
ಎರಡು ದಿನಗಳಿಂದ ಕೊಪ್ಪ ಅರಣ್ಯ ವಿಭಾಗದಲ್ಲಿ ಕಾರ್ಯಾಚರಣೆ ಆರಂಭಿಸಿದ್ದ ಅರಣ್ಯ ಇಲಾಖೆ ಅಧಿಕಾರಿಗಳು, ಶನಿವಾರ ಆಲ್ಲೂರು ವಿಭಾಗಕ್ಕೆ ಕಾರ್ಯಾಚರಣೆ ನಡೆಸಿದರು. ಅರೆನೂರು ಸಮೀಪದ ಹಕ್ಕಿಮಕ್ಕಿ ಸಮೀಪ ಆಗಾಗ್ಗೆ ಜಮೀನುಗಳಿಗೆ ನುಗ್ಗಿ ಬೆಳೆ ನಾಶ ಮಾಡುತ್ತಿದ್ದ ಕಾಡುಕೋಣಗೆ 4 ಗಂಟೆ ಸುಮಾರಿಗೆ ಅರಿವಳಿಕೆ ಚುಚ್ಚು ಮದ್ದು ನೀಡಿ ಸೆರೆ ಹಿಡಿಯಲಾಯಿತು. ವೈದ್ಯರಾದ ಡಾ. ರಮೇಶ್ ತಂಡ ಹಾಗೂ 100ಕ್ಕೂ ಹೆಚ್ಚು ಅರಣ್ಯ ಇಲಾಖೆ ಸಿಬ್ಬಂದಿ ಮಳೆಯ ನಡುವೆಯೇ ಕಾರ್ಯಾಚರಣೆ ನಡೆಸಿದರು.

ಕೊಪ್ಪ ಅರಣ್ಯ ವಿಭಾಗದಲ್ಲಿ ಶುಕ್ರವಾರ ನಡೆದ ಕಾರ್ಯಾಚರಣೆಯಲ್ಲಿ ಕಾಡುಕೋಣಕ್ಕೆ ಅರವಳಿಕೆ ನೀಡಲಾಗಿತ್ತು. ಆದರೆ, ಭಾರಿ ತೂಕದ ಕಾಡುಕೋಣವನ್ನು ಇಳಿಜಾರು ಪ್ರದೇಶದಿಂದ ರಸ್ತೆಗೆ ಸಾಗಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಅದಕ್ಕೆ ಪ್ರಜ್ಞೆ ಬರುವ ಚುಚ್ಚು ಮದ್ದು ನೀಡಿ ಕಾಡಿಗೆ ಬಿಡಲಾಗಿತ್ತು. ಇದಕ್ಕೆ ಪರಿಸರಾಸಕ್ತರು ವಿರೋಧ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಶನಿವಾರ ಮತ್ತೊಂದು ಕಾಡುಕೋಣವನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.
ಮಧ್ಯಪ್ರದೇಶದ ಬಾಂಧವಗಡ ಹುಲಿ ಸಂರಕ್ಷಿತ ಪ್ರದೇಶಕ್ಕೆ ಕಳೆದ ವರ್ಷ ಜಿಲ್ಲೆಯ ಅಧಿಕಾರಿಗಳ ತಂಡ ಭೇಟಿ ನೀಡಿ ಬಗ್ಗೆ ಅಧ್ಯಯನ ನಡೆಸಿತ್ತು. ಚಿಕ್ಕಮಗಳೂರು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಯಶ್ಪಾಲ್ ಕ್ಷೀರಸಾಗರ ಅವರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಭೇಟಿ ನೀಡಿ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಇದಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿ ಜಿಲ್ಲೆಯ ಮಲೆನಾಡು ಭಾಗದಲ್ಲಿ ಉಪಟಳ ನೀಡುತ್ತಿದ್ದ ಮೂರು ಕಾಡುಕೋಣಗಳ ಸೆರೆಗೆ ಆದೇಶ ನೀಡಿತ್ತು.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm