ಬ್ರೇಕಿಂಗ್ ನ್ಯೂಸ್
30-05-26 06:45 pm HK News Staffer ಕರ್ನಾಟಕ
ಬೆಂಗಳೂರು, ಮೇ 30: ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಡಿಕೆ ಶಿವಕುಮಾರ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ವಿಧಾನಸೌಧದ ಮೂರನೇ ಮಹಡಿಯ ಸಮ್ಮೇಳನ ಸಭಾಂಗಣದಲ್ಲಿ ಪಕ್ಷದ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಉಪಸ್ಥಿತಿಯಲ್ಲಿ ನಡೆದ ಪಕ್ಷದ ಶಾಸಕರ ಸಭೆಯಲ್ಲಿ ಹಂಗಾಮಿ ಸಿಎಂ ಸಿದ್ದರಾಮಯ್ಯ ಅವರು, ಡಿಕೆಶಿ ಅವರ ಹೆಸರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಸೂಚಿಸಿದ್ದು ಸಭೆಯಲ್ಲಿ ಸರ್ವಾನುಮತದ ಅಂಗೀಕಾರ ನೀಡಲಾಯಿತು.
ಇದೇ ವೇಳೆ, ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಜೂನ್ 3ರಂದು ಬುಧವಾರ ಮಧ್ಯಾಹ್ನ 3.30ಕ್ಕೆ ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆಂದು ತಿಳಿದುಬಂದಿದೆ. ಕಂಠೀರವ, ವಿಧಾನಸೌಧ ಎದುರಲ್ಲಿ ಪ್ರಮಾಣವಚನ ಸಮಾರಂಭ ನಡೆಸುವ ಬಗ್ಗೆಯೂ ಚರ್ಚೆಯಾಗಿದೆ.
ಇದೇ ವೇಳೆ, ಮುಖ್ಯಮಂತ್ರಿ ಜೊತೆಗೆ 14 ಮಂದಿ ಸಚಿವರಾಗಿ ಪ್ರಮಾಣ ಸ್ವೀಕರಿಸಲಿದ್ದಾರೆ. ಮುಂದಿನ ಚುನಾವಣೆ ದೃಷ್ಟಿಯಿಂದ ಹಿರಿಯರು ಮತ್ತು ಹೊಸಬರ ಸಮ್ಮಿಳಿತ ಸಂಪುಟ ರಚನೆಗೆ ಆದ್ಯತೆ ನೀಡಲಾಗಿದೆ. ಮೊದಲ ಹಂತದಲ್ಲಿ ಪ್ರಮಾಣ ಸ್ವೀಕರಿಸುವ ಸಂಭಾವ್ಯ ಸಚಿವರ ಪಟ್ಟಿಯಲ್ಲಿ ಕೆಜೆ ಜಾರ್ಜ್, ಡಾ. ಜಿ. ಪರಮೇಶ್ವರ್, ಪ್ರಿಯಾಂಕ್ ಖರ್ಗೆ, ಲಕ್ಷ್ಮಿ ಹೆಬ್ಬಾಳ್ಕರ್, ಎಂ.ಬಿ. ಪಾಟೀಲ್, ರೂಪಾ ಶಶಿಧರ್(ಮುನಿಯಪ್ಪ ಪುತ್ರಿ), ಸತೀಶ್ ಜಾರಕಿಹೋಳಿ, ಯತೀಂದ್ರ ಸಿದ್ದರಾಮಯ್ಯ, ಜಮೀರ್ ಅಹಮದ್ ಖಾನ್, ಆರ್. ಚಲುವರಾಯಸ್ವಾಮಿ, ಬೈರತಿ ಸುರೇಶ್, ಯು.ಟಿ. ಖಾದರ್, ಕೃಷ್ಣ ಬೈರೇಗೌಡ ಮತ್ತು ಎನ್.ಎ. ಹ್ಯಾರಿಸ್ ಸ್ಥಾನ ಪಡೆಯಲಿದ್ದಾರೆ ಎನ್ನುವ ಮಾಹಿತಿ ಇದೆ.
ಕೆಲವು ಹಿರಿಯರನ್ನು ಸಚಿವ ಸ್ಥಾನದಿಂದ ಕೈಬಿಡುವ ಬಗ್ಗೆ ಪಕ್ಷದ ಹೈಕಮಾಂಡ್ ನಲ್ಲಿ ಚರ್ಚೆಯಾಗಿದೆ. ಇದರಂತೆ, ಎಚ್.ಕೆ ಪಾಟೀಲ್, ಶಿವಾನಂದ ಪಾಟೀಲ್, ಕೆ.ಎಚ್ ಮುನಿಯಪ್ಪ, ಆರ್.ಬಿ ತಿಮ್ಮಾಪುರ್ ಸೇರಿದಂತೆ ಕೆಲವು ಹಿರಿಯರನ್ನು ಕೈಬಿಡುವ ಸಾಧ್ಯತೆ ಇದೆ. ಕಾನೂನು ಸಚಿವರಾಗಿದ್ದ ಎಚ್.ಕೆ ಪಾಟೀಲ್ ಸ್ಪೀಕರ್ ಆಗುವ ಸಾಧ್ಯತೆ ಇದೆ. ಕಳೆದ ಸರ್ಕಾರದಲ್ಲಿ ಸ್ಪೀಕರ್ ಆಗಿದ್ದ ಯುಟಿ ಖಾದರ್ ಸಚಿವರಾಗಲಿದ್ದಾರೆ. ಎರಡನೇ ಹಂತದಲ್ಲಿ ಹೆಚ್ಚಿನ ಹೊಸಬರಿಗೆ ಅವಕಾಶ ಸಿಗುವ ಸಾಧ್ಯತೆಯಿದೆ.
ಶಾಸಕಾಂಗ ಪಕ್ಷದ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಯಾವುದೇ ಚರ್ಚೆಯಾಗಿಲ್ಲ ಎನ್ನುವ ಮಾಹಿತಿ ಮೂಲಗಳಿಂದ ತಿಳಿದುಬಂದಿದೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm