ಬ್ರೇಕಿಂಗ್ ನ್ಯೂಸ್
03-06-26 01:30 pm HK News Staffer ಕರ್ನಾಟಕ
ಬೆಂಗಳೂರು, ಜೂನ್ 3: ದೊಡ್ಡಾಲಹಳ್ಳಿಯ ಜಮೀನ್ದಾರಿ ಕುಟುಂಬದ ಡಿಕೆ ಶಿವಕುಮಾರ್ ರಾಜ್ಯಭಾರಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದು ಸಂಜೆ 4.05ಕ್ಕೆ ರಾಜಭವನದಲ್ಲಿ ಹಾಕಿರುವ ಅದ್ದೂರಿ ವೇದಿಕೆಯಲ್ಲಿ ಡಿಕೆ ಶಿವಕುಮಾರ್ ಮತ್ತು 12 ಮಂದಿ ಹಿರಿಯ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಐದು ದಿನಗಳ ಕಾಲ ಅಳೆದು ತೂಗಿ ಸದ್ಯಕ್ಕೆ ಹಿರಿಯರನ್ನು ಮಾತ್ರ ಸಂಪುಟಕ್ಕೆ ಸೇರಿಸಿಕೊಳ್ಳಲು ಪಟ್ಟಿ ಅಂತಿಮಗೊಳಿಸಲಾಗಿದೆ. ಮೊದಲ ಹಂತದಲ್ಲಿ 10ರಿಂದ 12 ಜನರ ಪಟ್ಟಿಗೆ ಕಾಂಗ್ರೆಸ್ ವರಿಷ್ಠರು ಅಧಿಕೃತ ಮುದ್ರೆ ಒತ್ತಿದ್ದಾರೆ. ಅವರೆಲ್ಲರೂ ಡಿ.ಕೆ.ಶಿವಕುಮಾರ್ ಜತೆಗೇ ಬುಧವಾರ ಸಂಜೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ವೇಳೆ, ಎಐಸಿಸಿ ಮಟ್ಟದ ನಾಯಕರು, ಕಾಂಗ್ರೆಸ್ ಆಡಳಿತ ಇರುವ ರಾಜ್ಯಗಳ ಮುಖ್ಯಮಂತ್ರಿಗಳು ಉಪಸ್ಥಿತಿ ಇರಲಿದ್ದಾರೆ.
ಈ ಪಟ್ಟಿಯಲ್ಲಿ ನಿರೀಕ್ಷೆಯಂತೆ ಮೇಲ್ಮನೆ ಸದಸ್ಯ ಹಾಗೂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸೇರಿದಂತೆ ಹಿರಿಯ ಶಾಸಕರಿಗೆ ಮಣೆ ಹಾಕಲಾಗಿದ್ದು, ಹನ್ನೊಂದು ಜನರ ಪೈಕಿ ಯುಟಿ ಖಾದರ್ ಸೇರಿ ಮೂವರು ಮಾತ್ರ ಹೊಸದಾಗಿ ಸೇರ್ಪಡೆಯಾಗಿದ್ದಾರೆ. ಸಿದ್ದರಾಮಯ್ಯ ಟೀಮ್ ಸೂಚಿಸಿರುವ 12 ಜನರ ಪಟ್ಟಿಯಲ್ಲಿ ಬಹುತೇಕರನ್ನು ಸೇರಿಸಿಕೊಳ್ಳಲು ಹೈಕಮಾಂಡ್ ಓಕೆ ಮಾಡಿದೆ. ಆಮೂಲಕ ಡಿ.ಕೆ. ಶಿವಕುಮಾರ್ ಸಂಪುಟದಲ್ಲಿ ಅಹಿಂದ ಛಾಪು ಎದ್ದು ಕಾಣಲಿದೆ.
ಪುತ್ರನ ಸೇರ್ಪಡೆ, ಹಿಂದಿದ್ದವರೇ ಮುಂದುವರಿಕೆ, ಅಹಿಂದ ಛಾಪು ಈ ಎಲ್ಲ ಲೆಕ್ಕಾಚಾರಗಳನ್ನು ನೋಡಿದಾಗ, ಹೈಕಮಾಂಡ್ ಮನವೊಲಿಸುವಲ್ಲಿ ಸಿದ್ದರಾಮಯ್ಯ ಭಾಗಶಃ ಯಶಸ್ವಿಯಾಗಿರುವುದು ಕಂಡುಬರುತ್ತದೆ. ಸಚಿವ ಸ್ಥಾನಕ್ಕೆ ಅಂತಿಮಗೊಳಿಸಿದ ಹೆಸರಿನಲ್ಲೇ ಇಬ್ಬರು ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್‌ನಲ್ಲೂ ಇದ್ದಾರೆ. ಸತೀಶ್ ಜಾರಕಿಹೊಳಿಗೆ ಕೆಪಿಸಿಸಿ ಹೊಣೆ ಹೊತ್ತುಕೊಳ್ಳಲು ಹೈಕಮಾಂಡ್ ಒತ್ತಡ ಹೇರಿದೆ. ಆದರೆ ಸಚಿವ ಸ್ಥಾನ ಬಿಟ್ಟು ಕೆಪಿಸಿಸಿ ಅಧ್ಯಕ್ಷ ಮಾತ್ರಕ್ಕೆ ಉಳಿಯಲು ಜಾರಕಿಹೊಳಿ ಒಪ್ಪಿಗೆ ನೀಡಿಲ್ಲ. ಇತ್ತ ಸಿದ್ದರಾಮಯ್ಯ ಮೂವರು ಡಿಸಿಎಂ ಸೃಷ್ಟಿಗೆ ಸಲಹೆ ಮಾಡಿದ್ದರೆ, ಡಿಕೆಶಿ ಅದಕ್ಕೆ ಒಪ್ಪಿಗೆ ನೀಡಿಲ್ಲ. ಕೊನೆಗೆ, ಹಿರಿಯ ಸಚಿವ ಡಾ.ಜಿ. ಪರಮೇಶ್ವರ್ ಅವರಿಗೆ ಮಾತ್ರ ಉಪ ಮುಖ್ಯಮಂತ್ರಿ ಸ್ಥಾನ ನೀಡುವುದೆಂದು ಒಮ್ಮತದ ನಿರ್ಧಾರಕ್ಕೆ ಬರಲಾಗಿದೆ.
ಡಿ.ಕೆ. ಶಿವಕುಮಾರ್ (ಮುಖ್ಯಮಂತ್ರಿ), ಡಾ.ಜಿ. ಪರಮೇಶ್ವರ್, ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್, ಕೆ.ಎಚ್.ಮುನಿಯಪ್ಪ, ಸತೀಶ ಜಾರಕಿಹೊಳಿ, ರಾಮಲಿಂಗಾರೆಡ್ಡಿ, ಬಿ.ಕೆ.ಹರಿಪ್ರಸಾದ್, ಯು.ಟಿ.ಖಾದರ್, ಪ್ರಿಯಾಂಕ್ ಖರ್ಗೆ, ಕೃಷ್ಣ ಬೈರೇಗೌಡ, ಯತೀಂದ್ರ ಸಿದ್ದರಾಮಯ್ಯ ಪ್ತಮಾಣವಚನ ಸ್ವೀಕರಿಸುವವರ ಪಟ್ಟಿಯಲ್ಲಿ ಇದ್ದಾರೆ ಎನ್ನುವುದು ಖರೆ ಆಗಿದೆ. ಆದರೆ ಕೊನೆ ಕ್ಷಣದಲ್ಲಿ ಬದಲಾವಣೆ ಆದರೂ ಆಗಬಹುದು.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm