ಬ್ರೇಕಿಂಗ್ ನ್ಯೂಸ್
05-06-26 10:29 am HK News Staffer ಕರ್ನಾಟಕ
ಬೆಂಗಳೂರು, ಜೂ.05: ಖಾತೆ ಹಂಚಿಕೆಯಾದ ಬೆನ್ನಲ್ಲೇ ತೀವ್ರ ಅಸಮಾಧಾನ ಸ್ಫೋಟಗೊಂಡಿದ್ದು, ಹಿರಿಯ ನಾಯಕ ಹಾಗೂ ಸಚಿವ ರಾಮಲಿಂಗಾರೆಡ್ಡಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡದಿದ್ದಕ್ಕೆ ಬೇಸರಗೊಂಡ ರಾಮಲಿಂಗಾರೆಡ್ಡಿ ಅವ್ರು ಕಚೇರಿಗೆ ಆಗಮಿಸಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ್ದು, ಸುದ್ದಿಗೋಷ್ಠಿ ನಡೆಸಿ ರಾಜೀನಾಮೆ ಘೋಷಣೆ ಮಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತಾಡಿದ ರಾಮಲಿಂಗಾರೆಡ್ಡಿ , ನಾನು 1973 ರಲ್ಲಿ ವಿದ್ಯಾರ್ಥಿ ನಾಯಕನಾಗಿ ರಾಜಕೀಯಕ್ಕೆ ಬಂದೆ. ವೀರಪ್ಪ ಮೊಯ್ಲಿ ನನಗೆ ಕರೆದು ಟಿಕೆಟ್ ಕೊಟ್ರು. ಆರು ಬಾರಿ ಸಚಿವನಾಗಿ ಕೆಲಸ ಮಾಡಿದ್ದೇನೆ. ಯಾರ ಬಳಿಯೂ ಇಂಥಹುದೇ ಖಾತೆ ಕೊಡಿ ಅಂತ ಲಾಬಿ ಮಾಡಿಲ್ಲ. ಅವರೇ ಎರಡು ಬಾರಿ ಕರೆದಿ ಬೆಂಗಳೂರು ಅಭಿವೃದ್ದಿ ಕೊಡ್ತೀವಿ ಅಂತ ಹೇಳಿ ಈಗ ಕೊಡಲಿಲ್ಲ. ಈ ವಿಚಾರಕ್ಕೆ ಬೇಸರವಾಗಿ ಈ ನಿರ್ಧಾರ ತೆಗೆದುಕೊಂಡಿರೋದಾಗಿ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.
ಸಿಎಂ ಆಗಿ ಪ್ರಮಾಣವಚನ ಮಾಡುವ ಹಿಂದಿನ ದಿನವೇ ಡಿಕೆ ಅವರನ್ನ ಹೋಗಿ ಭೇಟಿ ಮಾಡಿದ್ದೆ. ನಾನು ಯಾರಿಗೂ ಮಂತ್ರಿ ಮಾಡಿ ಅಂತ ಕೇಳಿಲ್ಲ. ಆದ್ರೆ ಅವರೇ ಕರೆದು ಬೆಂಗಳೂರು ಖಾತೆ ಕೊಡ್ತೀನಿ ಅಂದವರು ಇದೀಗ ಮಾತು ತಪ್ಪಿದ್ದಾರೆ ಎಂದು ರಾಮಲಿಂಗಾರೆಡ್ಡಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಗುರುವಾರ ರಾತ್ರಿ ಸಚಿವರಿಗೆ ಖಾತೆ ಅಧಿಕೃತ ಹಂಚಿಕೆಯಾದ ಹಿನ್ನೆಲೆಯಲ್ಲಿ ರಾಮಲಿಂಗಾ ರೆಡ್ಡಿ ಅವರು ಸಿಎಂ ಡಿಕೆ ಶಿವಕುಮಾರ್ ಅವರಿಗೆ ಫೋನ್ ಕರೆ ಮಾಡಿ ಮಾತುಕತೆ ನಡೆಸಿದ್ದಾರೆ. ಸಿಎಂಗೆ ಕರೆ ಮಾಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ. ರಾಮಲಿಂಗಾ ರೆಡ್ಡಿ ಅವರನ್ನು ಈ ಸಂದರ್ಭದಲ್ಲಿ ಸಮಾಧಾನ ಪಡಿಸಿದ ಡಿಕೆ ಶಿವಕುಮಾರ್, ಈ ಬಗ್ಗೆ ಎಐಸಿಸಿ ನಾಯಕರ ಜೊತೆಗೆ ಮಾತುಕತೆ ನಡೆಸಿದ್ದೇನೆ. ಆದರೆ ಅವರು ಖಾತೆ ಬದಲಾವಣೆಗೆ ಒಪ್ಪಿಲ್ಲ ಎಂದು ಸಮಜಾಯಿಷಿ ನೀಡಿದ್ದಾರೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm