ಬ್ರೇಕಿಂಗ್ ನ್ಯೂಸ್
18-06-26 07:15 pm HK News Staffer ಕರ್ನಾಟಕ
ಬೆಂಗಳೂರು, ಜೂನ್ 18: ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸಿದ್ದು ಐವರು ಅಭ್ಯರ್ಥಿಗಳು ನಿರೀಕ್ಷೆ ಮೀರಿದ ಗೆಲುವು ದಾಖಲಿಸಿದ್ದಾರೆ.
ಚುನಾವಣೆಯಲ್ಲಿ ಮೈತ್ರಿ ಪಕ್ಷದ ಬಿಜೆಪಿ ಮತ್ತು ಜೆಡಿಎಸ್ ಶಾಸಕರೇ ಕಾಂಗ್ರೆಸ್ ಪರವಾಗಿ ಮತ ಚಲಾಯಿಸಿದ್ದಾರೆ. ಬಿಜೆಪಿಯಿಂದ 3-4 ಶಾಸಕರು ಮತ್ತು ಜೆಡಿಎಸ್ ನಿಂದ 6-7 ಶಾಸಕರು ಕಾಂಗ್ರೆಸ್ ಪರವಾಗಿ ಮತ ಚಲಾಯಿಸಿದ್ದಾರೆಂಬ ಮಾಹಿತಿ ಲಭ್ಯವಾಗಿದೆ. ಆಮೂಲಕ ಮೈತ್ರಿ ಪಕ್ಷದ ನಾಯಕರು ತೀವ್ರ ಮುಖಭಂಗ ಅನುಭವಿಸಿದ್ದಾರೆ.
ಕಾಂಗ್ರೆಸ್ 135, ಬಿಜೆಪಿ 62 ಮತ್ತು ಜೆಡಿಎಸ್ 18 ಶಾಸಕರನ್ನು ಹೊಂದಿತ್ತು. ಈ ಪೈಕಿ ಬಿಜೆಪಿ ಅಭ್ಯರ್ಥಿಗಳಾದ ರಘು ಕೌಟಿಲ್ಯ(29) ಮತ್ತು ಲಿಂಗರಾಜ ಪಾಟೀಲ್ ಪ್ರಯಾಸದ ಗೆಲುವು ಪಡೆದಿದ್ದಾರೆ. ಬಿಜೆಪಿ ಸ್ಪಷ್ಟ ಮತಗಳನ್ನು ಹೊಂದಿದ್ದರೂ, ಲಿಂಗರಾಜ್ 27 (ಗೆಲುವಿನ ಗೆರೆ 28) ಮತಗಳನ್ನಷ್ಟೆ ಗಳಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ಗೋವಿಂದರಾಜ್ ಕೇವಲ 14 ಮತಗಳನ್ನು ಪಡೆದಿದ್ದಾರೆ. ಇದೇ ವೇಳೆ, ಕಾಂಗ್ರೆಸಿನ ವಿನಯ್ ಕಾರ್ತಿಕ್ 32 ಮತಗಳನ್ನು ಪಡೆದಿದ್ದಾರೆ. ಪಿವಿ ಮೋಹನ್ 29, ಇತರ ಕಾಂಗ್ರೆಸ್ ಅಭ್ಯರ್ಥಿಗಳು ತಲಾ 30 ಮತಗಳನ್ನು ಗಳಿಸಿದ್ದಾರೆಂದು ತಿಳಿದುಬಂದಿದೆ.
ಒಟ್ಟು 222 ಶಾಸಕರಲ್ಲಿ 221 ಮತಗಳು ಸಿಂಧುವಾಗಿತ್ತು. ಕಾಂಗ್ರೆಸ್ ಐದನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಅತಿ ಹೆಚ್ಚು ಮತಗಳನ್ನು ಪಡೆದಿರುವುದು ವಿಶೇಷ. ಬಿಜೆಪಿಯಲ್ಲಿ ಉಚ್ಚಾಟಿತ ಶಾಸಕರಲ್ಲದೆ, ನಾಲ್ಕು ಮಂದಿ ಅಡ್ಡ ಮತದಾನ ಮಾಡಿರುವುದು ರಾಜ್ಯ ಬಿಜೆಪಿ ಪಾಲಿಗೆ ಎಚ್ಚರಿಕೆ ಕರೆಗಂಟೆಯಾಗಿದೆ. ಈ ಫಲಿತಾಂಶ ಬಿಜೆಪಿ- ಜೆಡಿಎಸ್ ಮೈತ್ರಿಗೆ ದೊಡ್ಡ ಹಿನ್ನಡೆಯಾಗಿದ್ದು ಇದರ ಪರಿಣಾಮ ಮುಂದಿನ ದಿನಗಳಲ್ಲಿ ವ್ಯಕ್ತವಾಗಲಿದೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm