ಬ್ರೇಕಿಂಗ್ ನ್ಯೂಸ್
18-06-26 09:57 pm HK News Staffer ಕರ್ನಾಟಕ
ಧಾರವಾಡ, ಜೂನ್ 18: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ನಟ ಪ್ರಕಾಶ್ ರಾಜ್ ನೀಡಿರುವ ಹೇಳಿಕೆಗಳ ವಿರುದ್ಧ ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧಾರವಾಡದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಪ್ರಕಾಶ್ ರಾಜ್ ಭಾವಚಿತ್ರ ಹರಿದು ಪ್ರತಿಭಟನೆ ನಡೆಸಿ, ಧರ್ಮಸ್ಥಳದ ಹೆಸರಿಗೆ ಧಕ್ಕೆ ತರುವ ಪ್ರಯತ್ನ ನಡೆದಿದೆ ಎಂದು ಆರೋಪಿಸಿದರು.
ಚಿನ್ನಯ್ಯ ಸಲ್ಲಿಸಿರುವ ರಿಟ್ ಅರ್ಜಿಯಲ್ಲಿ ಪ್ರಕಾಶ್ ರಾಜ್ ಹೆಸರು ಉಲ್ಲೇಖವಾಗಿರುವುದನ್ನು ಪ್ರಸ್ತಾಪಿಸಿದ ಮುತಾಲಿಕ್, “ಪ್ರಕಾಶ್ ರಾಜ್ ಸ್ವತಃ ಚಿನ್ನಯ್ಯ ಜೊತೆ ಸಂಪರ್ಕದಲ್ಲಿದ್ದ ವಿಚಾರವನ್ನು ಒಪ್ಪಿಕೊಂಡಿದ್ದಾರೆ. ಎಸ್‌ಐಟಿ ಮುಖ್ಯಸ್ಥ ಪ್ರಣಬ್ ಮೊಹಂತಿ ಅವರನ್ನು ಭೇಟಿಯಾಗಿ ಮಾಹಿತಿ ನೀಡಿದ್ದೇನೆ ಎಂದೂ ಹೇಳಿದ್ದಾರೆ. ಹೀಗಾಗಿ ಈ ಪ್ರಕರಣದಲ್ಲಿ ಅವರ ಪಾತ್ರದ ಕುರಿತು ಸಮಗ್ರ ತನಿಖೆ ನಡೆಸಿ, ಅಗತ್ಯವಿದ್ದರೆ ತಕ್ಷಣ ಬಂಧಿಸಬೇಕು” ಎಂದು ಆಗ್ರಹಿಸಿದರು.
ಧರ್ಮಸ್ಥಳವು ಶಿಕ್ಷಣ, ಆರೋಗ್ಯ, ಅನ್ನದಾನ ಹಾಗೂ ಸಮಾಜಮುಖಿ ಕಾರ್ಯಗಳ ಮೂಲಕ ದೇಶಕ್ಕೆ ಮಾದರಿಯಾಗಿದೆ. ಇಂತಹ ಪುಣ್ಯಕ್ಷೇತ್ರದ ಹೆಸರನ್ನು ಕೆಡಿಸುವ ಪ್ರಯತ್ನ ನಡೆದಿದೆ. ಈ ಷಡ್ಯಂತ್ರದ ಹಿಂದಿನ ಸತ್ಯ ಹೊರಬರಬೇಕು. ಚಿನ್ನಯ್ಯ ಮತ್ತು ಪ್ರಕಾಶ್ ರಾಜ್ ನಡುವೆ ಏನು ಸಂಬಂಧ ಎಂಬುದನ್ನು ಎಸ್‌ಐಟಿ ತನಿಖೆ ಮಾಡಬೇಕು ಎಂದು ಮುತಾಲಿಕ್ ಹೇಳಿದರು.
ಇದೇ ವೇಳೆ ಪ್ರಕಾಶ್ ರಾಜ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, “ನೀವು ಬಹುಭಾಷಾ ನಟರಾಗಿರಬಹುದು. ಆದರೆ ಹಿಂದೂಗಳು ಮತ್ತು ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ರೀತಿಯಲ್ಲಿ ಮಾತನಾಡಬೇಡಿ” ಎಂದು ಎಚ್ಚರಿಕೆ ನೀಡಿದರು.
ಧರ್ಮಸ್ಥಳ ಚರಿತ್ರೆ ವಧೆ ಮಾಡುವ ಉದ್ದೇಶದಿಂದಲೇ ಪ್ರಕಾಶ್ ರೈ ಬುರುಡೆ ಗ್ಯಾಂಗ್ ಗೆ ಬೆಂಬಲಿಸಿದ್ದಾರೆ. ರೈ ಅವರೇ ಧನ ಸಹಾಯ ಮಾಡಿ ಈ ಗ್ಯಾಂಗ್ ನಡೆಸುತ್ತಿದ್ದಾರೆ ಎಂದು ಶ್ರೀ ರಾಮ ಸೇನಾ ಮುಖಂಡ ಪ್ರಮೋದ್ ಮುತಾಲಿಕ್ ವಾಗ್ದಾಳಿ ನಡೆಸಿದರು.
ಪ್ರಿಯಾಂಕ್ ಖರ್ಗೆ ವಿರುದ್ಧ ಕಿಡಿ ;
ಆರ್ ಎಸ್‌ಎಸ್ ನಂತಹ ಬೃಹತ್ ಸಂಘಟನೆ ಹಾಗೂ ಹಿಂದೂ ಧರ್ಮದ ಕುರಿತು ಮಾತನಾಡುವಾಗ ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರದಿಂದ ಇರಬೇಕು. ಆರ್‌ಎಸ್‌ಎಸ್‌ನ ಸಾಂವಿಧಾನಿಕ ಮಾನ್ಯತೆ, ನೋಂದಣಿ ವಿವರಗಳು ಮತ್ತು ದೇಣಿಗೆಯ ಪಾರದರ್ಶಕತೆ ಬಗ್ಗೆ ಪ್ರಶ್ನಿಸಿ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿರುವುದು ರಾಜಕೀಯ ಪ್ರೇರಿತ ಎಂದು ವಾಗ್ದಾಳಿ ನಡೆಸಿದರು.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm