ಬ್ರೇಕಿಂಗ್ ನ್ಯೂಸ್
20-06-26 01:33 pm HK News Staffer ಕರ್ನಾಟಕ
ಬೆಂಗಳೂರು, ಜೂನ್ 20: ರಾಜ್ಯ ಸರಕಾರ ಟೌನ್ ಶಿಪ್ ನೆಪದಲ್ಲಿ ಬಿಡದಿ ಮತ್ತು ಹಾರೋಹಳ್ಳಿ ಹೋಬಳಿಯ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿ, ಜೆಡಿಎಸ್ ನಿಯೋಗವು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮತ್ತು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು. ಭೂಸ್ವಾಧೀನ ಪ್ರಕ್ರಿಯೆಯನ್ನು ಕೂಡಲೇ ಕೈ ಬಿಡಬೇಕೆಂದು ಒತ್ತಾಯಿಸಿತು.
ಜೆಡಿಎಸ್ ಪಕ್ಷದ ಗ್ರೇಟರ್ ಬೆಂಗಳೂರು ಅಧ್ಯಕ್ಷರಾದ ಹೆಚ್.ಎಂ. ರಮೇಶ್ ಗೌಡ ಅವರ ನೇತೃತ್ವದಲ್ಲಿ ಮುಖ್ಯ ಕಾರ್ಯದರ್ಶಿ ಅವರನ್ನು ಭೇಟಿಯಾದ ಪಕ್ಷದ ನಿಯೋಗವು, ಸರಕಾರ ಮೊದಲ ಹಂತದಲ್ಲಿ ಸುಮಾರು 498 ಎಕರೆಗೂ ಹೆಚ್ಚು ಫಲವತ್ತಾದ ಭೂಮಿಯನ್ನು ಕಿತ್ತುಕೊಳ್ಳುತ್ತಿದ್ದು, ಈ ಪೈಕಿ 614 ಅಂದರೆ ಶೇ. 81 ರಷ್ಟು ರೈತರು ಸಣ್ಣ ಮತ್ತು ಅತೀ ಸಣ್ಣ ಹಿಡುವಳಿದಾರರಾಗಿದ್ದು, ಸುಮಾರು 750 ಕುಟುಂಬಗಳು ಬೀದಿಪಾಲಾಗುತ್ತಿವೆ ಎಂದು ಮಾಹಿತಿ ನೀಡಿದರು.
ಬಿಡದಿ ಭಾಗದಲ್ಲಿ ನೀರಾವರಿ ಮತ್ತು ಕೃಷಿಯೋಗ್ಯ ಫಲವತ್ತಾದ ಭೂಮಿ, ರಿಯಲ್ ಎಸ್ಟೇಟ್ ಉದ್ದೇಶದ ಟೌನ್ ಶಿಪ್ ಯೋಜನೆಗೆ ಕಸಿದುಕೊಳ್ಳುವುದು ಅಕ್ಷ್ಯಮ್ಯ. ರೈತ ವಿರೋಧಿ ಟೌನ್ ಶಿಪ್ ಯೋಜನೆಯನ್ನು ಸರಕಾರ ಸ್ಥಗಿತಗೊಳಿಸಬೇಕು ಎಂದು ಮುಖ್ಯ ಕಾರ್ಯದರ್ಶಿಗಳಿಗೆ ದೂರನ್ನು ಸಲ್ಲಿಸಿತು.
ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಹೆಚ್.ಎಂ. ರಮೇಶ್ ಗೌಡ, ಈಗಾಗಲೇ ಮೊದಲ ಹಂತದ ಭೂಸ್ವಾಧೀನದ ನೋಟಿಫಿಕೇಶನ್ ಹೊರಡಿಸಿರುವ ರಾಜ್ಯ ಸರ್ಕಾರವು ಸಂಪೂರ್ಣ ರೈತ ವಿರೋಧಿ ನಿಲುವು ತಳೆದಿದೆ. ಮುಂದಿನ ತಿಂಗಳು ಬೃಹತ್ ಪ್ರಮಾಣದಲ್ಲಿ ಭೂಸ್ವಾಧೀನ ವಿಸ್ತರಿಸಲು ಹೊರಟಿರುವ ಸರ್ಕಾರದ ನಿಲುವು ಹಾಗೂ ಭೂಸ್ವಾಧೀನ ಯೋಜನೆಯನ್ನು ಕೂಡಲೇ ಕೈ ಬಿಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಮನವಿ ಪತ್ರವನ್ನು ಮುಖ್ಯ ಕಾರ್ಯದರ್ಶಿಗಳಿಗೆ ಸಲ್ಲಿಸಿದ್ದೇವೆ ಎಂದು ತಿಳಿಸಿದರು.
ಸರ್ಕಾರ ಭೂಮಿಯನ್ನು ಕಸಿದುಕೊಳ್ಳುತ್ತಿರುವ ಭಾಗವು ಹೈನುಗಾರಿಕೆಯ ಸಮೃದ್ಧ ಜಾಗವಾಗಿದ್ದು, ಮಾಸಿಕ ಸುಮಾರು 6 ಲಕ್ಷಕ್ಕೂ ಹೆಚ್ಚು ಲೀಟರ್ ಹಾಲನ್ನು ಬೆಂಗಳೂರು ಡೇರಿಗೆ ಪೂರೈಕೆ ಮಾಡುತ್ತಿದೆ. ಭೂಮಿ ರಿಯಲ್ ಎಸ್ಟೇಟ್ ಕುಳಗಳ ಪಾಲಾದರೆ ಅಷ್ಟೂ ಹಾಲಿನ ಉತ್ಪಾದನೆ ನಿಂತು ಹೋಗಲಿದೆ ಎಂದು ಕಳವಳ ವ್ಯಕ್ತಪಡಿಸಿದರು.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm