ಬ್ರೇಕಿಂಗ್ ನ್ಯೂಸ್
24-06-26 05:55 pm HK News Staffer ಕರ್ನಾಟಕ
ಬೆಂಗಳೂರು, ಜೂನ್ 24: ರಾಜ್ಯ ಸರ್ಕಾರದ ಮಹತ್ವದ ಗೃಹಲಕ್ಷ್ಮೀ ಯೋಜನೆಯ ಅನುದಾನ ಮೃತಪಟ್ಟವರಿಗೂ ಹೋಗುತ್ತಿದೆ ಎನ್ನುವ ಸುದ್ದಿಯ ಬೆನ್ನಲ್ಲೇ, ಹಣ ಹಂಚಿಕೆಯಲ್ಲಿ ಭಾರೀ ಎಡವಟ್ಟು ಆಗಿರುವುದು ಬೆಳಕಿಗೆ ಬಂದಿದೆ. ಸರ್ಕಾರದ ಸಿಎಜಿ ವರದಿಯಲ್ಲಿ ಈ ಲೋಪ ಬಹಿರಂಗವಾಗಿದ್ದು, ಎರಡು ವರ್ಷಗಳ ಅವಧಿಯಲ್ಲಿ ಸುಮಾರು 75,000 ಕೋಟಿ ರು. ವಿತರಣೆಯಾಗಿದ್ದು ಸಾವಿರಾರು ಕೋಟಿ ವ್ಯತ್ಯಯ ಉಂಟಾಗಿರುವ ಬಗ್ಗೆ ಪ್ರಶ್ನೆ ಕೇಳಿಬಂದಿದೆ.
ಸಿಎಜಿ ಡೇಟಾ ಅನಾಲಿಟಿಕ್ಸ್ ವಿಭಾಗವು ನಡೆಸಿದ ವಿಶೇಷ ಆಡಿಟ್ನಲ್ಲಿ ಈ ಅಂಶಗಳು ಪತ್ತೆಯಾಗಿದ್ದು, ಸಾವಿರಾರು ಜನರಿಗೆ ನಿಯಮಬಾಹಿರವಾಗಿ ಹಣ ಸಂದಾಯವಾಗಿರುವುದು ಪತ್ತೆಯಾಗಿದೆ. ಆಡಿಟ್ ವರದಿ ಪ್ರಕಾರ ಸುಮಾರು 19,020 ಫಲಾನುಭವಿಗಳು ಒಂದೇ ಬ್ಯಾಂಕ್ ಖಾತೆಗೆ ಅಟ್ಯಾಚ್ ಆಗಿದ್ದಾರೆ. ಒಬ್ಬ ಫಲಾನುಭವಿಗೆ ಒಂದು ಖಾತೆ ಎನ್ನುವ ನಿಯಮವಿದ್ದರೂ, ಈ ಪ್ರಮಾಣದ ಹಣ ಒಂದೇ ಖಾತೆಯೊಂದಿಗೆ ಜೋಡಣೆಯಾಗಿದ್ದು ಹೇಗೆ ಮತ್ತು ಈ ಬಗ್ಗೆ ಇಲಾಖೆ ಏಕೆ ಕ್ರಮ ವಹಿಸಿಲ್ಲ ಎಂಬ ಪ್ರಶ್ನೆ ಎದುರಾಗಿದೆ.
ಇದರೊಂದಿಗೆ 23,262 ಫಲಾನುಭವಿಗಳಿಗೆ ಬ್ಯಾಂಕ್ ಖಾತೆಯೇ ಇಲ್ಲದಿದ್ದರೂ ಅವರ ಹೆಸರಿಯಲ್ಲಿ 46.52 ಕೋಟಿ ರುಪಾಯಿ ಹಣ ಸಂದಾಯವಾಗಿದೆ. ಬ್ಯಾಂಕ್ ಖಾತೆ ಇಲ್ಲದಿದ್ದಾಗ ಡಿಬಿಟಿ ಮೂಲಕ ಹಣ ವರ್ಗಾವಣೆ ಹೇಗೆ ಸಾಧ್ಯ? ಇದು ತಾಂತ್ರಿಕ ಸಮಸ್ಯೆಯೋ ಅಥವಾ ವ್ಯವಸ್ಥಿತ ಭ್ರಷ್ಟಾಚಾರವೋ ಎನ್ನುವ ಅನುಮಾನ ಶುರುವಾಗಿದೆ. ಈ ಗಂಭೀರ ಲೋಪಗಳು ಕಾಣಿಸಿದ ಬೆನ್ನಲ್ಲೇ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಮಾಹಿತಿ ನೀಡುವಂತೆ ಸಿಎಜಿ ವಿವರಣೆ ಕೇಳಿದ್ದರೂ, ಸೂಕ್ತ ಮಾಹಿತಿ ನೀಡಿಲ್ಲ ಎನ್ನುವ ಆರೋಪ ಕೇಳಿಬಂದಿದೆ. ಮಾಹಿತಿ ನೀಡದೇ ಇರುವ ಬಗ್ಗೆಯೂ ಸಿಎಜಿ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.
ಪಲಾನುಭವಿ ಯೋಜನೆಯಡಿ ಈವರೆಗೆ ಒಟ್ಟು 30 ಕಂತು ಪಾವತಿಯಾಗಿದ್ದು, ಇದೇ ಫಲಾನುಭವಿಗಳಿಗೆ ಕೆಲವು ನಿರ್ದಿಷ್ಟ ತಿಂಗಳುಗಳಲ್ಲಿ ಸುಮಾರು 1.80 ಕೋಟಿ ಮೊತ್ತವನ್ನು 8,995 ಖಾತೆಗಳಿಗೆ ಪುನಃ ಪಾವತಿ ಮಾಡಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಯೋಜನೆಗೆ ಒಳಪಟ್ಟಿರುವ ಫಲಾನುಭವಿಗಳು ಪದೇ ಪದೇ ಬ್ಯಾಂಕ್ ಖಾತೆಗಳನ್ನು ಬದಲಾಯಿಸುತ್ತಿದ್ದು, ಇಂತಹ 10,06,308 ದಾಖಲೆಗಳು ಪತ್ತೆಯಾಗಿದೆ. ರದ್ದುಪಡಿಸಲಾದ ಫಲಾನುಭವಿಗಳ ವಿವರ, ಗುರುತಿನ ಚೀಟಿ, ರದ್ದುಪಡಿಸಿದ ದಿನಾಂಕ ಮತ್ತು ಕಾರಣಗಳನ್ನು ನೀಡಲು ಇಲಾಖೆ ವಿಫಲವಾಗಿದೆ ಎಂದು ಸಿಎಜಿ ಉಲ್ಲೇಖಿಸಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಲ್ದಾದ ಜೋಶಿ, ಗೃಹಲಕ್ಷ್ಮಿ ಯೋಜನೆ ಕಳ್ಳಾಟವನ್ನು ಸಿಎಜಿ ವರದಿಯೇ ಬಿಚ್ಚಿಟ್ಟಿದೆ. ಜನರ ಹಣವವನ್ನು ಸರ್ಕಾರದ ಹೆಸರಲ್ಲಿ ಹೇಗೆ ರಾಜಾರೋಷವಾಗಿ ಲೂಟಿ ಮಾಡಲಾಗುತ್ತಿದೆ ಎಂಬುದಕ್ಕಿದು ಸ್ಪಷ್ಟ ನಿದರ್ಶನ. ಗೃಹಲಕ್ಷ್ಮಿ ಯೋಜನೆಯಲ್ಲಿ 19,020 ಫಲಾನುಭವಿಗಳಿಗೆ ಕೇವಲ ಒಂದೇ ಒಂದು ಬ್ಯಾಂಕ್ ಖಾತೆ ಜೋಡಿಸಿ, ಜಂಟಿಯಾಗಿ ಕೋಟಿ ಕೋಟಿ ಹಣ ವರ್ಗಾವಣೆ ಮಾಡಿರುವುದು ಕಾಂಗ್ರೆಸ್ ಸರಕಾರದ ದುರಾಡಳಿತದ ಪರಮಾವಧಿ. ಯಾವುದೇ ನೀತಿ, ನಿಯಮಗಳನ್ನು ರಚಿಸಿಕೊಳ್ಳದೇ ಅವೈಜ್ಞಾನಿಕವಾಗಿ ಗ್ಯಾರಂಟಿಗಳನ್ನು ತಂದು ಇದೀಗ ಇಡೀ ರಾಜ್ಯವನ್ನೇ ದಿವಾಳಿಯತ್ತ ಕೊಂಡೊಯ್ಯುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm