ಬ್ರೇಕಿಂಗ್ ನ್ಯೂಸ್
09-07-26 02:56 pm HK News Staffer ಕರ್ನಾಟಕ
ಬೆಂಗಳೂರು, ಜುಲೈ 9: ಮುಂದಿನ ಸುತ್ತಿನ ಸಚಿವ ಸಂಪುಟ ವಿಸ್ತರಣೆಯಾದರೆ ಕಾಂಗ್ರೆಸ್ ಸರ್ಕಾರ ಸ್ವಲ್ಪಮಟ್ಟಿಗೆ ಅಲುಗಾಡಬಹುದು. ಅದರ ಕಾವು 2-3 ದಿನಗಳ ವರೆಗೆ ಇರಬಹುದು. ಬೇರೇನೂ ಆಗುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಸಂಪುಟ ವಿಸ್ತರಣೆಯಾದರೆ ಸರ್ಕಾರದ ಬುಡ ಅಲ್ಲಾಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೀಡಿದ್ದ ಹೇಳಿಕೆ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಆಗಸ್ಟ್ ವೇಳೆಗೆ ವಿಸ್ತರಣೆಯಾಗುವ ಸಾಧ್ಯತೆಯಿದೆ. ಆಗ ಸ್ವಲ್ಪ ಮಟ್ಟಿಗೆ ಅಲುಗಾಡುತ್ತೆ, ಆದ್ರೆ ಹೆಚ್ಚೇನೂ ಆಗಲ್ಲ ಎಂದಿದ್ದಾರೆ. ಹೆಚ್ಚೆಂದ್ರೆ ಎರಡು ಮೂರು ದಿನ ಅಲ್ಲಾಡಬಹುದು, ಆಮೇಲೆ ಎಲ್ಲವೂ ಸರಿ ಹೋಗುತ್ತದೆ ಎಂದಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲೂ ಮೂವರು ಸಿಎಂಗಳಾಗುತ್ತಾರೆ ಎಂಬುದು ಸರಿಯಲ್ಲ. ಡಿ.ಕೆ.ಶಿವಕುಮಾರ್ ಅವರೇ ಮುಂದುವರೆಯುತ್ತಾರೆ. ನಮ್ಮ ಸರಕಾರ ಗಟ್ಟಿಯಾಗಿದೆ ಎಂದು ಹೇಳಿದರು. ಸಂಪುಟ ವಿಸ್ತರಣೆ ವಿಳಂಬ ವಿಚಾರದಲ್ಲಿ ನಾವು ಏನೂ ಮಾಡಲು ಆಗುವುದಿಲ್ಲ. ವಿಸ್ತರಣೆ ಮಾಡುವ ವರೆಗೆ ಕಾಯಲೇಬೇಕು. ಈಗಾಗಲೇ ಒಂದು ತಿಂಗಳು ತಡವಾಗಿದೆ ಎಂದರು.
ಉಳಿದ 20 ಸ್ಥಾನಗಳನ್ನು ಭರ್ತಿ ಮಾಡುವಾಗ ಜಾತಿ ಮತ್ತು ಪ್ರಾದೇಶಿಕ ಸಮೀಕರಣಗಳನ್ನು ಪರಿಗಣಿಸಲು ಪಕ್ಷ ಮುಂದಾಗಿದೆ. ಆದರೆ ಹೆಚ್ಚಿನ ಶಾಸಕರು ಸಚಿವ ಸ್ಥಾನಕ್ಕಾಗಿ ಲಾಬಿ ಮಾಡುತ್ತಿರುವುದು ವಿಸ್ತರಣೆ ವಿಳಂಬಕ್ಕೆ ಕಾರಣವಾಗಿದೆ. ಸಿದ್ದರಾಮಯ್ಯ ಸಂಪುಟದಲ್ಲಿದ್ದ ಬಹುತೇಕರನ್ನು ಬಿಟ್ಟು ಹೊಸಬರಿಗೆ ಅವಕಾಶ ನೀಡಲು ಡಿಕೆಶಿ ಉತ್ಸುಕರಾಗಿದ್ದಾರೆ. ಆದರೆ ಈ ನಡೆಯಿಂದ ಸಿದ್ದರಾಮಯ್ಯ ಬೆಂಬಲಿಗರು ಯಾವ ನಡೆ ತೋರುತ್ತಾರೆಂಬ ಕುತೂಹಲ ಇದೆ. 224 ಸದಸ್ಯ ಬಲ ಇರುವ ರಾಜ್ಯ ವಿಧಾನಸಭೆಯಲ್ಲಿ ಗರಿಷ್ಠ 34 ಸಚಿವರನ್ನು ಮಾಡಲು ಅವಕಾಶ ಇದೆ. ಸದ್ಯಕ್ಕೆ 13 ಸಚಿವರನ್ನು ಮಾತ್ರ ನೇಮಕ ಮಾಡಿದ್ದು ಹೆಚ್ಚಿನ ಇಲಾಖೆಗಳು ಸಚಿವರಿಲ್ಲದೆ ಬಿಕೋ ಎನ್ನುವಂತಾಗಿದೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm