ಬ್ರೇಕಿಂಗ್ ನ್ಯೂಸ್
22-07-26 06:00 pm HK News Staffer ಕರ್ನಾಟಕ
ನವದೆಹಲಿ, , ಜು.22: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆಗೆ ಸಂಬಂಧಿಸಿದ ಮಹತ್ವದ ಬೆಳವಣಿಗೆಯಲ್ಲಿ, ಸುಪ್ರೀಂ ಕೋರ್ಟ್ ಮರು ತನಿಖೆಯ ಅಗತ್ಯವನ್ನು ಒಪ್ಪಿಕೊಂಡಿದ್ದು, ಯಾವ ಮಾದರಿಯ ತನಿಖೆ ನಡೆಸಬೇಕು ಎಂಬ ಕುರಿತು ಅಂತಿಮ ಆದೇಶವನ್ನು ಕಾಯ್ದಿರಿಸಿದೆ.
ಸೌಜನ್ಯ ಅವರ ತಾಯಿ ಕುಸುಮಾವತಿ ಗೌಡ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಸಂಜಯ್ ಕುಮಾರ್ ನೇತೃತ್ವದ ದ್ವಿಸದಸ್ಯ ಪೀಠ ನಡೆಸಿತು. ವಿಚಾರಣೆ ವೇಳೆ ಸಿಬಿಐ ತನಿಖೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ನ್ಯಾಯಪೀಠ, ತನಿಖಾಧಿಕಾರಿಯೇ ಘಟನಾ ಸ್ಥಳಕ್ಕೆ ಭೇಟಿ ನೀಡದಿರುವುದನ್ನು ಪ್ರಶ್ನಿಸಿ ಸಿಬಿಐ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿತು.
"14 ವರ್ಷ ಕಳೆದರೂ ಸಮರ್ಪಕ ತನಿಖೆಯಾಗಿಲ್ಲ. ಸಾಕ್ಷ್ಯಗಳಿಗೆ ಸೂಕ್ತ ಭದ್ರತೆ ಒದಗಿಸಬೇಕು. ಅಂತಿಮ ಆದೇಶದ ಬಳಿಕ ಮಧ್ಯಂತರ ವರದಿಯನ್ನೂ ಕೇಳುತ್ತೇವೆ. ಎಸ್‌ಐಟಿ ರಚನೆಯ ಬಗ್ಗೆ ನಾವು ನಿರ್ಧಾರ ಕೈಗೊಳ್ಳುತ್ತೇವೆ," ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿತು.
ಪ್ರಕರಣದ ಮರು ತನಿಖೆಯನ್ನು ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ನಡೆಸುವಂತೆ ಸೌಜನ್ಯ ಅವರ ತಾಯಿ ಮನವಿ ಸಲ್ಲಿಸಿದ್ದು, ಮತ್ತೊಂದೆಡೆ ಎಸ್‌ಐಟಿ ತನಿಖೆಗೆ ಸಂಪೂರ್ಣ ಸಹಕಾರ ನೀಡಲು ರಾಜ್ಯ ಸರ್ಕಾರ ಸಿದ್ಧವಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದೆ.
ವಿಚಾರಣೆ ವೇಳೆ, ರಾಜ್ಯ ಸರ್ಕಾರ ಎಸ್‌ಐಟಿ ರಚನೆಗೆ ಸಮ್ಮತಿ ಸೂಚಿಸಿರುವುದನ್ನು ದಾಖಲಿಸಿಕೊಂಡ ನ್ಯಾಯಪೀಠ, ಅಂತಿಮವಾಗಿ ಯಾವ ತನಿಖಾ ಸಂಸ್ಥೆ ಅಥವಾ ಯಾವ ಮಾದರಿಯ ತನಿಖೆ ನಡೆಯಬೇಕು ಎಂಬುದನ್ನು ಆದೇಶದಲ್ಲಿ ಸ್ಪಷ್ಟಪಡಿಸಲಾಗುವುದು ಎಂದು ತಿಳಿಸಿದೆ.
ಸಿಬಿಐ ವಿರುದ್ಧ ಕಿಡಿಕಾರಿದ ಸುಪ್ರೀಂ;
ವಿಚಾರಣೆ ವೇಳೆ ಸಿಬಿಐ ಕಾರ್ಯವೈಖರಿಯನ್ನು ತೀವ್ರವಾಗಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್, "14 ವರ್ಷಗಳಿಂದ ಸಮರ್ಪಕ ತನಿಖೆ ನಡೆದಿಲ್ಲ. ಸಿಐಡಿ ವರದಿಯನ್ನು ಕೇವಲ ಭಾಷಾಂತರ ಮಾಡಲಾಗಿದೆ. ತನಿಖಾಧಿಕಾರಿಯೇ ಘಟನಾ ಸ್ಥಳಕ್ಕೆ ಹೋಗಿಲ್ಲ. ಕೆಳ ನ್ಯಾಯಾಲಯದಲ್ಲಿ ಇನ್ನೂ ಕೆಲವರ ವಿರುದ್ಧ ತನಿಖೆ ನಡೆಸಬೇಕು ಎಂದು ಇದೇ ಸಿಬಿಐ ಹೇಳಿತ್ತು. ಈಗ ಸಿಬ್ಬಂದಿ ಹಾಗೂ ಹಣಕಾಸಿನ ಕೊರತೆಯನ್ನು ನೆಪವಾಗಿ ಹೇಳುವುದು ಸಮಂಜಸವಲ್ಲ," ಎಂದು ಕಿಡಿಕಾರಿತು.
ಈ ಮೂಲಕ, ದೇಶದ ಗಮನ ಸೆಳೆದಿರುವ ಸೌಜನ್ಯ ಪ್ರಕರಣದಲ್ಲಿ ಮರು ತನಿಖೆಗೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ ತೋರಿಸಿದ್ದು, ಅಂತಿಮ ಆದೇಶದ ಮೇಲೆ ಮುಂದಿನ ತನಿಖೆಯ ದಿಕ್ಕು ನಿರ್ಧಾರವಾಗಲಿದೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm