ಬ್ರೇಕಿಂಗ್ ನ್ಯೂಸ್
05-08-26 10:56 pm mangalore ಕರ್ನಾಟಕ
ಬೆಂಗಳೂರು , ಆ.5: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದೆ. ಸಚಿವ ಸ್ಥಾನ ಹಂಚಿಕೆ ವೇಳೆ 'ಪೇಮೆಂಟ್ ಸೀಟ್' ನಡೆದಿದೆ ಎಂಬ ಆರೋಪಗಳ ನಡುವೆಯೇ, ಮಾಜಿ ಸಚಿವ ಆರ್. ಬಿ. ತಿಮ್ಮಾಪುರ ಮತ್ತು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್. ಜಿ. ನಂಜಯ್ಯನಮಠ ಅವರದ್ದು ಎನ್ನಲಾದ ಆಡಿಯೋ ವೈರಲ್ ಆಗಿದ್ದು, ಆಡಳಿತ ಪಕ್ಷದೊಳಗಿನ ಭಿನ್ನಮತ ಬಹಿರಂಗವಾಗುವಂತೆ ಮಾಡಿದೆ. ಈ ಆಡಿಯೋವನ್ನು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಬಿಡುಗಡೆ ಮಾಡಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಆದರೆ, ಈ ಆರೋಪಗಳನ್ನು ಆರ್.ಬಿ. ತಿಮ್ಮಾಪುರ ತಳ್ಳಿಹಾಕಿದ್ದಾರೆ.
ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, "ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸ್ಥಾನಗಳನ್ನು ಕೋಟಿ ಕೋಟಿ ರೂಪಾಯಿಗೆ ಹರಾಜು ಹಾಕಲಾಗಿದೆ. ಹೆಚ್ಚು ಹಣ ಕೊಟ್ಟವರಿಗೆ ಹಾಗೂ ಕಳಂಕಿತರಿಗೆ ಸಚಿವ ಸ್ಥಾನ ನೀಡಲಾಗಿದೆ. ನಾವು ಈ ಹಿಂದೆ ಮಾಡಿದ್ದ ಆರೋಪಗಳಿಗೆ ಈ ವೈರಲ್ ಆಡಿಯೋ ಸಾಕ್ಷಿಯಾಗಿದೆ" ಎಂದು ವಾಗ್ದಾಳಿ ನಡೆಸಿದರು.
ವಾಲ್ಮೀಕಿ ನಿಗಮ ಹಗರಣದಲ್ಲಿ ಆರೋಪಿಯಾಗಿದ್ದ ಬಿ. ನಾಗೇಂದ್ರ ಅವರಿಗೆ ಮತ್ತೆ ಸಚಿವ ಸ್ಥಾನ ನೀಡಿರುವುದನ್ನು ಪ್ರಶ್ನಿಸಿದ ಅವರು, "ನಾಗೇಂದ್ರ ಎಲ್ಲರ ಹೆಸರನ್ನೂ ಬಹಿರಂಗಪಡಿಸುತ್ತೇನೆ ಎಂದಿದ್ದರಿಂದಲೇ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ. ಇದೀಗ ಕೋರ್ಟ್ ಅವರ ದೆಹಲಿ ಪ್ರವಾಸಕ್ಕೂ ನಿರ್ಬಂಧ ಹೇರಿದೆ. ಇಂತಹ ಕಳಂಕಿತರು ಸಂಪುಟದಲ್ಲಿರಲು ಸಾಧ್ಯವಿಲ್ಲ. ನಾಗೇಂದ್ರ ರಾಜೀನಾಮೆ ನೀಡುವವರೆಗೆ ನಮ್ಮ ಹೋರಾಟ ಮುಂದುವರಿಯಲಿದೆ" ಎಂದು ಎಚ್ಚರಿಕೆ ನೀಡಿದರು.
ವೈರಲ್ ಆಡಿಯೋದಲ್ಲಿ ಏನಿದೆ?
ವೈರಲ್ ಆಗಿರುವ ಸಂಭಾಷಣೆಯಲ್ಲಿ ಸಚಿವ ಸ್ಥಾನ ಹಂಚಿಕೆ ವೇಳೆ 'ಹಣ ನೀಡಿ ಸ್ಥಾನ ಪಡೆದಿದ್ದಾರೆ' ಎಂಬ ಆರೋಪಗಳು ಕೇಳಿಬಂದಿವೆ. ವಿಶೇಷವಾಗಿ, ಬಳ್ಳಾರಿಯ ಶಾಸಕ ಬಿ. ನಾಗೇಂದ್ರ ಅವರಿಗೆ ಪ್ರಕರಣ ಬಾಕಿ ಇದ್ದರೂ ಸಚಿವ ಸ್ಥಾನ ನೀಡಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಲಾಗಿದೆ. ಅಲ್ಲದೆ, ಹಿರಿಯ ನಾಯಕ ಎಚ್.ಕೆ. ಪಾಟೀಲ್ ಅವರಿಗೆ ಸಚಿವ ಸ್ಥಾನ ಸಿಗದೇ ಇರುವುದರ ಬಗ್ಗೆ ಬೇಸರ ವ್ಯಕ್ತಪಡಿಸಿರುವುದರ ಜೊತೆಗೆ, ಉತ್ತರ ಕರ್ನಾಟಕದಲ್ಲಿ ಪಕ್ಷ ಸಂಘಟನೆಗೆ ಶ್ರಮಿಸಿದ ನಾಯಕರನ್ನು ಕಡೆಗಣಿಸಲಾಗಿದೆ ಎಂಬ ಅಭಿಪ್ರಾಯವೂ ಆಡಿಯೋದಲ್ಲಿ ಕೇಳಿಬಂದಿದೆ.
'ಆಡಿಯೋದಲ್ಲಿ ನನ್ನ ಹೆಸರು ಇರಬಹುದು, ಆದರೆ..!
ವೈರಲ್ ಆಡಿಯೋ ಕುರಿತು ಪ್ರತಿಕ್ರಿಯಿಸಿದ ಮಾಜಿ ಸಚಿವ ಆರ್. ಬಿ. ತಿಮ್ಮಾಪುರ, "ಆಡಿಯೋದಲ್ಲಿ ನನ್ನ ಹೆಸರು ಇರಬಹುದು. ಆದರೆ ನಾನು ಆ ರೀತಿಯ ಯಾವುದೇ ಮಾತು ಆಡಿಲ್ಲ. ಹೈಕಮಾಂಡ್ ಅಥವಾ ಮುಖ್ಯಮಂತ್ರಿಯನ್ನು ಗುರಿಯಾಗಿಸಿಕೊಂಡು ಮಾತನಾಡಿಲ್ಲ. ನಮ್ಮ ಜಿಲ್ಲೆಯ ಸಚಿವ ಸ್ಥಾನ ಕುರಿತು ಸಾಮಾನ್ಯ ಚರ್ಚೆ ನಡೆದಿತ್ತು. ವಿಜಯಾನಂದ ಕಾಶಪ್ಪನವರಿಗೆ ಸಚಿವ ಸ್ಥಾನ ಸಿಕ್ಕಿರುವುದಕ್ಕೆ ನನಗೆ ಸಂತೋಷವೇ ಇದೆ" ಎಂದು ಸ್ಪಷ್ಟಪಡಿಸಿದರು.
ಇನ್ನು, "ಯಾವುದೇ ಪ್ರಕರಣದ ಬಗ್ಗೆ ನಾನು ಮಾತನಾಡಿಲ್ಲ. ಎಸ್.ಜಿ. ನಂಜಯ್ಯನಮಠ ಅವರು ಏನು ಮಾತನಾಡಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ನಾನು ತಪ್ಪಾಗಿ ಮಾತನಾಡಿದ್ದರೆ ನೇರವಾಗಿ ನನ್ನನ್ನು ಪ್ರಶ್ನಿಸಿ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಆಡಿಯೋ ಆಧರಿಸಿ ನನ್ನ ವಿರುದ್ಧ ಆರೋಪ ಮಾಡುವುದು ಸರಿಯಲ್ಲ" ಎಂದು ತಿಮ್ಮಾಪುರ ಹೇಳಿದರು.
ರಾಜಕೀಯದಲ್ಲಿ ಆಡಿಯೋ ಸಂಚಲನ
ಸಚಿವ ಸಂಪುಟ ವಿಸ್ತರಣೆ ಬಳಿಕ ವೈರಲ್ ಆಗಿರುವ ಈ ಆಡಿಯೋ ಕಾಂಗ್ರೆಸ್ ಒಳಗಿನ ಅಸಮಾಧಾನವನ್ನು ಮತ್ತೊಮ್ಮೆ ಬಹಿರಂಗಪಡಿಸಿದ್ದು, ಆಡಳಿತ ಪಕ್ಷಕ್ಕೆ ಮುಜುಗರ ಉಂಟುಮಾಡಿದೆ. ಮತ್ತೊಂದೆಡೆ, ಪ್ರತಿಪಕ್ಷ ಬಿಜೆಪಿ ಈ ಆಡಿಯೋವನ್ನು ಅಸ್ತ್ರವನ್ನಾಗಿ ಮಾಡಿಕೊಂಡು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm