ಬ್ರೇಕಿಂಗ್ ನ್ಯೂಸ್
07-08-26 10:42 pm HK News Desk ಕರ್ನಾಟಕ
ಬೆಂಗಳೂರು, ಆ.7: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ವಿಜಯನಗರ ಶಾಸಕ ಎಂ. ಕೃಷ್ಣಪ್ಪ ತಮಗೆ ಸಚಿವ ಸ್ಥಾನ ಕೊಡಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ.
ಕೃಷ್ಣಪ್ಪ ಅವರನ್ನು ಸಮಾಧಾನ ಪಡಿಸಲು ಖುದ್ದು ಮುಖ್ಯಮಂತ್ರಿ ಡಿಕೆ ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಬಿ.ಕೆ. ಹರಿಪ್ರಸಾದ್, ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರೂ ಯಾವುದೇ ಪ್ರಯೋಜನೆ ಆಗಿಲ್ಲ. ಹಲವು ಹುದ್ದೆಗಳನ್ನು ಆಫರ್ ಮಾಡಿದ್ದರೂ, ಅವರು ಯಾವುದನ್ನೂ ಸ್ವೀಕರಿಸದೆ ಸಚಿವ ಸ್ಥಾನವೇ ಬೇಕು ಎಂದು ಪಟ್ಟು ಹಿಡಿದಿದ್ದಾರೆ. ಇದು ಪಕ್ಷಕ್ಕೆ ಡ್ಯಾಮೇಜ್ ಆಗುವ ಸಾಧ್ಯತೆ ಇದೆ.
ಇದೀಗ ಕೃಷ್ಣಪ್ಪ ಅವರನ್ನು ಸಮಾಧಾನ ಪಡಿಸಲು ಒಬ್ಬರು ಸಚಿವ ಸ್ಥಾನ ತ್ಯಾಗ ಮಾಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದು ಹೇಳಲಾಗುತ್ತಿದೆ. ಇದರ ಬೆನ್ನಲ್ಲೇ ಸಚಿವ ಎಚ್.ಸಿ ಬಾಲಕೃಷ್ಣ ಅವರು ನಾನು ರಾಜೀನಾಮೆಗೆ ಸಿದ್ಧ ಎಂದು ಹೇಳಿದ್ದು, ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಮಾಗಡಿ ಶಾಸಕ ಬಾಲಕೃಷ್ಣ ಅವರಿಗೆ ಮೊದಲ ಬಾರಿ ಸಚಿವ ಸ್ಥಾನ ಸಿಕ್ಕಿದ್ದರೂ ರಾಜೀನಾಮೆ ಬಗ್ಗೆ ಮಾತಾಡಿದ್ದಾರೆ. ಪಕ್ಷ ಹೇಳಿದರೆ ತ್ಯಾಗಕ್ಕೆ ಸಿದ್ಧವಿದ್ದೇನೆ ಎಂದು ನೂತನ ಸಚಿವ ಬಾಲಕೃಷ್ಣ ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ಅಸಮಾಧಾನಿತರು ಸಚಿವ ಸ್ಥಾನ ಕೇಳುತ್ತಿರುವುದರಲ್ಲಿ ತಪ್ಪಿಲ್ಲ ಎಂದೂ ಹೇಳಿದ್ದಾರೆ. ಕೆಲವರನ್ನು ಸಮಾಧಾನಪಡಿಸಲಾಗಿದೆ. ಇನ್ನೂ ಕೆಲವರೊಂದಿಗೆ ಸಂಧಾನ ನಡೆಯುತ್ತಿದೆ. ಕೃಷ್ಣಪ್ಪ ಅವರು ಒಕ್ಕಲಿಗರು. ಅವರನ್ನು ಸಂಪುಟದಲ್ಲಿ ಸೇರಿಸಲು ನಾನು ಬೇಕಿದ್ದರೆ ರಾಜೀನಾಮೆಗೆ ಸಿದ್ಧ’ ಎಂದು ಹೇಳಿದ್ದಾರೆ. ಪಕ್ಷ ಹೇಳಿದರೆ ತ್ಯಾಗಕ್ಕೆ ಸಿದ್ಧವಿದ್ದೇನೆ, ನನ್ನ ಸ್ಥಾನ ಅವರಿಗೆ ಕೊಡ್ತಾರೆ ಎಂದರೆ ನನಗೆ ಅಭ್ಯಂತರ ಇಲ್ಲ ಎಂದು ಹೇಳಿದ್ದಾರೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm