ಬ್ರೇಕಿಂಗ್ ನ್ಯೂಸ್
13-08-26 07:14 pm HK News Staffer ಕರ್ನಾಟಕ
ಬೆಂಗಳೂರು, ಆಗಸ್ಟ್ 13: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಸೆಲ್‌ನಲ್ಲಿ ಮೊಬೈಲ್, ಪೆನ್‌ಡ್ರೈವ್ ಸೇರಿದಂತೆ ನಿಷೇಧಿತ ವಸ್ತುಗಳು ಪತ್ತೆಯಾಗಿರುವ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಸಿಸಿಬಿ ದಾಳಿಯಲ್ಲಿ ಜಪ್ತಿಯಾದ ಪೆನ್‌ಡ್ರೈವ್‌ನಲ್ಲಿ 70ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳು ಹಾಗೂ ಸೆಲ್‌ನಲ್ಲಿದ್ದ ಹಾಸಿಗೆಯ ಕೆಳಗೆ ಪತ್ರಿಕೆಗಳಿಂದ ಕತ್ತರಿಸಿಟ್ಟ ನಟಿಯರು ಮತ್ತು ರೂಪದರ್ಶಿಗಳ ಅರೆನಗ್ನ ಚಿತ್ರಗಳು ಪತ್ತೆಯಾಗಿವೆ ಎಂದು ವರದಿಯಾಗಿದೆ.
ಎರಡು ದಿನಗಳ ಹಿಂದೆ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಸಿಸಿಬಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದರು. ಈ ವೇಳೆ ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪ್ರಜ್ವಲ್ ರೇವಣ್ಣ ಅವರ ಸೆಲ್‌ನಲ್ಲಿ ಮೊಬೈಲ್, ಪೆನ್‌ಡ್ರೈವ್, ಮೊಬೈಲ್ ಚಾರ್ಜರ್ ಹಾಗೂ ನೋಟ್‌ಬುಕ್ ಪತ್ತೆಯಾಗಿತ್ತು. ಈ ಬೆಳವಣಿಗೆ ಜೈಲಿನ ಭದ್ರತಾ ವ್ಯವಸ್ಥೆಯ ಮೇಲೆಯೇ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ.
ವರದಿಗಳ ಪ್ರಕಾರ, ಸಿಸಿಬಿ ಅಧಿಕಾರಿಗಳು ವಶಪಡಿಸಿಕೊಂಡ ಪೆನ್‌ಡ್ರೈವ್ ಪರಿಶೀಲಿಸಿದಾಗ ಅದರಲ್ಲಿ 70ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳು ಕಂಡುಬಂದಿವೆ. ಅಲ್ಲದೆ, ಪ್ರಜ್ವಲ್ ಅವರ ಹಾಸಿಗೆಯ ಕೆಳಗೆ ಪತ್ರಿಕೆಗಳಲ್ಲಿ ಪ್ರಕಟವಾಗಿದ್ದ ನಟಿಯರು ಹಾಗೂ ರೂಪದರ್ಶಿಗಳ ಅರೆನಗ್ನ ಚಿತ್ರಗಳನ್ನೂ ಪತ್ತೆಹಚ್ಚಲಾಗಿದೆ ಎನ್ನಲಾಗಿದೆ.
ಮೊಬೈಲ್ ಮತ್ತು ಪೆನ್‌ಡ್ರೈವ್ ಪತ್ತೆಯಾದ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ಹಾಗೂ ಸಹ ಕೈದಿ ಪ್ರತಾಪ್ ರಾಯ್ ವಿರುದ್ಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜೊತೆಗೆ ವಿಶೇಷ ಭದ್ರತಾ ವಿಭಾಗದಲ್ಲಿದ್ದ ಪ್ರಜ್ವಲ್ ಅವರನ್ನು ಸಾಮಾನ್ಯ ಕೈದಿಗಳ ಬ್ಯಾರಕ್‌ಗೆ ಸ್ಥಳಾಂತರಿಸಲಾಗಿದೆ.
ಪತ್ತೆಯಾದ ಮೊಬೈಲ್‌ನ್ನು ಪರಿಶೀಲಿಸಿದಾಗ ಅದರಲ್ಲಿ ಸಾಮಾಜಿಕ ಜಾಲತಾಣಗಳ ಹಲವು ಆ್ಯಪ್‌ಗಳು ಡೌನ್‌ಲೋಡ್ ಮಾಡಿರುವುದು ಬೆಳಕಿಗೆ ಬಂದಿದೆ. ವಿಚಾರಣೆ ವೇಳೆ ಜೈಲಿನಲ್ಲಿದ್ದ ಟಿವಿಗೆ ಪೆನ್‌ಡ್ರೈವ್ ಜೋಡಿಸಿ ಚಲನಚಿತ್ರಗಳನ್ನು ವೀಕ್ಷಿಸುತ್ತಿದ್ದೆವು ಎಂದು ಪ್ರಜ್ವಲ್ ಹಾಗೂ ಪ್ರತಾಪ್ ರಾಯ್ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.
ಅಕ್ರಮ ಚಟುವಟಿಕೆಗಳ ಶಂಕೆಯ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಮಂಗಳವಾರ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ದಿಢೀರ್ ದಾಳಿ ನಡೆಸಿದ್ದರು. ಈ ಕಾರ್ಯಾಚರಣೆಯಲ್ಲಿ ಪ್ರಜ್ವಲ್ ಹಾಗೂ ಪಶ್ಚಿಮ ಬಂಗಾಳ ಮೂಲದ ಪೋಕ್ಸೊ ಪ್ರಕರಣದ ಕೈದಿ ಪ್ರತಾಪ್ ರಾಯ್ ಇದ್ದ ಸೆಲ್‌ನಲ್ಲಿ ಮೊಬೈಲ್, ಪೆನ್‌ಡ್ರೈವ್, ಮೊಬೈಲ್ ಚಾರ್ಜರ್ ಹಾಗೂ ನೋಟ್‌ಬುಕ್ ಪತ್ತೆಯಾಗಿತ್ತು. ಈ ಸಂಬಂಧ ಸಿಸಿಬಿ ಮಾದಕ ವಸ್ತು ದ್ರವ್ಯ ನಿಗ್ರಹ ದಳದ ಇನ್ಸ್‌ಪೆಕ್ಟರ್ ಎಂ.ಎಲ್. ಸುಬ್ರಹ್ಮಣ್ಯ ನೀಡಿದ ದೂರಿನ ಮೇರೆಗೆ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.
ತಮ್ಮ ಮನೆ ಕೆಲಸದಾಳಿಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಪ್ರಜ್ವಲ್ ರೇವಣ್ಣ ಸದ್ಯ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದು, ಪ್ರತಾಪ್ ರಾಯ್ ಅವರೊಂದಿಗೆ ಒಂದೇ ಸೆಲ್‌ನಲ್ಲಿ ಇರಿಸಲಾಗಿತ್ತು.
ಜೈಲು ಸಿಬ್ಬಂದಿಯ ನೆರವಿನ ಶಂಕೆ
ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್ ಜೈಲಿನೊಳಗೆ ಹೇಗೆ ತಲುಪಿತು ಎಂಬ ಪ್ರಶ್ನೆ ತನಿಖೆಯ ಕೇಂದ್ರಬಿಂದುವಾಗಿದೆ. ಜೈಲು ಸಿಬ್ಬಂದಿಯೇ ಮೊಬೈಲ್ ಅನ್ನು ಸೆಲ್‌ಗೆ ತಲುಪಿಸಿ ಬಳಿಕ ವಾಪಸ್ ತೆಗೆದುಕೊಂಡು ಬರುತ್ತಿದ್ದರು ಎಂಬ ಅನುಮಾನ ವ್ಯಕ್ತವಾಗಿದ್ದು, ಇದೇ
ಕಾರಣದಿಂದ ಹಿಂದಿನ ತಪಾಸಣೆಯಲ್ಲಿ ಮೊಬೈಲ್ ಪತ್ತೆಯಾಗಿರಲಿಲ್ಲ ಎಂಬ ಮಾಹಿತಿ ವರದಿಯಾಗಿದೆ.
ಹಾಗಾದರೆ ಪ್ರಜ್ವಲ್ ರೇವಣ್ಣಗೆ ಮೊಬೈಲ್, ಪೆನ್‌ಡ್ರೈವ್ ಕೊಟ್ಟವರು ಯಾರು ಅದರಲ್ಲಿ ಅಶ್ಲೀಲ ವಿಡಿಯೋಗಳು ಹೇಗೆ ಬಂದವು ಎಂಬುದರ ಬಗ್ಗೆ ತನಿಖೆ ಮಾಡಬೇಕಿದೆ. ಈ ಸಂಬಂಧ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಡಿಜಿಪಿ ಅಲೋಕ್ ಕುಮಾರ್ ಅವರು, ಜೈಲು ಸುಪರಿಡೆಂಟ್ಗೆ ನೊಟೀಸ್ ಜಾರಿ ಮಾಡಿದ್ದಾರೆ.
ಸಾಮಾನ್ಯ ಸೆಲ್‌ಗೆ ಶಿಫ್ಟ್, ಲೈಬ್ರರಿ ಕೆಲಸ ಮಾಡುವಂತೆ ತಾಕೀತು ;
ಮೊಬೈಲ್ ಸಿಕ್ಕ ಪ್ರಕರಣ ತೀವ್ರ ಸುದ್ದಿಯಾಗುತ್ತಿದ್ದಂತೆ ಪ್ರಜ್ವಲ್ನ್ನು ವಿಐಪಿಯಿಂದ ಸಮಾನ್ಯಾ ಸಜಾ ಬಂಧಿ ಖೈದಿಗಳ ಸೆಲ್‌ಗೆ ಶಿಫ್ಟ್ ಮಾಡಲಾಗಿದೆ. ವಿಐಪಿ ಸೆಲ್‌ನಲ್ಲಿ ಪ್ರಜ್ವಲ್ ರೇವಣ್ಣ ಹಾಗೂ ಮತ್ತೋರ್ವ ವಿಚಾರಣಾ ಖೈದಿ ಪ್ರತಾಪ್ ರಾಯ್ ಇದ್ದರು. ಪೊಕ್ಸೋ ಕೇಸ್ ನಲ್ಲಿ ಬಂಧಿತ ಪ್ರತಾಪ್ ರಾಯ್, ಪ್ರಜ್ವಲ್ ರೇವಣ್ಣಗೆ ಅಸಿಸ್ಟೆಂಟ್ ರೀತಿ ಇದ್ದ ಎಂದು ತಿಳಿದುಬಂದಿದೆ. ಇದೀಗ ಪ್ರಜ್ವಲ್ 20 ಖೈದಿಗಳ ಜೊತೆ ಒಂದೇ ಟಾಯ್ಲೆಟ್ ಇರೋ ಸೆಲ್ ಗೆ ಶಿಫ್ಟ್ ಆಗಿದ್ದಾರೆ. ಪ್ರಜ್ವಲ್ 20 ಖೈದಿಗಳ ಜೊತೆ ಒಂದೇ ಟಾಯ್ಲೆಟ್ ಬಳಸಬೇಕಿದೆ. ಯೂನಿಫಾರ್ಮ್ ಹಾಕಿ ಲೈಬ್ರರಿ ಕೆಲಸ ಮಾಡಲು ಸೂಚನೆ ನೀಡಲಾಗಿದೆ. ಕಠಿಣ ಶಿಕ್ಷೆ ಹಿನ್ನೆಲೆ ಜೈಲಿನ ಕಡ್ಡಾಯ ಸಮವಸ್ತ್ರ ಧರಿಸಿ ಲೈಬ್ರರಿ ಕೆಲಸ ಮಾಡಲು ತಿಳಿಸಲಾಗಿದೆ.
ಕರ್ತವ್ಯ ಲೋಪ ಎಸಗಿದ ಹಿನ್ನೆಲೆ ಜೈಲಿನ ಅಸಿಸ್ಟೆಂಟ್ ಸೂಪರಿಂಟೆಂಡೆಂಟ್ ಈರಣ್ಣ ರಂಗಾಪುರರನ್ನು ಅಮಾನತುಗೊಳಿಸಲಾಗಿದೆ. ಜೈಲು ಎಸ್.ಪಿ ಅನ್ಶುಕುಮಾರ್ ಗೂ ಡಿಜಿಪಿ ಅಲೋಕ್ ಕುಮಾರ್ ನೋಟಿಸ್ ಜಾರಿ ಮಾಡಿದ್ದು, ಕರ್ತವ್ಯ ಲೋಪಕ್ಕೆ ಕಾರಣ ನೀಡುವಂತೆ ಸೂಚಿಸಿದ್ದಾರೆ.
16-10-26 09:49 pm
HK News Staffer
ಸ್ಟಿಂಗ್ ಆಪರೇಷನ್ ಕೇಸ್ ನಲ್ಲಿ ನನ್ನನ್ನು ಸಿಲುಕಿಸ...
15-10-26 02:30 pm
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
16-10-26 10:28 pm
HK News Desk
ಸಿಎಂ ಡಿಕೆಶಿ ಕುದ್ರೋಳಿ ದಸರಾಕ್ಕೆ ಆಗಮಿಸಿದ್ದಾಗಲೇ ವ...
16-10-26 01:47 pm
MRPL ಗುತ್ತಿಗೆ ಕಾರ್ಮಿಕರಿಗೆ ₹5 ಲಕ್ಷ ಆರೋಗ್ಯ ವಿಮೆ...
15-10-26 10:34 pm
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
16-10-26 03:37 pm
HK News Staffer
ಪಿರಿಯಾಪಟ್ಟಣ ಬಳಿ ಸ್ಲೀಪರ್ ಕೋಚ್ ಬಸ್- ಲಾರಿ ಡಿಕ್ಕಿ...
16-10-26 11:04 am
Mangaluru Valencia Church Priest Fr. Cyprian...
16-10-26 10:27 am
Fr. Cyprian Pinto Posco Case, Mangalore: ಅಪ್ರ...
16-10-26 10:03 am
ಕೇರಳದಿಂದ ಲಾಟರಿ ಟಿಕೆಟ್ ತಂದು ಮಾರಾಟ ; ಪುತ್ತೂರಿನ...
15-10-26 05:06 pm